Home Archive by category ಕರಾವಳಿ (Page 885)

ಸಂಸದರ ಧ್ವನಿಯನ್ನೇ ಗುರುತಿಸಲಾಗದ ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುವರೇ..?: ರಮಾನಾಥ ರೈ

 ದಕ್ಷಿಣ ಕನ್ನಡ ಜಿಲ್ಲಾ ಸಂಸದರ ಧ್ವನಿಯನ್ನು ಗುರುತಿಸಲಾಗದವರು ಜನರ ಸಮಸ್ಯೆಗಳಿಗೆ ಸ್ಪಂದಿಸುವರೇ ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದ್ದಾರೆ.  ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ತಮ್ಮ ಸೇಹಿತರ ಜತೆ ಮಾತನಾಡುತ್ತಾ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಹೇಳಿಕೆ ನೀಡಿರುವಂತಹ ಆಡಿಯೋ ಧ್ವನಿ ನಳಿನ್ ಕುಮಾರ್

ಮಂಗಳೂರು ಉತ್ತರ ಮಂಡಲ ಬಿಜೆಪಿ ಮಹಿಳಾ ಮೋರ್ಚಾದಿಂದ ಕಾರ್ಯಕಾರಿಣಿ  ಸಭೆ 

ಕಾವೂರು: ಮಂಗಳೂರು ಉತ್ತರ ಮಂಡಲ ಮಹಿಳಾ ಮೋರ್ಚಾ  ಇದರ ಕಾರ್ಯಕಾರಿಣಿ ಸಭೆ ಕಾವೂರು ಬಿಜೆಪಿ ಕಚೇರಿಯಲ್ಲಿ ಶನಿವಾರ ಜರಗಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕಾರ್ಯಕಾರಿಣಿ ಉದ್ಘಾಟಿಸಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಎಲ್ಲರಿಗೂ ಅವಕಾಶ ಲಭಿಸುತ್ತದೆ. ಪಕ್ಷದ ಮೇಲೆ ನಿಷ್ಟೆಯಿಟ್ಟು ನಾವು ಪಕ್ಷದ ಹಿತಕ್ಕಾಗಿ ಕೆಲಸ ಮಾಡಿದಾಗ ನಾಯಕರು ಇದನ್ನು ಗುರುತಿಸಿ ಪಕ್ಷ  ಸಂಘಟನೆ ಜವಾಬ್ದಾರಿ ಜತೆಗೆ ಸ್ಥಳೀಯ ಚುನಾವಣಾ ಕಣಕ್ಕೂ ಇಳಿಸಲು ಸೂಚಿಸಬಹುದು.ಬಿಜೆಪಿ ಇತರ

ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಪೀಠ ಕ್ರಿಯೇಷನ್‌ನವರ ’ವಿವಾಸ್ವತ’ ಕನ್ನಡ ಕಿರುಚಿತ್ರ ಬಿಡುಗಡೆ

ಪೀಠ ಕ್ರಿಯೇಷನ್ ವತಿಯಿಂದ ’ವಿವಾಸ್ವತ’ ಕನ್ನಡ ಕಿರುಚಿತ್ರದ ಲೋಕಾರ್ಪಣೆ ಕಾರ್ಯಕ್ರಮವು ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ್ ನೀರ್‌ಮಾರ್ಗ ಅವರು ’ವಿವಾಸ್ವತ’ ಕನ್ನಡ ಕಿರುಚಿತ್ರವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಪೀಠ ಕ್ರಿಯೇಶನ್‌ನವರು ವಿವಾಸ್ವತ ಎಂಬ ಕಿರುಚಿತ್ರವನ್ನು ಹೊರತಂದಿದೆ. ಸಮಾಜಕ್ಕೆ ಕನ್ನಡಿ ಹಿಡಿದು ಸಮಾಜವನ್ನು ತಿದ್ದುವ ಕೆಲಸ ಇವರ ಕಿರುಚಿತ್ರ

ಇಸ್ರೇಲ್ ಪತ್ತೇದಾರಿ ಸಾಫ್ಟ್‌ವೇರ್ ಪೆಗಾಸಸ್ ವಿಚಾರ : ಮಂಜೇಶ್ವರದಲ್ಲಿ ಎಐವೈ ಎಫ್‌ನಿಂದ ಪ್ರತಿಭಟನೆ

ಮಂಜೇಶ್ವರ: ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸೇರಿದಂತೆ ದೂರವಾಣಿ ವಿವರಗಳನ್ನು ಸೋರಿಕೆ ಮಾಡಿರುವುದು ಅತ್ಯಂತ ಗಂಭೀರವಾಗಿದೆ.ಇರ ವಿರುದ್ಧ ಎ ಐ ವೈ ಎಫ್ ಮಂಜೇಶ್ವರ ಮಂಡಲ ಸಮಿತಿಯ ವತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನಾ ಧರಣಿ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ರಾಜ್ಯ ಸಮಿತಿ ಸದಸ್ಯ ಟಿ ಕೃಷ್ಣನ್ ಪೆಗಾಸಸ್ ಸರ್ಕಾರಿ ಸಂಸ್ಥೆಗಳಿಗೆ ಮಾತ್ರ ಸೇವೆ ಸಲ್ಲಿಸುತ್ತದೆ. ಆದ್ದರಿಂದ ಕೇಂದ್ರ ಸಚಿವರು ಸೇರಿದಂತೆ

ವರುಣನ ಆರ್ಭಟ ಜಮೀನಿಗೆ ನುಗ್ಗಿದ ನೀರು : ಶುಂಠಿ ಬೆಳೆ ನೀರುಪಾಲು

ಆಲೂರು: ಆಲೂರು ತಾಲೂಕಿನಾದ್ಯಂತ ವರುಣ ಆರ್ಭಟಿಸಿ ಬೊಬ್ಬಿರಿಯುತ್ತಿದ್ದು ತಾಲೂಕು ಪಾಳ್ಯ ಚಂದ್ರಶೇಖರ್ ಎಂಬುವವರು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಡೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆಯುವ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದೆ ಅಲ್ಲದೆ ಭತ್ತದ ನಾಟಿಗಾಗಿ ಸಿದ್ದಪಡಿಸಿದ್ದ ಸಸಿ ಕೂಡ ನೀರಿನಲ್ಲಿ ಕೊಚ್ಚಿ ಹೋಗಿರುವ ಪ್ರಸಂಗ ತಾಲೂಕಿನಲ್ಲಿ ನಡೆದಿದ್ದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆ

ಆರೋಗ್ಯದಿಂದ ಎಲ್ಲರೂ ಎಚ್ಚರದಿಂದ ಇರಿ : ನಾಗಮಂಗಲ ಶಾಸಕ ಸುರೇಶಗೌಡ ಹೇಳಿಕೆ

ನಾಗಮಂಗಲ: ಪ್ರತಿಯೊಬ್ಬರು ಸಮಾಜದಲ್ಲಿ ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಎಲ್ಲರೂ ಆರೋಗ್ಯದಿಂದ ಎಚ್ಚರಿಕೆಯಿಂದ ಇರುವಂತೆ ಶಾಸಕ ಸುರೇಶಗೌಡ ಕರೆ ನೀಡಿದರು. ಅವರಿಂದು ನಾಗಮಂಗಲ ಕಾಲೇಜು ಕ್ರೀಡಾಂಗಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಕೂಲಿ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸುತ್ತ ಕರೋನಾ ಮಹಾಮಾರಿಯ ಕಡಿಮೆ ಯಾಗಿದೆ ಎಂದು ಎಚ್ಚರ ತಪ್ಪಿದರೆ ಅಪಾಯ ಆದ್ದರಿಂದ ಸಾಮಾಜಿಕ ಅಂತರದೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಈ

ಸುರತ್ಕಲ್ ನಲ್ಲಿ ಅಲೆಮಾರಿ ಭಿಕ್ಷುಕ ಮಂದಿಯ ದಾಂಧಲೆ ಮುಕ್ತಗೊಳಿಸಲು ಮನವಿ

 ಸುರತ್ಕಲ್ ಭಾಗದಲ್ಲಿ ಹಲವು ಸಮಯಗಳಿಂದ ಭಿಕ್ಷಾಟನೆಯ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆಯನ್ನು ನೀಡುತ್ತಿದ್ದು ಇದರ ಬಗ್ಗೆ ಹಲವಾರು ಬಾರಿ ಆಪತ್ಭಾಂಧವ ಸಮಾಜ ಸೇವಾ ಸಂಘ(ರಿ.) ಸುರತ್ಕಲ್ ವಿವಿಧ ಇಲಾಖೆಗಳ ಗಮನಕ್ಕೆ ತಂದಿದ್ದರೂ ಅದರ ಬಗ್ಗೆ ಯಾವುದೇ ತರಹದ ಕ್ರಮ ಕೈಗೊಂಡಿಲ್ಲ. ಸುರತ್ಕಲ್ ನಲ್ಲಿ ಹಲವಾರು ದಾನಿಗಳ ನೆರವಿನಿಂದ ಫ್ಲೈ ಓವರ್ ಅಡಿಯನ್ನು ಸ್ವಚ್ಛ ಭಾರತದ ಯೋಜನೆಯಡಿಯಲ್ಲಿ ಸ್ವಚ್ಛ ಸುರತ್ಕಲ್ ಎಂಬ ಯೋಜನೆಯೊಂದಿಗೆ ನಿರ್ಮಿಸಲಾಗಿದ್ದ ಫ್ಲೈ ಓವರ್ ಅಡಿಯಲ್ಲಿ

ಒಲಿಂಪಿಕ್ಸ್‌ನಲ್ಲಿ ಭಾರತ ಶುಭಾರಂಭ : ವೇಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ

ಒಲಿಂಪಿಕ್ಸ್‌ನ ಮೊದಲ ದಿನದಂದು ಪದಕದ ಬೇಟೆ ಆರಂಭಿಸಿದೆ. ಮಹಿಳೆಯರ 49 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದರು. ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ವೇಟ್ ಲಿಫ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೀನಾದ ಝಿಹುಯಿ ಸ್ನ್ಯಾಚ್ ಹಾಗೂ ಕ್ಲೀನ್ ಮತ್ತು ಜೆರ್ಕ್ ಎರಡರಲ್ಲೂ ಒಲಿಂಪಿಕ್ ದಾಖಲೆಯೊಂದಿಗೆ ಚಿನ್ನ ಗೆದ್ದಿದ್ದಾರೆ. ಕ್ಲೀನ್ ಹಾಗೂ ಜರ್ಕ್ ನಲ್ಲಿ ಒಟ್ಟು 110 ಕೆಜಿ ಎತ್ತಿ ಹಿಡಿದಿರುವ ಭಾರತದ

ಪಡುಬಿದ್ರಿಯ ಕಡಲತೀರದಲ್ಲಿ ತೆರವಾಗದ ಟಗ್: ಸ್ಥಳೀಯ ನಿವಾಸಿಗಳಿಗೆ ತೊಂದರೆ

ಕಳೆದ ಚಂಡಮಾರುತದ ಸಂದರ್ಭ ಪಡುಬಿದ್ರಿಯ ಕಡಲತೀರ ಸೇರಿದ ಟಗ್ ತೆರವುಗೊಳಿಸುವಂತೆ ಒತ್ತಾಯಿಸಿದ ಮೀನುಗಾರ ಮುಖಂಡರು ತೆರವುಗೊಳಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ ನೀಡಿದ್ದರು. ಆದರೆ ಇದುವರೆಗೆ ಟಗ್ ತೆರವು ಕಾರ್ಯಕ್ಕೆ ಮುಂದಾಗಿಲ್ಲ. ಮಂಗಳೂರು ಮೂಲದ ಬಿಲಾಲ್ ಸಂಸ್ಥೆ ಪಲ್ಟಿಯಾಗಿದ್ದ ಟಗ್ ತೆರವುಗೊಳಿಸುವ ಗುತ್ತಿಗೆ ಪಡೆದಿದ್ದರೂ, ಬಹಳಷ್ಟು ದಿನಗಳ ಪ್ರಯತ್ನದ ಬಳಿಕ ವಿಫಲಗೊಂಡು ಮತ್ತೊಂದು ಸಂಸ್ಥೆಯ ಸಹಾಯ ಯಾಚಿಸಿ ಉಡುಪಿ ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಿ

ಕಾಪುವಿನಲ್ಲಿ ಹಿರಿಯ ನಾಯಕ ಆಸ್ಕರ್ ಚೇತರಿಕೆಗಾಗಿ ವಿಶೇಷ ಪ್ರಾರ್ಥನೆ

  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಚೇತರಿಕೆಗಾಗಿ ಹಾರೈಸಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ತಾಲೂಕಿನ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಪೊಲಿಪು ಜಾಮಿಯಾ ಮಸೀದಿ, ಉದ್ಯಾವರ ಚರ್ಚ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ, ಉದ್ಯಾವರ ಮಹಾಗಣಪತಿ ದೇವಸ್ಥಾನ ಸಹಿತವಾಗಿ ವಿವಿಧ