ಹಾಸನ ಜಿಲ್ಲೆ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.,ಸಿ.ಸಿ ಉಸ್ತುವಾರಿಯಾಗಿ ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್‌ರವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ. ಕ್ಷೆತ್ರದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ವಿಧಾನ ಸಭೆ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಸಂಬಂಧಿಸಿದಂತೆ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಹಿಮಕರ ಎ ಕೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ
ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ವತಿಯಿಂದ ಸುಳ್ಯದ ನರೇಂದ್ರ ವಿಹಾರದಲ್ಲಿ ಮಾಜಿ ಪ್ರಧಾನಿ, ಅಜಾತಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ದಿನವನ್ನು ಆಚರಿಸಲಾಯಿತು. ಈ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಹಾಗೂ ಟ್ರಸ್ಟಿನ ಕೋಶಾಧಿಕಾರಿಗಳಾದ ಎ ವಿ ತೀರ್ಥರಾಮ, ಮಾನ್ಯ ಶಾಸಕರು ಹಾಗೂ ಟ್ರಸ್ಟಿಗಳಾದ ಕು. ಭಾಗೀರಥಿ ಮುರುಳ್ಯ ಮತ್ತು ಭಾರತೀಯ ಜನತಾ ಪಾರ್ಟಿಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಟ್ರಸ್ಟಿಗಳಾದ ವಿನಯ್ ಕುಮಾರ್ ಕಂದಡ್ಕರವರು
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ವನ ಮಹೋತ್ಸವದ ಅಗತ್ಯತೆ, ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು ಚೆಲ್ಲಿದರು. ವೇದಿಕೆಯಲ್ಲಿ ಸ್ಕೌಟ್ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್, ಗೈಡ್ ಶಿಕ್ಷಕಿಯರಾದ
ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು. ನೂತನ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಪುಷ್ಪರಾಜ ಶೆಟ್ಟಿ ನೇತೃತ್ವದ ತಂಡ ಅಧಿಕಾರ ವಹಿಸಿಕೊಂಡರು. ನಿರ್ಗಮನ ಅಧ್ಯಕ್ಷ ದಯಾನಂದ ಕಲ್ನಾರ್, ಕಾರ್ಯದರ್ಶಿ ತೇಜೇಶ್ವರ ಕುಂದಲ್ಪಾಡಿ ಅಧಿಕಾರ ಹಸ್ತಾಂತರಿಸಿದರು. ದ.ಕ.ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಇಂದು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದಯಾನಂದ ಕಲ್ನಾರ್ ವಹಿಸಿದ್ದರು. ಸಭೆಯ ಕಾರ್ಯಕಲಾಪಗಳ ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷತೆಗೆ ಲೋಕೇಶ್ ಪೆರ್ಲಂಪಾಡಿ ಮತ್ತು ಪ್ರಜ್ಞಾ ಎಸ್. ನಾರಾಯಣ್ ಸ್ಪರ್ಧಿಸಿದ್ದರು. ಅಧ್ಯಕ್ಷತೆಗೆ ಚುನಾವಣೆ ನಡೆದು ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಜ್ಞಾ ಎಸ್. ನಾರಾಯಣ್,
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.8ರಂದು ಬೆಳಿಗ್ಗೆ ನಡೆದಿದೆ. ಸಕಲೇಶಪುರ ಮೂಲದ ವಿನಯ ಕುಮಾರ್ ಹಾಗೂ ಮಂಜ ಗಾಯಗೊಂಡ ಲಾರಿ ಚಾಲಕರು. ಇವರಿಬ್ಬರು
ಪಂಜ: ಕಲಾ ಮಂದಿರ್ ಡಾನ್ಸ್ ಕ್ರಿವ್ ಬೆಳ್ಳಾರೆ ಇದರ ವತಿಯಿಂದ ಪಂಜ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನೃತ್ಯ ತರಗತಿಗಳನ್ನು ಉದ್ಘಾಟಿಸಿದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಇವರು”ಮಾನಸಿಕ ಮತ್ತು ಶಾರೀರಿಕ ಆರೋಗ್ಯಕ್ಕೆ ಪೂರಕವಾದ ನೃತ್ಯ ತರಬೇತಿ ತರಗತಿಯಿಂದ ಮಕ್ಕಳಿಗೆ ಪ್ರಯೋಜನವಾಗಲಿ”ಎಂದರು. ಸಭಾಧ್ಯಕ್ಷತೆ ವಹಿಸಿದ್ದ ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ದಿಲೀಪ್
ಸುಳ್ಯ. ಬೆಳ್ಳಾರೆ ಕೆಪಿಸಿಸಿ ಕಾನೂನು ಹಾಗೂ ಮಾಹಿತಿ ಹಕ್ಕುಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಡಾಕ್ಟರ್ ಎ ಜೆ ಅಕ್ರಮ್ ಪಾಷಾರವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಝಕರಿಯ ಜುಮ್ಮಾ ಮಸೀದಿ ಬೆಳ್ಳಾರೆ ಇದರ ಆಡಳಿತ ಸಮಿತಿ ಸದಸ್ಯರಾದ ಹಮೀದ್ ಎಚ್ ಎಂ ಬೆಳ್ಳಾರೆ ಇವರನ್ನು ನೇಮಕ ಮಾಡಲಾಗಿದೆ. ದಿನಾಂಕ 30. 6 .2018 ರಿಂದ ಜಾರಿಗೆ ಬರುವಂತೆ ನೇಮಿಸಿರುವುದಕ್ಕೆ ಎಲ್ಲಾ ರೀತಿಯಿಂದಲೂ ಸಹಕರಿಸಿದ ಪ್ರೋತ್ಸಾಹ ನೀಡಿದ
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ, ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ, ನಡೆದ ಸುಮಾರು ₹1,48,000 ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ ₹ 30,000/- ಸೇರಿ ಒಟ್ಟು ₹1,78,000/- ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಲಾಗಿ, ಪ್ರಸ್ತುತ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ



























