ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸ. ಊ. ಹಿ ಪ್ರಾ ಶಾಲೆಕೋಲ್ಚಾರು ಇದರ ಶಾಲಾಭಿವ್ರದ್ದಿ ಸಮಿತಿ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಕೋಲ್ಚಾರು
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಳಪಟ್ಟ ಸ್ಥಳೀಯ ಅಭಯ ಆಂಜನೇಯ ಗುಡಿ ದೇವಸ್ಥಾನದಲ್ಲಿ ಕಳವಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾದ 24 ಗಂಟೆಯೊಳಗೆ ಕಳ್ಳನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಧಾರವಾಡ ಮೂಲದ ವೀರಣ್ಣ ಗೌಡ (26ವ) ಕಳ್ಳತನ ಪ್ರಕರಣದಲ್ಲಿ ಬಂಧಿತನಾದ ಆರೋಪಿ.ದೇಗುಲದ ಪಾರ್ಕಿಂಗ್ ಜಾಗದಲ್ಲಿ ಸುತ್ತಾಡುತ್ತಿದ್ದ ಈತನನ್ನು ಎಸ್.ಐ ಕಾರ್ತಿಕ್.ಕೆ ನೇತೃತ್ವದ ಪೊಲೀಸರ ತಂಡ ಪತ್ತೆ ಹಚ್ಚಿದ್ದಾರೆ. ಜಾಗವೊಂದರ ಬಳಿ
ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ನಮ್ಮೆಲ್ಲಾ ಕನ್ನಡಿಗರ ಮೇಲಿದೆ ಎಂದು ಜನಪದ ಸಂಶೋಧಕ, ಸಾಹಿತಿ ಡಾ. ಸುಂದರ ಕೇನಾಜೆ ಇವರು ಸುಳ್ಯ ತಾಲುಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹೋಬಳಿ ಘಟಕ ಹಾಗು ಸಂಧ್ಯಾರಶ್ಮಿ ಸಾಹಿತ್ಯ ಸಂಘ ನಡೆಸಿದ ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಂಭ್ರಮದಲ್ಲಿ ಉಪನ್ಯಾಸ ನೀಡಿ ಸಂಧ್ಯಾರಶ್ಮಿ ಸಭಾಭವನದಲ್ಲಿ ಮಾತನಾಡಿದರು. ಕನ್ನಡ ಭಾಷೆ ರಾಜಾಶ್ರಯ ಇಲ್ಲದೇ
ಕಡಬ: ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದು ಎರಡು ದಿನ ಕಳೆದರೂ ಅವರು ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಕೋಳಿ ಮಾತ್ರ ಘಟನೆ ನಡೆದ ಸ್ಥಳವನ್ನು ಬಿದ್ದು ಕದಲಿಲ್ಲ. ಸೀತಾರಾಮ ಅವರು ದೀಪಾವಳಿ ಪ್ರಯುಕ್ತ ಎಡಮಂಗಲದ ತನ್ನ ಮನೆಯಲ್ಲಿ ನಡೆಯಲಿದ್ದ ದೈವದ ಹರಕೆಗಾಗಿ ಕೋಡಿಂಬಾಳದಿಂದ ಕೋಳಿ ತೆಗೆದುಕೊಂಡು ಸ್ಕೂಟಿಯಲ್ಲಿ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಬಂದಡ್ಕ ಗ್ರಾಮ ಗೌಡ ಸಮಿತಿ ಕೇರಳ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ -2024 ಅ.27ರಂದು ಬಂದಡ್ಕದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಮಂಟಪ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಮೊದಲು ಮೆರವಣಿಗೆ ನಡೆಯಲಿದ್ದು, ಕಾರ್ಯಕ್ರಮವನ್ನು ಬಂದಡ್ಕದ ಹಿರಿಯ ವರ್ತಕರಾದ ಕೃಷ್ಣಪ್ಪ ಗೌಡ ಕೊಯಿಂಗಾಜೆ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮವನ್ನು ರವಿಪ್ರಸಾದ್ ಇಳಂದಿಲ ನಡೆಸಿಕೊಡಲಿದ್ದಾರೆ.
ಮನುಷ್ಯ ತನ್ನ ಜೀವನದಲ್ಲಿ ಸಮಾಜಕ್ಕೆ ಕಿಂಚಿತ್ ಸೇವೆಯನ್ನು ಮಾಡುವ ಮೂಲಕ ಸಾರ್ಥಕ ಜೀವನವನ್ನು ಕಟ್ಟಿಕೊಳ್ಳಬೇಕು. ರೆಡ್ ಕ್ರಾಸ್ ಸಂಸ್ಥೆ ಬಹಳಷ್ಟು ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದು ಅದರ ದ್ಯೇಯೋದ್ದೇಶವನ್ನು ಅರಿತು, ಸೇವಾ ಮನೋಭಾವದೊಂದಿಗೆ ಪ್ರಾಮಾಣಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳಿ. ಆ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಎಂದು ಸುಳ್ಯದಪ್ರಭಾರ ತಹಶೀಲ್ದಾರರಾದ ಮಂಜುನಾಥ್ ಎಂ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೊರೀಯಲ್
ಸುಳ್ಯ: ರಾತ್ರಿ ಮಲಗಿರುವಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿರುವ ಘಟನೆ ನಡೆದಿರುವುದು ತಿಳಿದು ಬಂದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಭಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.ಗಂಭೀರ ಗಾಯಗೊಂಡ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ (ರಿ), ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಇದರ ನೇತೃತ್ವದಲ್ಲಿ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ “ಸುಳ್ಯ ದಸರಾ -2024 ರ ಪ್ರಯುಕ್ತ ಮಕ್ಕಳ ದಸರಾ ಇಂದು ಉದ್ಘಾಟನೆ ಗೊಂಡಿತು. ಸುಳ್ಯ ಬಸ್ಸು ನಿಲ್ದಾಣದ ಬಳಿಯಿಂದ ತಾಲೂಕಿನ ವಿವಿಧ ಭಾಗದ ಮಕ್ಕಳಿಂದ ಅದ್ದೂರಿ ಮೆರವಣಿಗೆಯೊಂದಿಗೆ ಪ್ರಾರಂಭ ಗೊಂಡು ಶ್ರೀ ಶಾರದಾಂಬ
ಸುಳ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನೂತನ ಕಾರ್ಯಕ್ರಮಾಧಿಕಾರಿಯಾಗಿ ಎರಡನೇ ಬಾರಿಗೆ ಡಾ. ಅನುರಾಧಾ ಕುರುಂಜಿಯವರು ಅಧಿಕಾರ ಸ್ವೀಕರಿಸಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಅನುರಾಧಾ ಕುರುಂಜಿಯವರು ಈ ಹಿಂದೆ 2012-22ರವರೆಗೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕವನ್ನು ಮುನ್ನಡೆಸಿ 2019 ರಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ



























