ಮಂಗಳೂರು.ಫೆ.20. ಭಾರತ ಕಮ್ಯೂನಿಸ್ಟ್ ಪಕ್ಷದ ಕಡಬ ತಾಲೂಕಿನ ಉಪ ಕಾರ್ಯದರ್ಶಿ, ಪುತ್ತೂರು ತಾಲೂಕು ಬೀಡಿ ಲೇಬರ್ ಯೂನಿಯನ್(ಎಐಟಿಯುಸಿ) ನ ಜತೆ ಕಾರ್ಯದರ್ಶಿ ಸುಮಾರು 55 ವರ್ಷ ಪ್ರಾಯದ ರಮೇಶ್ ರೈ ಅವರು ಇಂದು ಮುಂಜಾನೆ ಆನೆ ದಾಳಿಯಿಂದ ಸ್ಥಳೀಯ ಯುವತಿ ರಂಜಿತಳನ್ನು ರಕ್ಷಿಸುವ ಸಲುವಾಗಿ ತಾವೇ ಸ್ವತಃ ಆನೆ ದಾಳಿಗೆ ತುತ್ತಾಗಿ ಗಂಭೀರ ಸ್ವರೂಪದ ಗಾಯಗೊಂಡು ಸ್ಥಳದಲ್ಲೇ
ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಬಲಿಯಾದ ಘಟನೆ ಕಡಬ ಸಮೀಪದ ಮೀನಾಡಿ ಎಂಬಲ್ಲಿ ಇಂದು ನಡೆದಿದೆ. ಹಾಲಿನ ಡೈರಿಗೆ ಕೆಲಸಕ್ಕೆ ಹೋಗುತ್ತಿದ್ದ ಸಿಬ್ಬಂದಿ ರಂಜಿತಾ ಹಾಗೂ ರಮೇಶ್ ರೈ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸ್ಥಳದಲ್ಲಿ ಆಕ್ರೋಶಿತ ಸಾರ್ವಜನಿಕರು ಗಲಾಟೆ ಮಾಡಿದ್ದು ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ವಾರದ ಹಿಂದೆ ಮರ್ದಾಳದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಕಾಡಾನೆ ದಾಳಿ ಬಗ್ಗೆ ವಿಡಿಯೋ
ಸುಬ್ರಹ್ಮಣ್ಯ, ಫೆ.14: ಕರ್ನಾಟಕ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಮಂಗಳವಾರ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಶ್ರೀ ದೇವಳದಿಂದ ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು. ಪತ್ನಿ ಸೇರಿದಂತೆ ಕುಟುಂಬ ಸಮೇತರಾಗಿ ಶ್ರೀ ದೇವಳಕ್ಕೆ ಆಗಮಿಸಿದ ರಾಜ್ಯಪಾಲರನ್ನು ಶ್ರೀ ದೇವಳದ ಗಜರಾಣಿ ಯಶಸ್ವಿ ತನ್ನ ಸೊಂಡಿಲಿನಿಂದ
ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಗು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂಕೆ ಎಸ್ ಆರ್ ಟಿ ಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು,
ಉಜಿರೆ, ಫೆ: ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಗೀತಲಹರಿ’ ಸಂಗೀತ ಕಾರ್ಯಕ್ರಮವನ್ನು ಗಾಯಕಿ ಅನಸೂಯ ದೇವಸ್ಥಳಿ ಅವರು ನಡೆಸಿಕೊಟ್ಟರು. “ಮನವನ್ನು ತಣಿಸುವ ಮೋಹನಸೂತ್ರ”, “ಅವಳಿಲ್ಲಿಗೆ ಬಂದಾಗ”, “ಮಣ್ಣಿನಲಿ ಮಾಡಿರಲಿ ತನುವಿನಲಿ ನೀ ಕುಳಿತು”, “ಬಾರೋ ವಸಂತ”, “ಶೂದಷಚೈತ್ರದ ಸುಂದರಿ ನೀನು” ಹಾಡುಗಳಿಗೆ ಪ್ರೇಕ್ಷಕರು ಚಪ್ಪಾಳೆಯ ಸುರಿಮಳೆಗೈದರು. ತಬಲಾದಲ್ಲಿ ಗೌರವ್
ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಇಪ್ಪತ್ತೈದನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ದಿನ ಶುಕ್ರವಾರದಂದು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರ ತಂಡ ನೃತ್ಯ ರೂಪಕದ ಮೂಲಕ ಕಲಾ ಆರಾಧಕರನ್ನು ಮೂಕವಿಸ್ಮಿತರನ್ನಾಗಿಸಿತು. ವಿದುಷಿ ಶಾಲಿನಿ ಆತ್ಮಭೂಷಣ ನಿರ್ದೇಶನದಲ್ಲಿ ಹತ್ತೊಂಬತ್ತು ಮಂದಿ ಕಲಾವಿದರು ತಂಡ ತಂಡವಾಗಿ ‘ನೃತ್ಯೋsಹಂ’ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಸರ್ವ ದೇವರ ಸಂತೃಪ್ತಿಗೆಂದು ಪುಷ್ಪಾಂಜಲಿ
ಉಜಿರೆ, ಫೆ.4: ಸಾಹಿತ್ಯ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿವಿಧ ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಸಮ್ಮಾನಿಸುವುದರಿಂದ ಅವರ ಸಾಧನೆಗೆ ಇನ್ನಷ್ಟು ಸ್ಫೂರ್ತಿ ನೀಡಿದಂತಾಗುತ್ತದೆ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ ಹೇಳಿದರು. ಅವರು ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಸಾರಾ ಅಬೂಬಕ್ಕರ್
ಉಜಿರೆ, ಫೆ.4: ಸಾಹಿತ್ಯವು ಭಾಷೆ ಮತ್ತು ಅಕ್ಷರದ ಸಮ್ಮಿಶ್ರಣ. ಪತ್ರಕರ್ತರು ಮತ್ತು ಸಾಹಿತಿಗಳು ಸಮಾಜದ ಎರಡು ಕಣ್ಣುಗಳಿದ್ದಂತೆ. ಪತ್ರಕರ್ತರ ಗುರುತಿಸುವಿಕೆ ಒಂದು ದಿನಕ್ಕೆ ಮುಗಿದರೂ ಸಾಹಿತಿಗಳ ಗುರುತಿಸುವಿಕೆ ತುಂಬಾ ದಿನ ಇರುತ್ತದೆ ಎಂದು ಅಮರಸುಳ್ಯ ಅಧ್ಯಯನ ಕೇಂದ್ರ ಸುಳ್ಯದ ನಿರ್ದೇಶಕ ಡಾ. ಬಿ. ಪ್ರಭಾಕರ ಶಿಶಿಲ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ
ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ಖ್ಯಾತ ಹಾಸ್ಯ ಕಲಾವಿದ ಪಟ್ಟಾಭಿರಾಮ ಸುಳ್ಯ ಅವರು ನಡೆಸಿಕೊಟ್ಟ ನಗೆಹಬ್ಬ ಕಾರ್ಯಕ್ರಮವು ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿತು. ತಮ್ಮ ಅದ್ಭುತವಾದ ಮಿಮಿಕ್ರಿ ಕಲೆಯ ಮೂಲಕ ಹಾಸ್ಯಲೋಕಕ್ಕೆ ಕರೆದೊಯ್ದರು. ದೈನಂದಿನ ಜೀವನದಲ್ಲಿ ಕೇಳಿಬರುವ ಸೈರನ್ ಸದ್ದು, ಆ್ಯಂಬುಲೆನ್ಸ್, ವಿಮಾನ
ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ಗಮಕ ವಾಚನ ನಡೆಯಿತು. ಮಂಗಳೂರಿನಲ್ಲಿ ಗಮಕಕ್ಕೆ ಹೆಚ್ಚು ಮನ್ನಣೆ ನೀಡಿದ ಯಜ್ಞೇಶ್ ಎಸ್. ಸುರತ್ಕಲ್ ಅವರು ಗಮಕ ವಾಚನ ನಡೆಸಿದರು. ‘ಆದಿನಾಥನ ಪೂರ್ವವೃತ್ತಾಂತ’ದಿಂದ ಪ್ರಾರಂಭಗೊಂಡು ದುರ್ಯೋಧನ



























