ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ್ ನವರು ಪ್ರಥಮ ಬಾರಿಗೆ ಕೊಡಮಾಡಿದ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ ನಾಲ್ಕನೇ ಬೃಹತ್ ವೈಜ್ಞಾನಿಕ ಸಮ್ಮೇಳನದಲ್ಲಿ ಹಮ್ಮಿಕೊಂಡಿದ್ದರು. ಈ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು ಮಟ್ಟದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಿಚಾರ ಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಂಜ ವಲಯದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಸಲಾಯಿತು. ಸದ್ರಿ ಕಾರ್ಯಕ್ರಮವನ್ನು ಡಾ|| ದೇವಿಪ್ರಸಾದ್ ಕಾನತ್ತೂರು, ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ ಇವರು ಉದ್ಘಾಟಿಸಿ ಶುಭ ಹಾರೈಸಿದರು.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ಬೆಂಗಳೂರು ವತಿಯಿಂದ ಕೊಡಮಾಡುವ 2024 ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು,ಮೂಡಬಿದಿರೆಯ ವಿದ್ಯಾ ನಗರಿಯ ಹರಿಕಾರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೂವಾರಿ ಡಾ ಮೋಹನ ಆಳ್ವರು ಪ್ರತಿಷ್ಠಿತ “ಜೀವಮಾನ ಸಾಧಕ” -2024” ಪ್ರಶಸ್ತಿಗೆ ಆಯ್ಕೆಯಾದರೆ, ಅಬ್ಬಕ್ಕನ ಕಲಾ ಗ್ಯಾಲರಿಯ ಸ್ಥಾಪಕರು, ವೃತ್ತಿಯಲ್ಲಿ ಉಪನ್ಯಾಸಕರು, ಪ್ರವೃತ್ತಿಯಲ್ಲಿ ಇತಿಹಾಸ, ಜಾನಪದ ತಜ್ಞರು ಹಾಗೂ ಹಲವು ವಿಚಾರಗಳಲ್ಲಿ ತಮ್ಮನ್ನು
ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ವತಿಯಿಂದ ನೀಡುವ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿ ತರಬೇತುದಾರಳು, ಸಂಘಟಕಿ ಹಾಗೂ ಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ.ಅನುರಾಧಾ
ವಿಟ್ಲ: ಆಟವಾಡುತ್ತಿದ್ದ ವೇಳೆ ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಇದೊಂದು ಆತ್ಮಹತ್ಯೆ ಎಂದು ತಿಳಿದು ಬಂದಿದೆ ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೇರಾ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿನಿ ಮಡಲ ನಿವಾಸಿ ಕಿಶೋರ್ ರವರ ಪುತ್ರಿ ತೀರ್ಥಶ್ರೀ (8) ಮೃತಪಟ್ಟ ಬಾಲಕಿ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ವಿಟ್ಲ ಪೊಲೀಸರು ಬಾಲಕಿಯ
ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ. ಮೃತರು ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮವಿಂದು ವಿನೂತನ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಿ ಉತ್ಸವದ ಕಳೆ ಮೇಳೈಸಿದೆ. ಅರೆಭಾಷೆ ಗಡಿನಾಡ ಉತ್ಸವ-2024ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ದೊರಕಿತು. ಕರ್ನಾಟಕ ಅರೆಬಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಸಂಭ್ರಮದಿಂದ ನಡೆಯುತ್ತಿದೆ. ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ ಅದ್ದೂರಿ ಸಮಾರಂಭಕ್ಕೆ
ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವವು ನವೆಂಬರ್ 27ರಿಂದ ಡಿಸೆಂಬರ್ 12ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಶ್ರೀ ದೇವಳದಲ್ಲಿ 2024-25ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವ ಸಂಬಂಧ ನವೆಂಬರ್ 26ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ಇರುವುದರಿಂದ ಭಕ್ತಾಧಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2ಗಂಟೆಯ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶ ಇರುವುದಿಲ್ಲ.ಭಕ್ತಾಧಿಗಳು ಸಹಕರಿಸುವಂತೆ ಶ್ರೀ
ಸುಳ್ಯದ ಬಹುಮುಖ ಪ್ರತಿಭೆ, ಬಹಳಷ್ಟು ಕ್ಷೇತ್ರಗಳಲ್ಲಿ ಸಾಧನೆಗೈದು ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸರ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರನ್ನು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷರಾದ
ಬೆಳ್ಳಾರೆಯ ಹೋಟೆಲೊಂದರಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಅಪಾರ ನಷ್ಟವಾದ ಘಟನೆ ನ.12 ರಂದು ನಡೆದಿದೆ.ಬೆಳ್ಳಾರೆ ಮುಖ್ಯರಸ್ತೆ ಸಮೀಪವಿರುವ ತೃಪ್ತಿ ಹೋಟೆಲ್ ನಲ್ಲಿ ಗ್ಯಾಸ್ ಸ್ಟವ್ ನಿಂದ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹತ್ತಿರವಿದ್ದ ಪ್ರಿಡ್ಜ್ ಸಂಪೂರ್ಣ ಸುಟ್ಟುಹೋಗಿದೆ. ಪ್ರಿಡ್ಜ್ ಮೇಲಿದ್ದ ಎರಡು ಮೊಬೈಲ್ ಹಾಗೂ ಇನ್ನಿತರ ಹಲವು ವಸ್ತುಗಳು ಸುಟ್ಟುಹೋಗಿವೆ. ನೆರೆಕರೆಯ ಅಂಗಡಿಯವರು ಹಾಗೂ ರಿಕ್ಷಾ ಚಾಲಕರು ಮತ್ತಿತರರು ಬೆಂಕಿ ನಂದಿಸಲು ಸಹಕರಿಸಿದ್ದು ಹೆಚ್ಚಿನ



























