ಸುಳ್ಯ:ಸುಳ್ಯದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೂಂತೋಡು ಎಂಪೋರಿಯಂ ಬಿಲ್ಡಿಂಗ್‌ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ‘ಕರಿಮಣಿ ಖರೀದಿ ಹಬ್ಬ’ ಗ್ರಾಹಕರ ಮನಮೆಚ್ಚಿದ ಚಿನ್ನಾಭರಣ ಮಳಿಗೆಯಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು ಹೆಚ್ಚಿನ ಗ್ರಾಹಕರ ಅಪೇಕ್ಷೆಯ ಮೇರೆಗೆ ‘ಕರಿಮಣಿ ಖರೀದಿ’ ಹಬ್ಬವನ್ನು ಆಗಸ್ಟ್ 31ರ ವರೆಗೆ
ಸುಳ್ಯ: ಸುಳ್ಯ ನ್ಯಾಯಾಲಯದಲ್ಲಿ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈಯಿಂದ ಪ್ರಾರಂಭವಾಗಿದ್ದು, ಅಕ್ಟೋಬರ್ 7ರ ವರೆಗೆ ಈ ಅಭಿಯಾನ ನಡೆಯಲಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು,ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ
ಕಡಬ: ಇಲ್ಲಿನ ಪಟ್ಟಣ ಪಂಚಾಯತ್‌ನ 13 ವಾರ್ಡುಗಳಿಗೆ ನಾಳೆ (ಆ.17) ಚುನಾವಣೆ ನಡೆಯಲಿದ್ದು, ಇದರ ಅಂಗವಾಗಿ ಆ.16ರಂದು ತಾಲೂಕು ಆಡಳಿತ ಸೌಧದಲ್ಲಿ ಸ್ಟ್ರಾಂಗ್ ರೂಮ್ ತೆರೆಯಲಾಗಿದ್ದು ಮಸ್ಟರಿಂಗ್ ಕಾರ್ಯ ನಡೆಯಿತು. ಪ್ರತಿ ಮತಗಟ್ಟೆಯಲ್ಲಿ ಪಿ.ಆರ್.ಒ. ಜೊತೆಗೆ ಮೂವರು ಸಿಬ್ಬಂದಿಗಳು ಹಾಗೂ ಓರ್ವ ಡಿ-ಗ್ರೂಪ್ ನೌಕರ ನಿಯೋಜನೆಯಾಗಿದ್ದು, ಮತಗಟ್ಟೆ ಸಿಬ್ಬಂದಿಗಳು ತಾಲೂಕು ಆಡಳಿತ ಸೌಧದಲ್ಲಿ ಹಾಜರಾಗಿ ಮಸ್ಟರಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಸಂಜೆ ವೇಳೆಗೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಿಂತಿಕಲ್ಲು ವಲಯದ ಕುಕ್ಕಯ್ಯಕೇಡಿ ಎಂಬಲ್ಲಿ ವಾಸವಾಗಿರುವ ತೀರ ಬಡತನದಲ್ಲಿರುವ ಸದಸ್ಯರಾದ ಬಾಬು ರೈ ಮತ್ತು ದೈಯಕ್ಕು ದಂಪತಿಗಳಿಗೆ ಶ್ರೀ ಕ್ಷೇತ್ರದಿಂದ ತಿಂಗಳಿಗೆ 2000/- ಮಾಸಾಶನ ಮೊತ್ತ ಮಂಜೂರಾಗಿದ್ದು, ಇವರಿಗೆ ಮಂಜೂರಾತಿ ಪತ್ರವನ್ನು ಊರಿನ ಗಣ್ಯರಾದ ಶ್ರೀಯುತ ಸುಧೀರ್ ಕುಮಾರ್ ಶೆಟ್ಟಿ ಕುಕ್ಕಯ್ಯಕೇಡಿ ಇವರು ವಿತರಿಸಿದರು.ಈ
ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ 2025 -26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.ಕೆವಿಜಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಅಧ್ಯಕ್ಷತೆ ವಹಿಸಿ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಲೆಕ್ಕ ಅಧೀಕ್ಷಕ ಧನಂಜಯ ಕಲ್ಲುಗದ್ದೆ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ವಿವೇಕ್ ಪಿ ಉಪಸ್ಥಿತರಿದ್ದು
ಬೆಳ್ಳಾರೆ: ಬೆಳ್ಳಾರೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೆಳ್ಳಾರೆ ಗ್ರಾಮದ ಐತಿಹಾಸಿಕ ಸ್ಥಳ ಬಂಗ್ಲೆಗುಡ್ಡೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ನಾಳೆ(ಆ.15) ಪೂ. 08.30ಕ್ಕೆ ನಡೆಯಲಿದೆ. ಗ್ರಾಮಸ್ಥರುಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬೆಳ್ಳಾರೆ ಗ್ರಾಮ ಪಂಚಾಯತ್ ಪ್ರಕಟಣೆ ತಿಳಿಸಿದೆ. 1837ರಲ್ಲಿ ನಡೆದ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಟಗಾರರು ಬ್ರಿಟೀಷರ ಖಜಾನೆಯಾಗಿದ್ದ
ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಪ್ರೇಮಾವತಿ ಸಿ. ಯವರು ಜು.31ರಂದು ತಮ್ಮ 28 ವರ್ಷಗಳ ಶಿಕ್ಷಕ ಸೇವೆಯಿಂದ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಸುಳ್ಯ ನಗರ ಮಹಿಳಾ ಗೌಡ ಘಟಕದ ಸದಸ್ಯರು ಆ.13 ರಂದು ಅವರ ಮನೆಗೆ ತೆರಳಿ ಶಾಲು, ಪೇಟ, ಫಲ ಪುಷ್ಪ ನೀಡಿ ಗೌರವ ಸಲ್ಲಿಸಿದರು. ಶಿಕ್ಷಕಿ ಪ್ರೇಮಾವತಿ ಟೀಚರ್‌ರವರ ಕುರಿತು ತಾ.ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿಎಸ್ ಗಂಗಾಧರ್, ನಿವೃತ್ತ ವಿಜಯಬ್ಯಾಂಕ್ ಉದ್ಯೋಗಿ ಜನಾರ್ಧನ ಕೊಳಂಜಿರೋಡಿ
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಸುಳ್ಯದಲ್ಲಿ ದಿನಾಂಕ 13-08-2025ರಂದು ರಚನಾ ಶಾರೀರ ವಿಭಾಗದ ಮುಂದಾಳತ್ವದಲ್ಲಿ, ವಿಶ್ವ ಅಂಗಧಾನ ದಿನಾಚರಣೆ ಪ್ರಯುಕ್ತ ಮಾನವ ಶರೀರದ ಅಂಗಾಂಗ ಮಾದರಿಯ ವಸ್ತು ಪ್ರದರ್ಶನ, ಬೀದಿ ನಾಟಕ ಹಾಗೂ ಅಂಗಾಂಗ ದಾನದ ನೈಜ ಘಟನೆಯನ್ನಾದರಿಸಿದ ನಾಟಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾಲೇಜಿನ ಶಲ್ಯ ತಂತ್ರ ವಿಭಾಗ ಮುಖ್ಯಸ್ಥರಾದ ಡಾ. ಹರ್ಷವರ್ಧನ ಕೆ., ವಹಿಸಿ ಅಂಗಾಂಗದಾನಿಗಳ ಸಂಖ್ಯೆ
ಕೆ. ವಿ. ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಸಂಸ್ಕೃತ ಸಂಘದ ವತಿಯಿಂದ ಸಂಸ್ಕೃತ ಸಪ್ತಾಹವು ದಿನಾಂಕ 5/08/2025 ರಿಂದ 11/08/2025 ವರೆಗೆ ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು 5/08/2025ರಂದು ಕಾಲೇಜಿನ ಪ್ರಾಂಶುಪಾಲಾರಾದ ಡಾ. ಲೀಲಾಧರ್ ಡಿ ವಿ ಯವರು ಸಂಸ್ಕೃತ ಪತ್ರದ ಅಂಚೆಪೆಟ್ಟಿಗೆ ಅನಾವರಣ ಗೊಳಿಸುವ ಮೂಲಕ ನೆರವೇರಿಸಿದರು.ಒಂದು ವಾರಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿಧ್ಯಾರ್ಥಿಗಳಿಗೆ ಸಂಸ್ಕೃತ ಸಮೂಹ ಗಾಯನ,
ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಅಂಗವಾಗಿ ದಿನಾಂಕ 12.8.2025 ನೇ ಮಂಗಳವಾರದಂದು ಶ್ರೀ ಕೃಷ್ಣ ಲೀಲೋತ್ಸವ ಕಾರ್ಯಕ್ರಮವು ಜರಗಿತು. ಪುಟಾಣಿ ಮಕ್ಕಳು ಕೃಷ್ಣನ ಬಾಲ ಲೀಲೆಗಳು ಮತ್ತು ಗೋಪಿಕೆಯರ ನ್ರುತ್ಯಗಳನ್ನು ಲವಲವಿಕೆಯಿಂದ ಮಾಡಿ ರಂಜಿಸಿದರು. ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ, ಶಾಲೆಯ ಹಿರಿಯ ವಿದ್ಯಾರ್ಥಿನಿ ಲಾವಣ್ಯ ಆಚಾರ್,




























