ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಬದನೆ ಎಂಬಲ್ಲಿ ಪಂಚಾಯತ್ ರಸ್ತೆಗೆ ಸಂಪರ್ಕಿಸುವ ರಸ್ತೆಯನ್ನು ವೆಂಕಪ್ಪ ಪೂಜಾರಿ ಮತ್ತು ರೂಪೇಶ್ ಕುಮಾರ್ ಅವರು ಬಂದ್ ಮಾಡಿರುವ ಬಗ್ಗೆ ಇಚ್ಲಂಪಾಡಿ ಗ್ರಾಮದ ಬದನೆ ನಿವಾಸಿ ಶ್ರೀನಿವಾಸ್ ಪೂಜಾರಿಯವರು, ಪುತ್ತೂರು ಸಹಾಯಕ ಆಯುಕ್ತರು, ಕಡಬ ತಹಶೀಲ್ದಾರರು, ಗ್ರಾಮ ಪಂಚಾಯತ್ ಹಾಗೂ ಪೋಲಿಸ್ ಇಲಾಖೆಗೆ ದೂರು ನೀಡಿದ್ದಾರೆ. ಕಡಬ
ಕರ್ನಾಟಕ ಸರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಪೌಂಡೇಶನ್ ಮತ್ತು ಡೆಲ್ ಟೆಕ್ನಲಾಜಿ ಸಹಭಾಗಿತ್ವದಲ್ಲಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿ ಆಯ್ಕೆಯಾದ ಸುಳ್ಯ ತಾಲೂಕಿನ ಎಂಟು ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಿಗೆ ಕೊಡುಗೆಯಾಗಿ ನೀಡುವ ಲ್ಯಾಪ್‍ಟಾಪ್, ಮೋನಿಟರ್‍ಗಳನ್ನು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಹಸ್ತಾಂತರಿಸಿದರು. ಸುಳ್ಯ ತಾಲೂಕು
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆಯಾಗಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಪದ್ಮನಾಭ ಅರಂಬೂರು,ಪ್ರಧಾನ ಕಾರ್ಯದರ್ಶಿಯಾಗಿ ತೇಜೇಶ್ವರ ಕುಂದಲ್ಪಾಡಿ, ಜೊತೆ ಕಾರ್ಯದರ್ಶಿಯಾಗಿ ಜಯದೀಪ್ ಕುದ್ಕುಳಿ, ಕೋಶಾಧಿಕಾರಿಯಾಗಿ ಪ್ರಜ್ಞಾ ಎಸ್.ನಾರಾಯಣ್ ಆಯ್ಕೆಯಾದರು. ನಿರ್ದೇಶಕರಾಗಿ ಜೆ.ಕೆ.ರೈ, ಕೃಷ್ಣ ಬೆಟ್ಟ,
ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಸುಳ್ಯದ ಅಡ್ಕಾರಿನಲ್ಲಿ ಸಂಭವಿಸಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರು ಎಂದು ಗುರುತಿಸಲಾಗಿದೆ. ಹುಣಸೂರು ಕಡೆಯಿಂದ ಬಂದ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಚಲಿಸಿ ರಸ್ತೆ ಬದಿ ನಿಂತಿದ್ದ ನಾಲ್ವರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪಕ್ಕದಲ್ಲಿ
ಸುಬ್ರಹ್ಮಣ್ಯ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಿತು. ಭಾರತದ ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿಯ ಚಂದ್ರಯಾನ 3 ನೌಕೆಯು ಚಂದ್ರನ
ತುಳುನಾಡಿನ ಜಾನಪದ ಕ್ರೀಡೆಗಳಲ್ಲೊಂದಾದ ಚೆನ್ನೆಮಣೆ ಆಟ ಇಂದು ನಶಿಸಿ ಹೋಗುವ ಹಂತದಲ್ಲಿದೆ. ಚೆನ್ನೆಮಣೆ ಆಟದ ಬಗ್ಗೆ ಹಿರಿಯರು, ಪೋಷಕರು ಇಂದಿನ ಮಕ್ಕಳಿಗೆ ತಿಳಿಸುವ ಜೊತೆಗೆ ಆಟವನ್ನು ಕಲಿಸುವ ಮೂಲಕ ಚೆನ್ನೆಮಣೆ ಆಟದ ಬಗ್ಗೆ ಅರಿವು ಮೂಡಿಸುವ ಅಗತ್ಯ ಇದೆ ಎಂದು ಸರಕಾರಿ ನೌಕರರ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ಹೇಳಿದರು. ಅವರು ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸುಳ್ಯ ತಾಲೂಕು ಶಾಲಾ ಶಿಕ್ಷಣ ಇಲಾಖೆ, ಸಿ.ಸಿ.ಆರ್.ಟಿ. ಗ್ರೂಪ್ ಸುಳ್ಯ
ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಸುಳ್ಯ ಘಟಕ, ಸುಳ್ಯ ತಾಲೂಕು ಸಮಿತಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಹಾಗೂ ಗ್ರಾಮೀಣ ಕ್ರೀಡಾಕೂಟ, ಅಭಿನಂದನಾ ಸಮಾರಂಭ, ಸಾಧಕರಿಗೆ ಸನ್ಮಾನ, ಪದಗ್ರಹಣ ಸಮಾರಂಭ ಹಾಗೂ ಸಂಸ್ಕೃತಿಕ ಕಾರ್ಯಕ್ರಮ ಕೆವಿಜಿ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು. ನಂತರ ವಿವಿಧ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು.
ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರು ಸಾರ್ವಜನಿಕರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿ ಹಸನ್ಮುಖಿ ಸೇವೆ ನೀಡಿದಾಗ ಮಾತ್ರ ನಾವು ಮಾಡುವ ಸೇವೆ ಸಾರ್ಥಕವಾಗುತ್ತದೆ ಎಂದು ಕಡಬದಿಂದ ಗುಂಡ್ಲುಪೇಟೆಗೆ ವರ್ಗಾವಣೆಗೊಂಡ ತಹಸೀಲ್ದಾರ್ ಟಿ.ರಮೇಶ್ ಬಾಬು ಹೇಳಿದರು. ಅವರು ಶನಿವಾರ ಕಡಬ ತಾಲೂಕು ಆಡಳಿತ ಸೌಧದಲ್ಲಿ ಇಲ್ಲಿ ಸಿಬ್ಬಂದಿಗಳು ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಂದಾಯ ಇಲಾಖೆಗೆ ಸಾರ್ವಜನಿಕರು ತಮ್ಮ
ಸುಳ್ಯ: ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಅವರಿಗೆ ವರ್ಗಾವಣೆಯಾಗಿದೆ. ಅವರಿಗೆ ಉಡುಪಿ ಸಿ.ಇ.ಎನ್. ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಕಳೆದ ಮೂರೂವರೆ ವರ್ಷಗಳಿಂದ ನವೀನ್ ಚಂದ್ರ ಅವರು ಸುಳ್ಯ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರ ರಾಜ್ಯದಲ್ಲಿ 211 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಆ.1ರಂದು ಆದೇಶ ಮಾಡಿದೆ ಎಂದು ತಿಳಿದು ಬಂದಿದೆ.
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಸ್ಮೃತಿ ದಿನ ಹಾಗೂ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಶಿಬಿರವನ್ನು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ರಾಧಾಕೃಷ್ಣ ರೈ, ಬೂಡಿಯಾರು, ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಗುರುದತ್ ನಾಯಕ್, ಕೃಷ್ಣ, ರಾಕೇಶ್ ರೈ ಕೆಡೆಂಜಿ



























