Home ಕರಾವಳಿ Archive by category ಸುಳ್ಯ (Page 9)

ವಿಟ್ಲ: ಜುಗಾರಿ ಅಡ್ಡೆಗೆ ದಾಳಿ ನಡೆಸಿದ ವಿಚಾರದಲ್ಲಿ ಹಣ ಬೇಡಿಕೆ ಒಡ್ಡಿದ ಆರೋಪ – ವಿಟ್ಲ ಎಸೈ ಕೌಶಿಕ್ ಕರ್ತವ್ಯದಿಂದ ಅಮಾನತು

ದಿನಾಂಕ 08.05.2025 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುವ ಬಗ್ಗೆ ಮಾಹಿತಿ ದೊರೆತ ಮೇರೆಗೆ, ಸದ್ರಿ ಸ್ಥಳಕ್ಕೆ ಕೌಶಿಕ್ ಬಿ ಸಿ, ಪಿ ಎಸ್ ಐ, ವಿಟ್ಲ ಪೊಲೀಸ್ ಠಾಣೆ ರವರು ದಾಳಿ ಮಾಡಿದಾಗ, ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗದಿದ್ದು, ಸ್ಥಳದಲ್ಲಿ ಮೋಟಾರು ಸೈಕಲ್ ಕಂಡುಬಂದಿರುತ್ತದೆ. ಪಿ ಎಸ್ ಐ ಕೌಶಿಕ್

ಸುಳ್ಯ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್‌ ಸೊಸೈಟಿಯ 26ನೇ ಶಾಖೆ ಶುಭಾರಂಭ

ಸುಳ್ಯ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್‌ ಸೊಸೈಟಿಯ ಬೆಳ್ಳಾರೆ ಶಾಖೆಯು ಬೆಳ್ಳಾರೆಯ ಬಿ. ನರಸಿಂಹ ಜೋಶಿ ಮಾಲಕತ್ವದ ಪ್ರಸಾದ್ ಟೆಕ್ಸ್ ಟೈಲ್ಸ್ ನ ಕಟ್ಟಡದಲ್ಲಿ ಭಾನುವಾರ ಶುಭಾರಂಭ ಗೊಂಡಿತು. ನಮ್ಮ ಸೊಸೈಟಿಯಲ್ಲಿ 2004ರಲ್ಲಿ ಎನ್.ಪಿ.ಎ. ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದೇವೆ. ಒಂದು ಸಂಸ್ಥೆಯು ಅಭಿವೃದ್ಧಿ ಹೊಂದಬೇಕಾದರೆ ಉತ್ತಮ ಆಡಳಿತ ಮಂಡಳಿ, ಸಿಬ್ಬಂದಿಗಳು ಹಾಗೂ ಗ್ರಾಹಕರ ಪಾತ್ರ ಮುಖ್ಯ. ರಾಷ್ಟ್ರೀಕೃತ ಬ್ಯಾಂಕ್ ನ ಹಾಗೆ ವ್ಯವಹಾರವನ್ನು

ಕಡಬ: ಬೆಳಿಯಪ್ಪ ಗೌಡ ಅವರಿಗೆ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

CRPFನಲ್ಲಿ ಸುದೀರ್ಘ 22 ವರ್ಷ ದೇಶದ ವಿವಿಧ ಭಾಗಗಳಲ್ಲಿ ವಿವಿಧ ಹುದ್ದೆಗಳಾದ ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್ ಮತ್ತು ಎ.ಎಸ್.ಐ. ಆಗಿ ಸೇವೆ ಸಲ್ಲಿಸಿರುವ ಬೆಳಿಯಪ್ಪ ಗೌಡ ಇವರು ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ ಹೊಂದಿರುತ್ತಾರೆ. ಪ್ರಸ್ತುತ ಇವರು 133ನೇ ಬೆಟಾಲಿಯನ್ ರಾಂಚಿ ಜಾರ್ಖಂಡ್‌ನಲ್ಲಿ ಸೇವೆಯಲ್ಲಿರುತ್ತಾರೆ. ಕಡಬ ತಾಲ್ಲೂಕು ಐತೂರ್ ಗ್ರಾಮದ ಮುಂಡಡ್ಕ ಕೃಷ್ಣಮ್ಮ ಮತ್ತು ಬಿರ್ಮಣ್ಣ ಗೌಡ ಇವರ ಸುಪುತ್ರರಾಗಿರುವ ಇವರು ಪತ್ನಿ ವನಿತಾ ಹಾಗೂ ಜಗನ್ ಮತ್ತು

ಸುಳ್ಯ: “ವಿಶ್ವ ತಂಬಾಕು ವಿರೋಧಿ ದಿನಾಚರಣೆ” ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ವತಿಯಿಂದ ” ವಿಶ್ವ ತಂಬಾಕು ವಿರೋಧಿ ದಿನಾಚರಣೆ ” ಕಾರ್ಯಕ್ರಮವನ್ನು ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿನಡೆಯಿತು ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀಯುತ ಲೋಕನಾಥ್ ಅಮೆಚೂರ್ ರವರು ದೀಪ ಪ್ರಜ್ವಲಿಸಿ ಇಂದು ಪ್ರಜ್ವಲಿಸಿದ ದೀಪ ಅಂತರಂಗದ ಕತ್ತಲನ್ನು ಹೋಗಲಾಡಿಸಿ ಜ್ಞಾನದ ಜ್ಯೋತಿ

ಎನ್‌ಎಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಜೂನ್ 05 ಗುರುವಾರದಂದು ಕಾಲೇಜು ದೃಶ್ಯ ಶ್ರವಣ ಕೊಠಡಿಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಜೀವ ವಿಜ್ಞಾನ ಉಪನ್ಯಾಸಕರಾದ ಡಾ. ಸಂಧ್ಯಾ ಕೆ ಮಾತನಾಡಿ, ಪರಿಸರ ದಿನದ ಮಹತ್ವಗಳನ್ನು, ಪ್ಲಾಸ್ಟಿಕ್

ಬೆಳ್ಳಾರೆ: ಜೂ. 8ರಂದು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ.: ಬೆಳ್ಳಾರೆಯಲ್ಲಿ 26ನೇ ಶಾಖೆ ಪ್ರಾರಂಭ

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಇದರ 26ನೇ ಶಾಖೆಯ ಬೆಳ್ಳಾರೆಯ ಪ್ರಸಾದ್ ಟೆಕ್ಸ್ ಟೈಲ್ ಕಟ್ಟಡದ ನೆಲ ಮಹಡಿಯಲ್ಲಿ ಜೂನ್ 8ರಂದು ಉದ್ಘಾಟನೆಗೊಳ್ಳಲಿದೆ. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ೨೬ನೇ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ಕ್ರೆಡಿಟ್ ಕೊ ಓಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಕೆ. ಜೈರಾಜ್ ಬಿ ರೈ ವಹಿಸಲಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್. ಕೊಳ್ತಿಗೆ ಕೃಷಿಪತ್ತಿನ

ಸುಳ್ಯ : ನ್ಯಾಷನಲ್ ಡಿಫೆನ್ಸ್ ಅಕಾಡೆಮಿ 2025(NDA)ಪ್ರವೇಶ ಪರೀಕ್ಷೆ 2025

⭕ವಿದ್ಯಾರ್ಹತೆ:ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮತ್ತು ಈಗಾಗಲೇ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ⭕ಭಾರತೀಯ ಭೂ ಸೇನೆಯ ಪ್ರವೇಶ ಬಯಸುವ ಅಭ್ಯರ್ಥಿಗಳು ಪಿಯುಸಿ ಯಲ್ಲಿ ಯಾವುದೇ ವಿಷಯವನ್ನು ಅಧ್ಯಯನ ಮಾಡಿರಬಹುದು. ⭕ನೌಕಾ ಸೇನೆ ಮತ್ತು ವಾಯು ಸೇನೆಯ ಪ್ರವೇಶ ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಪಿಯುಸಿ ಯಲ್ಲಿ ವಿಜ್ಞಾನ ವಿಷಯದಲ್ಲಿ ಅಧ್ಯಯನ ಮಾಡಿರಬೇಕು. ⭕ವಯಸ್ಸಿನ ಮಿತಿ :ಅಭ್ಯರ್ಥಿಯು 02.01.2007 ರಿಂದ

ಸುಳ್ಯ : ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ- ವಿಶ್ವ ತಂಬಾಕು ರಹಿತ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಾಲೇಜಿನ ಅಗದ ತಂತ್ರ, ಸ್ವಸ್ಥವೃತ್ತ ವಿಭಾಗದ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿಯವರು ದೀಪ ಬೆಳಗಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ತಂಬಾಕು ಸೇವನೆಯ ದುಷ್ಪರಿಣಾಮಗಳು, ಇದರಿಂದ ಉಂಟಾಗುವ ಕಾಯಿಲೆಗಳು ಹಾಗೂ ಸೇವನೆಯ ಚಟದಿಂದ ಹೊರಬರುವ ವಿಧಾನಗಳನ್ನು

ಕಡಬ: ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕಡಬ:ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ 2025 -26 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸುವುದರ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ವಂದನೀಯ ಪ್ರಕಾಶ್ ಪೌಲ್ ಡಿಸೋಜಾ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಹಾರೈಸಿದರು. ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಸುನಿಲ್ ಪ್ರವೀಣ್ ಪಿಂಟೋ ರವರು ಪ್ರಾಸ್ತಾವಿಕ

ಮಳೆಯ ಅವಾಂತರ: ಪೆರುವಾಜೆಯ ಮುಂಡಾಜೆ ಎಂಬಲ್ಲಿ ಗುಡ್ಡ ಕುಸಿತ: 20ಕ್ಕೂ ಅಧಿಕ ಮನೆಗಳ ಸಂಪರ್ಕ ಕಡಿತ

ಭಾರೀ ಮಳೆಯ ಪರಿಣಾಮದಿಂದ ಪೆರುವಾಜೆಯ ಮುಂಡಾಜೆ ಎಂಬಲ್ಲಿ ಗುಡ್ಡ ಕುಸಿತಗೊಂಡು ೨೦ಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಕಡಿತಗೊಂಡಿದೆ. ಧಾರಾಕರಾವಾಗಿ ಸುರಿದ ಮಳೆಯಿಂದಾಗಿ ಸುಮಾರು100 ಮೀಟರ್ ದೂರದಷ್ಟು ಗುಡ್ಡ ಕುಸಿದು ಗ್ರಾಮ ಪಂಚಾಯತ್ ರಸ್ತೆಯ ಮೇಲೆ ಬಿದ್ದು 15 ಪ.ಜಾ ಕುಟುಂಬಗಳಿಗೆ ಮತ್ತು 5 ಇತರೆ ಮನೆಗಳಿಗೆ ಸಂಪೂರ್ಣವಾಗಿ ಸಂಪರ್ಕ ಕಡಿತಗೊಂಡಿದೆ. ಸ್ಥಳಕ್ಕೆ   ಸುಳ್ಯ ತಾಲೂಕಿನ  ತಹಶೀಲ್ದಾರಾದ ಮಂಜುಳಾ  ಭೇಟಿ ನೀಡಿ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ  ಕಂದಾಯ