ಸುಳ್ಯ ತಾಲೂಕಿನ ಕಳಂಜದಲ್ಲಿ ಮೊನ್ನೆ ರಾತ್ರಿ ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾದ ಮಸೂದ್ ಎಂಬ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದು ಯು.ಟಿ.ಖಾದರ್ ತೀವ್ರ ಖಂಡನೆ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತರ ಕುಟುಂಬಸ್ಥರು ಹಾಗೂ ಸ್ಥಳೀಯ ಮುಖಂಡರು ಜಿಲ್ಲಾಡಳಿತ ಪರಿಹಾರ ಘೋಷಿಸುವ ವರೆಗೂ ಮಯ್ಯತ್ (ಮೃತ
ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.
ಜೇಸಿಐ ಪಂಜ ಪಂಚಶ್ರೀ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಂಗನವಾಡಿ ಕೇಂದ್ರ ಪಂಜ ಇದರ ಆಶ್ರಯದಲ್ಲಿ ಕಡಿಮೆ ತೂಕದ ಪಂಜ ಅಂಗನವಾಡಿ ಮಕ್ಕಳಿಗೆ ಪ್ರೋಟೀನ್ ಪೌಡರ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಪಂಜ ಪಂಚಶ್ರೀಯ ಘಟಕ ಅಧ್ಯಕ್ಷರಾದ ಜೆಫ್ ಮ್. ಶಿವಪ್ರಸಾದ್ ಹಾಲೆಮಜಲು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ರಶ್ಮಿ
ಸುಳ್ಯ: ಮಂಗಳವಾರ ತಡ ರಾತ್ರಿ ತಂಡವೊಂದು ಯುವಕನ ಮೇಲೆ ಸೋಡಾ ಬಾಟಲಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಾರೆಯ ಕಳಂಜ ಎಂಬಲ್ಲಿ ಕಳೆದ ರಾತ್ರಿ ಈ ಹಲ್ಲೆ ನಡೆದಿದ್ದು ಮಸೂದ್ (19) ಎಂಬವರು ಗಂಭೀರವಾಗಿ ಗಾಯಗೊಂಡವರು . ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ ಮಸೂದ್ ಮೂಲತ: ಕಳಂಜದ ನಿವಾಸಿ ಅಲ್ಲ ಎನ್ನುವ
1837 ರ ಅಮರ ಸುಳ್ಯದ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ ಕೆದಂಬಾಡಿ ರಾಮಯ್ಯ ಗೌಡರ ಪುತ್ಥಳಿ ಆ.13 ರಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಅನಾವರಣಗೊಳ್ಳಲಿದ್ದು ಆ ಕಾರ್ಯಕ್ರಮಕ್ಕೆ ಸುಳ್ಯದಿಂದ 5 ಸಾವಿರ ಮಂದಿ ಭಾಗವಹಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಸಮಿತಿಯನ್ನು ರಚಿಸಿಕೊಂಡು, ನೆನಪಿನಲ್ಲಿಟ್ಟುಕೊಳ್ಳುವ ರೀತಿಯ ಯೋಜನೆ ರೂಪಿಸಲು ಕೂಡಾ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ
ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ. ಉಪ್ಪುಕಳದಲ್ಲೂ ಅತೀ ಶೀಘ್ರದಲ್ಲೇ ಸೇತುವೆ ರಚನೆಯಾಗಲಿದ್ದು, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು
ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಮೂರನೆಯ ವಾರ್ಡಿನ ನಾಗನ ಮಜಲು ಎಂಬಲ್ಲಿ ರಸ್ತೆ ಬಿರುಕು ಬಿಟ್ಟ ವರದಿಗೆ ಸ್ಪಂದಿಸಿದ ತಾಲೂಕು ತಹಶೀಲ್ದಾರ್ ಶ್ರೀಮತಿ ಅನಿತಾ ಲಕ್ಷ್ಮಿ ಆದೇಶದ ಮೇರೆಗೆ ಪೆರುವಾಜೆ ಗ್ರಾಮದ ನೋಡಲ್ ಆಫೀಸರ್ ಗಳಾದ ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಮತ್ತು ಗ್ರಾಮ ಲೆಕ್ಕಾಧಿಕಾರಿ ಶಿವರಾಜ್ ಹಾಗೂ ಮೆಸ್ಕಾಂ ಅಧಿಕಾರಿ ಪ್ರಸಾದ್ ಕೆ.ವಿ. ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ
ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಅವರ ಮನೆಗೆ ಕಂದಾಯ ಸಚಿವರಾದ ಆರ್. ಅಶೋಕ್, ಇಂಧನ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾ ಲಕ್ಷ್ಮೀ ಅವರು ಜು.7ರ ಗುರುವಾರ ಭೇಟಿ
ದಿನಾಂಕ 25.6.2022. ಎ. ವಿ ವರದಚಾರ್ ಮೆಮೋರಿಯಲ್ ಹಾಲ್ ಮಲ್ಲೇಶ್ವರಂ ಬೆಂಗಳೂರು. ಕಲಾ ಸಂಗಮ ಬೆಂಗಳೂರು ಇವರು ಹಮ್ಮಿಕೊಂಡ ಕನ್ನಡ ರಾಜ ರತ್ನ ಸವಿ ನೆನಪಿಗಾಗಿ ಯುವ ರತ್ನ ಅಪ್ಪು ಗೀತಾ ಗಾಯನ, ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯ ವ್ಯಕ್ತಿಗಳು. ಡಾ. ಆಂಜನಪ್ಪ MBBS_MS, General surgery gastroenterologist, ಶಶಿಧರ್ ಕೋಟೆ ಚಲನಚಿತ್ರ ನಟರು ಮತ್ತು
ಕರಾವಳಿಯಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ನದಿ, ತೊರೆಗಳು ತುಂಬಿ ಹರಿಯತೊಡಗಿದೆ. ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಸ್ಥಿತಿ ಎದುರಾಗಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಕಾಲೇಜಿಗೆ ರಜೆ ಸಾರಲಾಗಿದೆ. ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ನಿರಂತರ ಮಳೆಯಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪ್ರವಾಹ ಸ್ಥಿತಿ























