Home ಕರಾವಳಿ Archive by category ಸುಳ್ಯ (Page 2)

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ: ನೆನಪು” ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹಾಗೂ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಹಾಗೂ ಪೊಲೀಸ್ ಇಲಾಖೆ, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವು ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಬೂಮರೆಡ್ಡಿ ಮಾತನಾಡಿ ‘ನಮ್ಮ ದೇಶ ಅತ್ಯಂತ ಹೆಚ್ಚು

ಬಿಜೆಪಿ ಸುಳ್ಯ ಮಂಡಲದಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

ಮಳೆಯಿಂದಾಗಿ ಕೆಟ್ಟು ಹೋಗಿರುವ ರಾಜ್ಯದ ರಸ್ತೆಗಳ ಗುಂಡಿ ಮುಚ್ಚಲು ಕೂಡ ಅನುದಾನ ನೀಡದ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ವತಿಯಿಂದ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಕಾಣಿಯೂರಿನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಳ್ಯ ಶಾಸಕಿ ಕುಮಾರಿ ಭಾಗಿರತಿ ಮುರುಳ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀ ರಾಕೇಶ್ ರೈ ಕೆಡಂಜಿ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ ವಿನಯ್ ಕುಮಾರ್

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ಆಯುರ್ವೇದ ದಿನಾಚರಣೆ

ಸೆ. 23 ರಂದು ಹತ್ತನೇ ಆಯುರ್ವೇದ ದಿನಾಚರಣೆಯ ಅಂಗವಾಗಿ “ಮಾನವ ಮತ್ತು ಪ್ರಕೃತಿಗಾಗಿ ಆಯುರ್ವೇದ” ಎಂಬ ಧ್ಯೇಯ ವಾಕ್ಯ ದೊಂದಿಗೆ ಕಾರ್ಯಕ್ರಮವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಡಾ ರಾಮ್ಮೋಹನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಯುರ್ವೇದದ ಮಹತ್ವದ ಮಾಹಿತಿ ಜನ ಸಾಮಾನ್ಯರಿಗೆ ಅತ್ಯಾವಶ್ಯಕ ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ ವಿ ಯವರು ಮಾತನಾಡಿ

ಡಾ. ಎಂ. ಮೋಹನ ಆಳ್ವ ಅವರಿಗೆ ‘ಕೀರಿಕ್ಕಾಡು ಪ್ರಶಸ್ತಿ ‘

ಸುಳ್ಯ:ದೇಲಂಪಾಡಿ ಬನಾರಿಯ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ವತಿಯಿಂದ ಕವಿ,ಅರ್ಥದಾರಿ, ಯಕ್ಷಗಾನ ಗುರುಕುಲದ ರುವಾರಿ ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಹೆಸರಿನಲ್ಲಿ ಪ್ರತಿವರ್ಷವೂ ನೀಡಲಾಗುತ್ತಿರುವ ಪ್ರತಿಷ್ಠಿತ “ಕೀರಿಕ್ಕಾಡು ಪ್ರಶಸ್ತಿ”ಯನ್ನುಶಿಕ್ಷಣ ಕ್ಷೇತ್ರದ ಮಹಾನ್ ಸಾಧಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರಗಳ ನೇತಾರ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ವಿಶೇಷ ವಿಜ್ಞಾನ ಉಪನ್ಯಾಸ

ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಅಸ್ಟ್ರೋ ಫಿಸಿಕ್ಸ್ (IIA) ಇಲ್ಲಿನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿ ಯಾಗಿರುವ ಕು. ಸವಿತಾ ಎಂ. ಎಸ್, ದೀಪ ಬೆಳಗಿಸಿ ಮತ್ತು ವೈಜ್ಞಾನಿಕವಾಗಿ ರಾಸಾಯನಿಕ ವಸ್ತುಗಳನ್ನು ಬಳಸಿ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ – 2025

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 03ನೇ ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಇದರ ಕಾರ್ಯದರ್ಶಿ ಅಕ್ಷಯ್ ಕೆ ಸಿ ಸಾಂಪ್ರದಾಯಿಕವಾಗಿ ದೀಪ ಬೆಳಗಿ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ: ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ, ಕೋಶಾಧಿಕಾರಿ ಮಿಥುನ್ ಕರ್ಲಪ್ಪಾಡಿ

ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಆಯ್ಕೆಯಾಗಿದ್ದಾರೆ.ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆಯಲ್ಲಿ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಪೂಜಾಶ್ರೀ ವಿತೇಶ್ ಕೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಪದ್ಮನಾಭ ಮುಂಡೋಕಜೆ, ಜೊತೆ ಕಾರ್ಯದರ್ಶಿಯಾಗಿ ಜೆ.ಕೆ.ರೈ, ಕೋಶಾಧಿಕಾರಿಯಾಗಿ ಮಿಥುನ್ ಕರ್ಲಪ್ಪಾಡಿ ಆಯ್ಕೆಯಾದರು.

ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ”

ಸುಳ್ಯ ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ” ಅಗಸ್ಟ್ 30ನೇ ಶನಿವಾರದಂದು ನಡೆಯಿತು. ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಶೈಕ್ಷಣಿಕ ಸಾಧನೆ ಜೊತೆಗೆ ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಕೊಳ್ಳಬೇಕೆಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ

ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಹಳ್ಳಿ ಹುಡುಗಿ

ಸುಳ್ಯ: ದೂರವಾಣಿ ಸಂಪರ್ಕವಿಲ್ಲದ ಗ್ರಾಮೀಣ ಭಾಗದಿಂದ ಸುಮಾರು 10 ಕಿಲೋಮೀಟರ್ ದೂರದ ಹಳ್ಳಿಯ ಪ್ರತಿಭೆ ಇಂದು ತಾಲೂಕಿನ ಹೆಮ್ಮೆಯಾಗಿ ಹೊರಹೊಮ್ಮಿದ್ದಾಳೆ. ಹೌದು ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಬೆದ್ರುಪಣೆ ದಿ.ನಾಗಪ್ಪ ಎಂ ಎ ಹಾಗೂ ಜಾನಕಿ ದಂಪತಿಗಳ ಹಿರಿಯ ಪುತ್ರಿ ಶುಶ್ಮಿತ ಇದೀಗ ಎಸ್ ಎಸ್ ಸಿ ಜಿ ಡಿ ಪರಿಕ್ಷೆಯಲ್ಲಿ ತೇರ್ಗಡೆಯಾಗಿ ತಾಲೂಕಿಗೆ ಹೆಮ್ಮೆಯಾಗಿದ್ದಾಳೆ. ಈಕೆ ಪ್ರಾಥಮಿಕ ಶಿಕ್ಷಣದ ಸಂದರ್ಭದಲ್ಲಿ ದೇಶ ಕಾಯುವ ಸೈನಿಕ ವೃತ್ತಿಯ ಕಡೆಗೆ ಆಕರ್ಷಿತಲಾಗಿ