Home Archive by category ಕರಾವಳಿ (Page 901)

ಉಡುಪಿಯಲ್ಲಿ ಮಗು ಅಪಹರಣ ಪ್ರಕರಣ: ಆರೋಪಿಯ ಬಂಧನ

ಉಡುಪಿಯ ಕರಾವಳಿ ಬೈಪಾಸ್ ಬಳಿ ಶಿವರಾಜ್ ಎನ್ನುವ ಎರಡುವರೆ ವರುಷದ ಮಗುವೊಂದನ್ನ ಅಪಹರಣ ಮಾಡಲಾಗಿತ್ತು.ಕಾರವಳಿ ಬೈಪಾಸ್ ಬಳಿಯ ಭಾರತಿ ಮತ್ತು ಅರುಣ್ ಎನ್ನುವವರ ಮಗುವನ್ನು ಪರಿಚಯದ ವ್ಯಕ್ತಿಯೇ ಅಪಹರಿಸಿದ್ದ. ಮಗುವಿಗೆ ಚಾಹಾ ಕುಡಿಸ್ತೇನೆ ಎಂದು ಕರೆದುಕೊಂಡು ಹೋಗಿದ್ದ ಬಾಗಲಕೋಟೆ ಮೂಲದ ಪರುಶರಾಮ ಎನ್ನುವ ವ್ಯಕ್ತಿ ವಾಪಸ್ಸು ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಉಡುಪಿ

ಕೋವಿಡ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಶಾಲೆ ಪುನರಾರಂಭಿಸಿ : ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಮನವಿ

ಬಂಟ್ವಾಳ: ರಾಜ್ಯದ ಅಸಂಖ್ಯಾತ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಕೋವಿಡ್ ಕಾರಣಕ್ಕಾಗಿ ಸ್ಥಗಿತಗೊಂಡಿರುವ ಶಾಲೆಯನ್ನು ಪುನಾರಂಭಿಸಬೇಕು ಎಂದು ಆಗ್ರಹಿಸಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಸೋಮವಾರ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಪ್ರಕಾಶ್ ಅಂಚನ್ ಕೆಲ

ಬಂಟ್ವಾಳದಲ್ಲಿ ಪೈಪ್ ಲೈನ್ ಕಾಮಗಾರಿ ಅಪೂರ್ಣ: ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿಯಿಂದ ಜಕ್ರಿಬೆಟ್ಟುವರೆಗೆ ಎಂಆರ್‌ಪಿಎಲ್ ಸಂಸ್ಥೆಗೆ ನೀರು ಸರಬರಾಜಾಗುವ ಪೈಪ್‌ಲೈನ್ ಸ್ಥಳಾಂತರ ಕಾಮಗಾರಿ ನಡೆದಿದ್ದು, ಅಪೂರ್ಣ ಪೈಪ್‌ಲೈನ್ ಕಾಮಗಾರಿಯಿಂದಾಗಿ ಅಲ್ಲಲಿ ದೊಡ್ಡ ಹೊಂಡಗಳನ್ನು ತೋಡಿ ಮುಚ್ಚದೆ ಬಿಟ್ಟು ಅಪಾಯಕ್ಕೆ ಆಹ್ವಾನ ನೀಡಲಾಗಿದೆ. ಕಾಂಕ್ರೀಟ್ ರಸ್ತೆಗಳನ್ನು ತುಂಡರಿಸಿ ಪೈಪ್‌ಲೈನ್ ಹಾಕಿದ ಬಳಿಕ ರಸ್ತೆ ಪುನರ್ ನಿರ್ಮಿಸಿಕೊಡದೆ

ಕುತ್ತೆತ್ತೂರು ಗ್ರಾಮದಲ್ಲಿ ಕೃಷಿ ಮೀನುಗಾರ ದಿನಾಚರಣೆ

ಪೆರ್ಮುದೆ ಗ್ರಾಮ ಪಂಚಾಯತ್ ಯ ವ್ಯಾಪ್ತಿಯ ಕುತ್ತೆತ್ತೂರು ಗ್ರಾಮದ ಪಡುಪದವು ಮಾಧವ ಭಟ್ ರವರ ಮನೆ ಬಳಿ ಕೃಷಿ ಮೀನು ಗಾರ ದಿನಾಚರಣೆ ಮತ್ತು ಮಾಹಿತಿ ಕಾರ್ಯಗಾರವನ್ನು ಮುಲ್ಕಿ ಮೂಡಬಿದ್ರಿ  ಶಾಸಕರಾದ  ಉಮನಾಥ್ ಕೋಟ್ಯಾನ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಧಾನ ಮಂತ್ರಿ ಯಾದ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯ ಕ್ರಮದಲ್ಲಿ ಜಲಸಂರಕ್ಷಣೆಗಾಗಿ ಜನರಿಗೆ ನೀಡಲಾದ ಮನವಿಗೆ ಪೇರಿತರಾಗಿ ಸುಮಾರು ೫೦ಲಕ್ಷಕ್ಕೂ ಮೇಲ್ಪಟ್ಟು ಖರ್ಚಮಾಡಿ

ಬೆಲೆಯೇರಿಕೆಯ ವಿರುದ್ಧ ಮಂಗಳೂರಿನಲ್ಲಿ ವಿಸ್ತಾರಗೊಳ್ಳುತ್ತಿರುವ ಚಳುವಳಿ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಗಳು ವಿಪರೀತವಾಗಿ ಹೆಚ್ಚಿದ್ದು,ಅದರ ಜೊತೆಗೆ ವಿದ್ಯುತ್ ದರವನ್ನು ಕೂಡ ಹೆಚ್ಚಿಸಿ ಜನಸಾಮಾನ್ಯರ ಬದುಕಿಗೆ ಕೊಡಲಿ ಪೆಟ್ಟನ್ನು ನೀಡಿದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ಧಿಕ್ಕರಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ವಾರಾಚರಣೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು,ಇಂದು ಕುಲಶೇಖರ ಹಾಗೂ ಜಪ್ಪಿನಮೊಗರುನಲ್ಲಿ ಪ್ರತಿಭಟನೆ ನಡೆಯಿತು.

ಪುತ್ತೂರಿನಲ್ಲಿ ಮನದಾಳವನ್ನು ಬಿಚ್ಚಿಟ್ಟ ’ಗಿಣಿರಾಮ’ ಖ್ಯಾತಿಯ ರಿತ್ವಿಕ್ ಮಠದ್

ಪುತ್ತೂರು: ತಮ್ಮ ರಗಡ್ ಲುಕ್, ’ಮಾಸ್ತರ ಮಗಳೇ’ ಎಂಬ ಗಡಸು ದನಿಯ ಡೈಲಾಗ್ ನಿಂದಲೇ ಕನ್ನಡಿಗರ ಮನಗೆದ್ದ ’ಗಿಣಿರಾಮ’ ಧಾರವಾಹಿ ಖ್ಯಾತಿಯ ಶಿವರಾಮ್ ಅಲಿಯಾಸ್ ರಿತ್ವಿಕ್ ಮಠದ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದಿದ್ದು, ಕ್ಯಾಮರಾ ಮುಂದೆ ಒಂದಿಷ್ಟು ಮನಬಿಚ್ಚಿ ಮಾತನಾಡಿದ್ದಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಆರಾಧ್ಯ ಭಕ್ತರಾಗಿರುವ ರಿತ್ವಿಕ್ ಮಠದ್ ಅವರು ಇದು ನಾಲ್ಕನೇ ಬಾರಿ ಪುತ್ತೂರಿನೊಡೆಯ ಮಹಾಲಿಂಗೇಶ್ವರನ ದರ್ಶನ ಮಾಡಿರೋದಂತೆ. ’ತಮ್ಮ

ಪ್ರವಾಸೋದ್ಯಮಕ್ಕೆ ಪೂರಕವಾಗಿ ರೈಲ್ವೇ ಸೌಲಭ್ಯಗಳು ಮೇಲ್ದರ್ಜೆಗೆ: ಶಾಸಕ ಸಂಜೀವ ಮಠಂದೂರು

ಪುತ್ತೂರು: ಪ್ರದಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರೈಲ್ವೇ ಇಲಾಖೆಯು ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಪ್ರವಾಸೋದ್ಯಮಕ್ಕೆ ಪೂರಕವಾಗಿ ರೈಲ್ವೇ ಸಂಚಾರ ವ್ಯವಸ್ಥೆಯಲ್ಲಿ ಪ್ರಯಾಣಿಕ ರೈಲುಗಳಿಗೆ ಅತ್ಯಾಧುನಿಕ ಮಾದರಿಯ ಹವಾ ನಿಯಂತ್ರಿಣ ವಿಸ್ಟಾ ಡೋಂ ಬೋಗಿಗಳನ್ನು ಅಳವಡಿಸಲಾಗುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಭಾನುವಾರ ಕಬಕ ಪುತ್ತೂರು ಆದರ್ಶ ರೈಲು ನಿಲ್ದಾಣದಲ್ಲಿ ಎಸ್ಟಾ ಡೋಂ ಬೋಗಿಗಳನ್ನು ಅಳವಡಿಸಿದ

ರಾಜ್ಯದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಗೆಹ್ಲೋಟ್ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಗೆಹ್ಲೋಟ್ ಅವರು ಒಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಆಗಿದ್ದರು. ರಾಷ್ಟ್ರಪತಿ ಭವನವು

ಡಿಕೆಶಿ ಕಪಾಳಮೋಕ್ಷ ವಿಚಾರ: ಮಂಗಳೂರಿನಲ್ಲಿ ನಳಿನ್ ಕುಮಾರ್ ಪ್ರತಿಕ್ರಿಯೆ

ಮಂಗಳೂರು: ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ವಿಚಾರಕ್ಕೆ ಸಂಬಂಧಿಸಿ ಮಂಗಳೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು, ಯಾರ ಬಗ್ಗೆಯೂ ವೈಯಕ್ತಿಯವಾಗಿ ಮಾತನಾಡಲ್ಲ, ಆದ್ರೆ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ. ಕಾರ್ಯಕರ್ತರು ನಾಯಕರ ಬಳಿ ಅಪೇಕ್ಷೆ ಮತ್ತು ಬೇಡಿಕೆಯಿಟ್ಟು ಬರುತ್ತಾರೆ. ಅವರು ಬಂದಾಗ ಗೌರವಯುತವಾಗಿ ನಡೆಸಿಕೊಳ್ಳಬೇಕಾಗಿರೋದು

ಮಂಗಳೂರು-ಯಶವಂತಪುರ ಹಗಲು ರೈಲು ’ವಿಸ್ಟಾಡೋಮ್’ ಗೆ ಚಾಲನೆ

ಮಂಗಳೂರು-ಯಶವಂತಪುರ ನಡುವೆ ಹಗಲು ಸಂಚರಿಸುವ ಆಕರ್ಷಕ ರೈಲು ’ವಿಸ್ಟಾಡೋಮ್’ ಗೆ ಇಂದು ಮಂಗಳೂರು ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ರೈಲ್ವೆ ಇಲಾಖೆಯು ಹೆಚ್ಚು ಮುತುವರ್ಜಿ ವಹಿಸಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಪ್ರಯತ್ನ ಮಾಡಿದೆ. ಸಾರ್ವಜನಿಕರು ಅನೇಕ ಬೇಡಿಕೆಗಳನ್ಬು ಮುಂದಿಟ್ಟಿದ್ದು, ಒಂದೊಂದೇ ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದೆ. 2014ರವರೆಗೆ