Home Archive by category ಕರಾವಳಿ (Page 865)

ಪತ್ರಿಕಾ ದಿನಾಚರಣೆ : ಮ್ಯೋಗ್ಲಿಂಗ್ ಸ್ಮರಣೆ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ತಿಯೋಲಾಜಿಕಲ್ ಕಾಲೇಜಿನ ವತಿಯಿಂದ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಕನ್ನಡ ಪತ್ರಿಕೋದ್ಯಮದ ಮೂಲಪುರುಷ “ಮಂಗಳೂರ ಸಮಾಚಾರ “ಪತ್ರಿಕೆಯ ಸಂಸ್ಥಾಪಕ ಸಂಪಾದಕ ಹೆರ್ಮನ್ ಫ್ರೆಡ್ರಿಕ್ ಮ್ಯೋಗ್ಲಿಂಗ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪತ್ರಿಕಾ ದಿನಾಚರಣೆ ಹಾಗೂ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭ

ಕೊರೊನಾ ಹಿನ್ನಲೆ ಲಾಕ್‌ಡೌನ್ ನಂತರ ಬರೋಬ್ಬರಿ 68 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದೆ. ಕೊರೊನಾ ಪ್ರಕರಣ ಇಳಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ಜೂನ್.22ರ ನಂತರ ಷರತ್ತು ಬದ್ಧವಾಗಿ ಖಾಸಗಿ ಬಸ್ ಸಂಚಾರಕ್ಕೆ ಅನುಮತಿ ನೀಡಿತ್ತು. ಆದರೆ ತಾಂತ್ರಿಕ ಕಾರಣ ಹಾಗೂ ತೆರಿಗೆ ವಿನಾಯಿತಿ, ಬಸ್ ದರ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದ ಖಾಸಗಿ ಬಸ್ ಮಾಲಕರು ಸರ್ಕಾರದ ಜೊತೆ ಮಾತುಕತೆ ನಂತರ ಇಂದಿನಿಂದ ತಮ್ಮ ಸಂಚಾರ ಆರಂಭಿಸಿಲು

ಶ್ರೀನಿವಾಸ್ ವಿವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ & ಟೂರಿಸಂ:- ಆನ್‌ಲೈನ್ ಮೂಲಕ ಅಡುಗೆ ಸ್ಪರ್ಧೆ ಆಯೋಜನೆ

ಶ್ರೀನಿವಾಸ್ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ & ಟೂರಿಸಂ ಇದರ ಮೂಲಕ ಆನ್‌ಲೈನ್ ಅಡುಗೆ ಸ್ಪರ್ಧೆ “ಉಪಹಾರ ಮತ್ತು ಅದರ ಸಂಬಂಧಿತ ಭಕ್ಷ್ಯಗಳ ಪಟ್ಟಿ”ಯ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದಾರೆ. ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‌ನ ಶ್ರೀನಿವಾಸ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ & ಟೂರಿಸಂನ ವತಿಯಿಂದ ಭವಿಷ್ಯದ ಬಾಣಸಿಗರಾಗಲು ಬಯಸುವ ದ್ವಿತೀಯ ಪಿಯುಸಿ ಹಾಗೂ

ಕೇರಳದಿಂದ ಜಿಲ್ಲೆಗೆ ಆಗಮಿಸುವವರಿಗೆ ಆರ್‌ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಜಿಲ್ಲಾಧಿಕಾರಿ

ಕೇರಳದಿಂದ ಜಿಲ್ಲೆಯ ಗಡಿ ಭಾಗಗಳ ಮೂಲಕ ಜಿಲ್ಲೆಗೆ ಸಂಚರಿಸುವವರಿಗೆ ಜೂ. 29ರಿಂದ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಇಂದು ತಪಾಸಣೆ ನಡೆಸಿದ ಬಳಿಕ ಅವರು ಈ ಮಾಹಿತಿಯನ್ನು ನೀಡಿದ್ದಾರೆ. ಕೇರಳ ಗಡಿ ಭಾಗದಲ್ಲಿ ಕೊರೋನ ಪ್ರಕರಣಗಳು ಹೆಚ್ಚುತ್ತಿರುವಂತೆ ಡೆಲ್ಟಾ ವೇರಿಯಂಟ್ ಕೋವಿಡ್ ಪತ್ತೆಯಾಗಿರುವ ಸಂಶಯದ ಮೇರೆಗೆ ಕೇರಳ ಗಡಿಯನ್ನು

ಸಂಸದ ನಳಿನ್ ಕುಮಾರ್ ಸಹೋದರ ನವೀನ್ ಅನಾರೋಗ್ಯದಿಂದ ನಿಧನ

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ. ಸಂಸದ ನಳಿನ್‌ ಕುಮಾರ್‌ ಕಟಿಲ್‌ ರವರ ಸಹೋದರ, ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವಿನ್‌ ಕುಮಾರ್‌(57 ) ಜೂ.28 ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು. ಇವರು ಕೃಷಿಕರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದರು.ಮೃತರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್‌ ಕುಮಾರ್‌ ಕಟೀಲ್‌, ಸಹೋದರಿ ನಂದಿನಿರವರನ್ನು ಅಗಲಿದ್ದಾರೆ.

ಸುಳ್ಯದ ಕಲ್ಚರ್ಪೆಯಿಂದ ಮಳೆ ನೀರಿನೊಂದಿಗೆ ತೋಡಿನಲ್ಲಿ ಹರಿದುಬಂದ ತ್ಯಾಜ್ಯ: ಶ್ರೀ ವನದುರ್ಗಾ ದೈವಸ್ಥಾನ ಕಲ್ಚರ್ಪೆ ಸಮಿತಿಯಿಂದ ಶ್ರಮದಾನ

ಕಳೆದ ಎರಡು ವಾರದ ಹಿಂದೆ ಸುರಿದ ಮಳೆಯಿಂದಾಗಿ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರಿನ ಕಲ್ಪರ್ಪೆ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿದ್ದ ತ್ಯಾಜ್ಯ ತುಂಬಿದ ಚೀಲಗಳು ತೋಡಿನ ಮೂಲಕ ಬಂದು ಪಯಶ್ವಿನಿ ನದಿಯನ್ನು ಸೇರಿತ್ತು. ಈ ಬಗ್ಗೆ ಅಲ್ಲಿಯ ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದರು. ಈ ಬಗ್ಗೆ ನಗರ ಪಂಚಾಯತ್‌ಗೆ ದೂರು ನೀಡಿದ್ದರೂ ಯಾವುದೇ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಇದೀಗ ಶ್ರೀ ವನದುರ್ಗಾ ದೈವಸ್ಥಾನ ಕಲ್ಚರ್ಪೆ ಸಮಿತಿಯವರು ತೋಡಿನಲ್ಲಿ

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ

ಪುತ್ತೂರು: ನಾಡಪ್ರಭು ಕೆಂಪೇಗೌಡರ ಹೆಸರಿನ ಜೊತೆಗೆ ಅವರ ಸಾಧನೆಗೂ ಬಹಳ ಮಹತ್ವವಿದ್ದು, ಅವರ ದೂರದೃಷ್ಟಿ, ಜನಪರ ಚಿಂತನೆ ಎಲ್ಲರಿಗೂ ಮಾದರಿಯಾಗಿದೆ. ಬೆಂಗಳೂರನ್ನು ವಾಣಿಜ್ಯ ಕೇಂದ್ರವನ್ನಾಗಿ ಪರಿವರ್ತಿಸಿದ ಕೆಂಪೇ ಗೌಡರು ಕರ್ನಾಟಕವನ್ನು ವಿಶ್ವದಾದ್ಯಂತ ಗುರುತಿಸುವಂತೆ ಮಾಡಿದ್ದಾರೆ ಎಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ಹೇಳಿದರು.ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಪುತ್ತೂರಿನ ಮಿನಿವಿಧಾನ ಸೌಧದ

ಪುತ್ತೂರು ನಗರಸಭೆ ಕಚೇರಿ ಕಟ್ಟಡ, ಮಳೆ ನೀರು ಕೊಯ್ಲು ಅಳವಡಿಕೆಗೆ ಶಿಲನ್ಯಾಸ

ಪುತ್ತೂರು: ಕುಡಿಯುವ ನೀರು ಯೋಜನೆಗಾಗಿ ಸರ್ಕಾರವು ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಆದರೂ ದಿನದ ೨೪ ಗಂಟೆಗಳ ನೀರು ಪೂರೈಕೆ ಕಷ್ಟಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರು ಪಡೆಯುವಲ್ಲಿ ಸ್ವಾವಲಂಭಿಗಳಾಲು ಮಳೆ ನೀರು ಕೊಯ್ಲು ಅನಿವಾರ್ಯವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಅವರು ಸೋಮವಾರ ಪುತ್ತೂರು ನಗರಸಭೆಯ ವತಿಯಿಂದ ನಡೆಯಲಿರುವ ನೂತನ ಕಚೇರಿ ಕಟ್ಟಡ ಮತ್ತು ಮಳೆ ನೀರು ಕೊಯ್ಲು ಅಳವಡಿಕೆಯ ಕಾಮಗಾರಿಗೆ ಶಿಲನ್ಯಾಸ ನೆರವೇರಿಸಿ

ಕೂಳೂರು ಮೊಗವೀರ ಗ್ರಾಮ ಸಭೆಯ ವತಿಯಿಂದ ಉಚಿತ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ

ಕೂಳೂರು ಮೊಗವೀರ ಗ್ರಾಮ ಸಭೆಯ ವತಿಯಿಂದ ಕುಳಾಯಿಯಲ್ಲಿ ಸೋಮವಾರ ಉಚಿತ ಲಸಿಕಾ ಶಿಬಿರವನ್ನು ಆಯೋಜಿಸಲಾಗಿತ್ತು. ಮೀನುಗಾರಿಕೆ, ಬಂದರು ಸಚಿವ ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸರಕಾರ ಲಸಿಕೆ ನೀಡಲು ಆದ್ಯತೆಯ ಪಟ್ಟಿ ಮಾಡುವಾಗ ಮೀನುಗಾರ ಸಮುದಾಯವನ್ನು ಸೇರಿಸಬೇಕು ಎಂದು ನಾನು ಸೂಚಿಸಿದ ಮೇರೆಗೆ ಇದೀಗ ಬೇರೆ ಬೇರೆ ಭಾಗಗಳಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ ಎಂದರು. ಕೆಲವೊಂದು ಅಪಪ್ರಚಾರಗಳಿಂದ ಜನ ಲಸಿಕೆ ಪಡೆಯಲು ಹಿಂದೇಟು ಹಾಕಿದರೂ