ಮಂಗಳೂರು ಮಹಾನಗರ ಪಾಲಿಕೆಯ ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಗರ ಪಾಲಿಕೆಯ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದಅಕ್ಷಯ್ ಶ್ರೀಧರ್ , ಮಂಗಳೂರು ಮಹಾನಗರ ಪಾಲಿಕೆಯ
ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ ಮಾವಿನಹಣ್ಣಿಗೆ ಬೇಡಿಕೆ ಇರುತ್ತದೆ. ಆದರೆ ಈಗ ಕಾಲ ಬದಲಾಗಿ ಮಾವಿನ ಎಲೆಗೂ ಕೂಡ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ಇದು ಆಚ್ಚರಿಯ ಸಂಗತಿಯಾದರೂ ನಂಬಲೇಬೇಕು ಹೌದು ಕಾಲಕ್ಕೆ ತಕ್ಕಂತೆ ಕೋಲ.! ಈಗ ಬದಲಾಗಿದೆ ಆನ್‍ಲೈನ್ ಶಾಪಿಂಗ್ ಆ್ಯಪ್ ಒಂದಾದ ಅಮೇಜಾನ್‍ನಲ್ಲಿ 21 ಮಾವಿನ ಎಲೆಗೆ 290 ರೂಪಾಯಿಯಾಗಿದ್ದು 64% ಡಿಸ್ಕೌಂಟ್ ಆಗಿ 109 ರೂಪಾಯಿಯಾಗಿದೆ. ಮೊನ್ನೆ ಹಲಸಿನ ಬೀಜಕ್ಕೆ ಇಂದು ಮಾವಿನ ಎಲೆಗೆ ಡಿಮ್ಯಾಂಡ್ ಹೆಚ್ಚಾಗಿದ್ದು.
ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.ಕನ್ನಡ ಪ್ರಭ ದಿನ ಪತ್ರಿಕೆಯಲ್ಲಿ 2020, ನವಂಬರ್ 25ರಂದು ಪ್ರಕಟಗೊಂಡ ಸಂದೀಪ್ ವಾಗ್ಲೆ ಅವರ ವರದಿ‘ ಕೋಮು ಸೌಹಾರ್ದ ತೆಗೆ ಸಾಕ್ಷಿ-ಸೇತುವಾದ ಯಕ್ಷಗಾನ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ.
ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ ಬೆಳಪು ನಿವಾಸಿ ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಬ್ದುಲ್ (25) ಎಂದು ಗುರುತಿಸಲಾಗಿದೆ. ಪಡುಬಿದ್ರಿ ಕಡೆಯಿಂದ ತನ್ನ ಸ್ಕೂಟರಲ್ಲಿ ಬರುತ್ತಿದ್ದ ಯುವಕನಿಗೆ ನವಿಲೊಂದು ಹಾರಿಕೊಂಡು ಬಂದು ಡಿಕ್ಕಿಯಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ ಸಚಿವರನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ವಿಚಾರಗಳ ಚರ್ಚೆಯಾದರೂ ಅದನ್ನು ಶಾಸಕರ ಬಳಿ ಮಾತನಾಡದೆ ಪಕ್ಷದ ಶಿಸ್ತಿಗೆ ಬದ್ಧವಾಗಿರುವ
ಕಾರು ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಿಯೂರು ಸಮೀಪದ ಪೆಜತಕಟ್ಟೆ ಎಂಬಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಕಟಪಾಡಿ ಪಳ್ಳಿಗುಡ್ಡೆ ನಿವಾಸಿ ರವೀಂದ್ರ ಪೂಜಾರಿ(37) ಮೃತಪಟ್ಟವರಾಗಿದ್ದು,ಇವರು ಭಾನುವಾರ ರಾತ್ರಿ ಎಲ್ಲೂರಿನಲ್ಲಿರುವ ಸ್ನೇಹಿತ ಮನೆಗೆ ಹೋಗಿ ಹಿಂತಿರುಗಿ ಬರುತ್ತಿರುವ ವೇಳೆ ಮಣ್ಣಿನ ರಸ್ತೆಗಿಳಿದ ಕಾರು ಡಿಕ್ಕಿಯಾದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.ಘಟನೆ ತಡರಾತ್ರಿ
ಕುಂದಾಪುರ: ನಳಿನ್ ಕುಮಾರ್ ಕಟೀಲ್ ಒಬ್ಬ ಸೂಕ್ಷ್ಮ ಜೀವಿ. ಅವರದ್ದು ಎನ್ನಲಾದ ಧ್ವನಿ ಸುರುಳಿ ಅವರದ್ದಲ್ಲ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಕಾಳವಾರ ಪಂಚಾಯತ್ ನ ಕಾರ್ಯಕ್ರಮಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನನಗೆ ಆ ಆಡಿಯೋದ ಮೇಲೆ ಸಂಶಯ ಇದೆ. ಅದರಲ್ಲಿ ಇರುವ ಧ್ವನಿ ಭಾಜಪ ದ ಕರ್ನಾಟಕ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದಲ್ಲ. ಇದರ ವಿರುದ್ದ ಸೂಕ್ತ ತನಿಖೆ ನಡೆಸುವಂತೆ
ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕೊಠಡಿಯ ಸಮೀಪವೆ ಇದ್ದ ಲ್ಯಾಬ್‍ನಲ್ಲಿ ಬೆಂಕಿ ಅವಘಡ ಸಂಭವಿಸಿ ಇಡೀ ಲ್ಯಾಬ್ ಹೊತ್ತಿ ಉರಿದ ಘಟನೆ ಬಬ್ಬುಕಟ್ಟೆಯ ಖಾಸಗಿ ಮಹಿಳಾ ಕಾಲೇಜಿನಲ್ಲಿ ನಡೆದಿದೆ. ಬೆಂಕಿ ಅವಘಡ ಸಂಭವಿಸಿದ ಲ್ಯಾಬ್ ಇದ್ದ ಕಟ್ಟಡದಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಅವರನ್ನೆಲ್ಲಾ ಡ್ಯುಟಿಯಲ್ಲಿದ್ದ ಶಿಕ್ಷಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿ ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ. ಸರ್ವಿಸ್
ಉಡುಪಿಯ ವಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ರಮದಲ್ಲಿ ಚಿತ್ರನಟ ರಕ್ಷಿತ್ ಶೆಟ್ಟಿ ಭಾಗಿಯಾದರು. ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಪ್ರತಿಷ್ಠಾನದ ಸಂಯೋಜನೆಯಲ್ಲಿ ಕೃಷಿ ಕಾರ್ಯ ಆಯೋಜಿಸಲಾಗಿತ್ತು. ಬ್ರಹ್ಮಾವರ ತಾಲೂಕು ವ್ಯಾಪ್ತಿಯ ವಾರಂಬಳ್ಳಿ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ನಟ ರಕ್ಷಿತ್ ಶೆಟ್ಟಿ, ಶಾಸಕ ರಘುಪತಿ ಭಟ್ ಮತ್ತು ಸಾಮಾಜಿಕ ಕ್ಷೇತ್ರದ ಗಣ್ಯರು ಭೂ ಮಾತೆಗೆ ಹಾಲನ್ನು ಅರ್ಪಿಸಿ
ಕೋವಿಡ್ ಭೀತಿ ಮಧ್ಯೆಯೂ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಮಂಗಳೂರಿನ ನಂತೂರಿನ ಪದವು ಹಾಗೂ ಕಪಿತಾನಿಯ ಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರು ಭೇಟಿ ನೀಡಿ. ಪರಿಶೀಲನೆ ನಡೆಸಿದರು. ಕೊರೋನ ಮಾರ್ಗಸೂಚಿ ಅನ್ವಯ ಮುಂಜಾಗ್ರತಾ


















