ಸುಳ್ಯ: ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಅವರಿಗೆ ವರ್ಗಾವಣೆಯಾಗಿದೆ.ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆಯನ್ವಯ ಅಧಿಕಾರಿಗಳ ವರ್ಗಾವಣೆಯಾಗುತ್ತಿದ್ದು ಸುಳ್ಯ ಸರ್ಕಲ್ ಇನ್‌ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರಿಗೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಗ್ರಾಮಾಂತರ ವೃತ್ತಕ್ಕೆವರ್ಗಾವಣೆಯಾಗಿದೆ.ಸುಳ್ಯ ವೃತ್ತ
ಕಡಬ ತಾಲೂಕಿನ ಕೊಯಿಲ ಗ್ರಾಮದ ಏಣಿತಡ್ಕ ಎಂಬಲ್ಲಿ ಕುಮಾರಾಧಾರ ನದಿಯಲ್ಲಿ ತೆಪ್ಪದಲ್ಲಿ ಸಾಗುತ್ತಿದ್ದಾಗ ಆಕಸ್ಮಿಕವಾಗಿ ತೆಪ್ಪ ಮಗುಚಿ ಮಹಿಳೆಯೊಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಏಣಿತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬವರ ಪತ್ನಿ ಗೀತಾ (47) ಎಂದು ಗುರುತಿಸಲಾಗಿದೆ. ದನಗಳಿಗೆ ಮೇವಿನ ಹುಲ್ಲು ತರುವುದಕ್ಕಾಗಿ ಏಣಿತಡ್ಕ ಭಾಗದಿಂದ ನದಿಯ ಇನ್ನೊಂದು ಭಾಗ ಆರೆಲ್ತಡಿ ಎಂಬಲ್ಲಿಗೆ ತೆಪ್ಪದಲ್ಲಿ ತೆರಳಿ
ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ನೇರೆಂಕಿಗುತ್ತು ಶ್ರೀಚಕ್ರವರ್ತಿ ಕೊಡಮಣಿತ್ತಾಯ ದೈವಸ್ಥಾನ ಮತ್ತು ಬ್ರಹ್ಮಬೈದರ್ಕಳ ನೇಮೋತ್ಸವ ಮತ್ತು ಶ್ರೀ ಬ್ರಹ್ಮಬೈದರ್ಕಳ ಜಾತ್ರೋತ್ಸವ ಪ್ರಯುಕ್ತ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಬೆಳಿಗ್ಗೆ ಹಳೆನೇರಂಕಿ ಪೇಟೆಯಿಂದ ಚೆಂಡೆ, ವಾದ್ಯದೊಂದಿಗೆ ಹೊರೆಕಾಣಿಕೆ ಮೆರವಣಿಗೆಯು ದೈವಸ್ಥಾನದ ಸನ್ನಿಧಿಗೆ ಆಗಮಿಸಿತು. ಗ್ರಾಮಸ್ಥರು ಅಡಿಕೆ, ತೆಂಗು, ಸಿಯಾಳ, ಹಿಂಗಾರ, ಬಾಳೆಗೊನೆ ಸೇರಿದಂತೆ ವಿವಿಧ ತರಕಾರಿ
ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ವಿವಿಧ ಗ್ರಾ.ಪಂ. ವ್ಯಾಪ್ತಿಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು 5.15 ಕೋಟಿ ರೂ.ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ 2.74 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದರು.
ಸುಳ್ಯ . ಸರಕಾರದ ಅರಣ್ಯ ಇಲಾಖೆ ಯಲ್ಲಿ ಇದ್ದುಕೊಂಡು ಭಜನೆ ಮತ್ತು ಬಜಕರ ಬಗ್ಗೆ ಹಿಂದೂ ದೇವರ ಬಗ್ಗೆ ನಿಂದನೆಯ ಪೋಸ್ಟುಗಳನ್ನು ತನ್ನ ಫೇಸ್ಬುಕ್ ನಲ್ಲಿ ಹರಿಯ ಬಿಟ್ಟು ಹಿಂದುಗಳ ಭಾವನೆಗೆ ದಕ್ಕೆ ತಂದಿರುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಪ್ರಕರಣ ದಾಖಲಾಗಿದ್ದರು ಕೂಡ ಬಂಧನ ಮಾಡದ ಅಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಇಂದು ಬೆಳ್ಳಾರೆ ಪೊಲೀಸ್ ಠಾಣಾ ಎದುರು ಬೃಹತ್ ಪ್ರತಿಭಟನೆ ನಡೆಸಿದರು ಮುಂದಿನ ದಿನದಲ್ಲಿ ಉಪ ವಲಯ ಅರಣ್ಯ
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಪುಷ್ಯ ಶುದ್ದ ಕಿರುಷಷ್ಠಿಯ ದಿನವಾದ ಬುಧವಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಸಹಸ್ರಾರು ಸಂಖ್ಯೆಯ ಭಗವದ್ಬಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಿಕೆ,ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ಶ್ರೀ ದೇವರ ಉತ್ಸವ ನೆರವೇರಿತು. ರಥಾರೋಹಣದ ಬಳಿಕ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು
ಕಾರ್ಯಕ್ರಮದಲ್ಲಿ ಸಚಿವರಾದ ಎಸ್ ಅಂಗಾರ ಏ ವಿ ತೀರ್ಥರಾಮ ಬಾಲಕೃಷ್ಣ ಕೀಲಾಡಿ ನವೀನ್ ಸಾರಕೆರೆ ಮತ್ತು “”:ಮದರ್ ಡ್ರೀಮ್ಸ್ ರೂರಲ್ ಅಂಡ್ ಅರ್ಬನ್ ಎಜುಕೇಶನ್ ಡೆವಲಪ್ಮೆಂಟ್ ಸೊಸೈಟಿ ರಿಜಿಸ್ಟರ್ಡ್:”” ಮತ್ತು “ಶ್ರೀರಾಮ ಗೋಶಾಲೆ” ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು ಈ ಸಂಸ್ಥೆಯಿಂದ ದಿನನಿತ್ಯ ಉಚಿತ ಸಂಜೆ ಪಾಠ ಶಾಲೆ ನಡೆಸುತ್ತಿದೆ ಮತ್ತು ಈ ಸಂದರ್ಭದಲ್ಲಿ ಮಕ್ಕಳಿಗೆ 50 ಪ್ರಮಾಣ ಪತ್ರ 50
ಸುಳ್ಯ ::ಸುಳ್ಯ ಮಡಿಕೇರಿ ರಾಜ್ಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಲಾರಿ, ಕಾರು , ಬೈಕ್ ನಡುವೆ ಸರಣಿ ಅಪಘಾತವಾಗಿ ಬೈಕ್ ಸವಾರರಿಬ್ಬರು, ಹಾಗೂ ಕಾರು ಚಾಲಕ ಗಾಯಗೊಂಡು ಆಸ್ಪತ್ರೆ ಸೇರಿರುವ ಗುರುವಾರ ವರದಿಯಾಗಿದ. , ಈ ಸಂದರ್ಭದಲ್ಲಿ ಕಾರಿನ ಹಿಂದಿನಂದ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿಯಾಗಿದೆ, ಘಟನೆಯಲ್ಲಿ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು, ಪೆರಾಜೆ ಗ್ರಾಮದ ದೊಡ್ಡಡ್ಕ ದೀನರಾಜ್ ಹಾಗೂ ಕಂಜಿಪಿಲಿ ಪುರುಷೋತ್ತಮ ತೀವ್ರ ಗಾಯಗೊಂಡರೆ, ಕಾರು ..ಲಾರಿಗೆ
ಸುಳ್ಯ: ಮಕ್ಕಳಿಗೆ ಸಾಹಿತ್ಯದ ಅಭಿರುಚಿ ಮೂಡಿಸುವ ಅವಶ್ಯಕತೆ ಇದೆ.ಮಕ್ಕಳಿಗೆ ನಾವು ಸಾಹಿತ್ಯವನ್ನು ಓದುವ ಮೂಲಕ ಸಾಹಿತ್ಯವನ್ನು ಸಾಹಿತ್ಯದ ವಿಚಾರವನ್ನು ಅವರಿಗೆ ಹೇಳಬೇಕೆಂದು ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಕೆ.ಆರ್ ಗಂಗಾಧರ ಹೇಳಿದರು. ಅವರು ಗೂನಡ್ಕ ಸಜ್ಜನ ಸಭಾಭವನದಲ್ಲಿ ನಡೆದ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ವಿಮರ್ಶಕ ವಿಜಯಶಂಕರ ಸಮ್ಮೇಳನವನ್ನು ಉದ್ಘಾಟಿಸಿದರು.
ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಮದುವೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದೆ.ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಶಾನ್ ಎಂಬವರ ಪತ್ನಿ ಶಾಹಿನಾ (28) ಹಾಗೂ ಶಝಾ (3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ