Home Archive by category ಕ್ರೈಮ್ (Page 17)

ಕುಡಿತದ ಮತ್ತಿನಲ್ಲಿ ತಮ್ಮನಿಂದಲೇ ಅಣ್ಣನ ಕೊಲೆ

ವಿಟ್ಲ: ಕುಡಿತದ ಮತ್ತಿನಲ್ಲಿ ತಮ್ಮನೋರ್ವ ಅಣ್ಣನನ್ನು ಹೊಡೆದು ಕೊಲೆ ನಡೆಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದ್ದು, ಘಟನಾ ಸ್ಥಳಕ್ಕೆ ಎಎಸ್ಪಿ ಕುಮಾರ ಚಂದ್ರರವರು ಭೇಟಿ ನೀಡಿದ್ದಾರೆ. ವಿಟ್ಲ ಪಡ್ನೂರು ಗ್ರಾಮದ ಕೊಡಂಗೆ ದಿ. ಸೀನಪ್ಪ ದೇವಾಡಿಗರವರ ಪುತ್ರ ಗಣೇಶ್ ಬಂಗೇರ(54)

ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಪ್ರಗತಿಪರ ಕೃಷಿಕರಾದ ಭಾಸ್ಕರ್ ಹೆಗ್ಡೆ ತಮ್ಮ ಮನೆಯಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ತೆಳ್ಳಾರಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ನೀಲೆಬೆಟ್ಟು ಗುತ್ತು ಮನೆ ನಿವಾಸಿ ಭಾಸ್ಕರ ಹೆಗ್ಡೆ (63) ಆತ್ಮಹತ್ಯೆ ಮಾಡಿಕೊಂಡವರು. ಇಂದು ಬೆಳಗ್ಗೆ ಪತ್ನಿ ಅಡುಗೆ ಮನೆಯಲ್ಲಿದ್ದ ವೇಳೆ ಭಾಸ್ಕರ ಹೆಗ್ಡೆ ಮನೆಯಲ್ಲಿದ್ದ ನಾಡಕೋವಿಯಿಂದ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಉಳ್ಳಾಲದಲ್ಲಿ ಸರಣಿ ಅಪಘಾತ

ಉಳ್ಳಾಲ : ಐದು ವಾಹನಗಳ ನಡುವೆ ಸರಣಿ ಅಪಘಾತ ನಡೆದು ಹಲವರು ಗಾಯಗೊಂಡ ಘಟನೆ ರಾ.ಹೆ 66 ರ ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಭಾನುವಾರ ತಡರಾತ್ರಿ ವೇಳೆ ಸಂಭವಿಸಿದೆ.ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಇನೋವಾ ಕಾರು ಎದುರುಗಡೆಯಿದ್ದ ವಾಹನವೊಂದನ್ನು ಓವರ್ ಟೇಕ್ ನಡೆಸಲು ಏಕಾಏಕಿ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂಬದಿಯಲ್ಲಿದ್ದ ಐ20 ಕಾರು ಇನೋವಾ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಬಳಿಕ ರಸ್ತೆಯಲ್ಲಿ ಒಂದು ಸುತ್ತು ತಿರುಗಿದ ಪರಿಣಾಮ, ಮತ್ತದೇ

ಸೌಪರ್ಣಿಕಾ ನದಿಯಲ್ಲಿ ತೀರ್ಥಸ್ನಾನದ ವೇಳೆ ಕೊಚ್ಚಿಹೋದ ಮಹಿಳೆ : ಶವ ಪತ್ತೆ

ಬೈಂದೂರು : ಕೊಲ್ಲೂರಿಗೆ ಯಾತ್ರಾರ್ಥಿಗಳಾಗಿ ಬಂದು, ಸೌಪರ್ಣಿಕಾ ನದಿಯಲ್ಲಿ ತೀರ್ಥ ಸ್ನಾನ ಮಾಡುವಾಗ ಆಕಸ್ಮಿಕವಾಗಿ ಕಾಲುಜಾರಿ ನದಿಪಾಲಾದ ಮಹಿಳೆಯ ಶವ ಇಂದು ಭಾನುವಾರ ಮಧ್ಯಾನ್ಹ ನಡೆದಿದೆ. ಘಟನಾ ಸ್ಥಳದಿಂದ ಮೂರೂವರೆ ಕಿ. ಮೀ. ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಮುಳುಗು ತಜ್ಞ , ಸಾಹಸಿಗ ಈಶ್ವರ್ ಮಲ್ಪೆ ಅವರು ಸತತ ಪರಿಶ್ರಮದಿಂದ ಹರಿವ ನೀರಿನ ಸೆಳೆತವನ್ನೂ ಜಯಿಸಿ, ಸಾಹಸದಿಂದ ಶವ ಪತ್ತೆಹಚ್ಚಿದ್ದಾರೆ. ಹೌದು ಆದರೆ, ಈಶ್ವರ್ ಅವರು ತಮ್ಮ ಸಂಗಡಿಗರೊಂದಿಗೆ ಛಲ

ಪಡುಮಾರ್ನಾಡು ಮಹಿಳೆಗೆ ಹಲ್ಲೆ : ಇಬ್ಬರ ಬಂಧನ

ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ ಕಲ್ಲೊಟ್ಟುವಿನಲ್ಲಿ ಕುಮ್ಮಿ ಜಾಗದ ವಿಚಾರದಲ್ಲಿ ವಿವಾದ ಉಂಟಾಗಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಶನಿವಾರ ಬಂದಿ ಸಿದ್ದಾರೆ. ಪಡುಮಾರ್ನಾಡು ಗ್ರಾ.ಪಂ. ಉಪಾಧ್ಯಕ್ಷ ಅಭಿನಂದನ್ ಬಲ್ಲಾಳ್ ಮತ್ತು ಅವರ ಸ್ನೇಹಿತ ಹರೀಶ್ ಹೆಗ್ಡೆ ಬಂಧಿತರು. ಪಡುಮಾರ್ನಾಡಿನಲ್ಲಿ ಕುಮ್ಮಿ ಹಕ್ಕಿಗೆ ಸಂಬಂಧಿಸಿದಂತೆ ಹರೀಶ್ ಮತ್ತು ಶಕುಂತಳ ಮಧ್ಯೆ ವ್ಯಾಜ್ಯ

ಬೈಕ್ ಡಿಕ್ಕಿ ಹೊಡೆದು ಬಾಲಕಿ ಮೃತ್ಯು

ಸುಳ್ಯದ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಮೃತಪಟ್ಟ ಘಟನೆ ವರದಿಯಾಗಿದೆ. ಪಾಲಡ್ಕದ ರಶೀದ್ ಎಂಬವರ ಪುತ್ರಿ ರಿಫಾ (7 ವರ್ಷ) ಇಂದು ಬೆಳಿಗ್ಗೆ 8.45ರ ಸುಮಾರಿಗೆ ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿ ಮನೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತದ್ದ ಬೈಕ್ ಡಿಕ್ಕಿ ಹೊಡೆಯಿತು. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ

ಕಡಿಮೆ ಅಂಕಕ್ಕೆ ಮನನೊಂದು ಸೇತುವೆಯಿಂದ ನದಿಗೆ ಜಿಗಿದ ವಿದ್ಯಾರ್ಥಿಯ ಮೃತದೇಹ ಪತ್ತೆ

ಕುಂದಾಪುರ : ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಕಾರಣಕ್ಕೆ ಮನನೊಂದು ಸೇತುವೆ ಮೇಲಿನಿಂದ ತುಂಬಿ ಹರಿಯುತ್ತಿರುವ ನದಿಗೆ ಹಾರಿಕೊಂಡ ನಗರದ ವಡೇರಹೋಬಳಿ ಜೆಎಲ್‍ಬಿ ರಸ್ತೆಯ ನಿವಾಸಿ ಸಾಯೀಶ್ ಶೆಟ್ಟಿ ಮೃತದೇಹ ಶುಕ್ರವಾರ ಬೆಳಿಗ್ಗೆ ನಾವುಂದದ ಸಮುದ್ರತೀರದಲ್ಲಿ ಪತ್ತೆಯಾಗಿದೆ. ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಸಾಯೀಶ್ ಶೆಟ್ಟಿ ಸೈಕಲ್‍ನಲ್ಲಿ ಹೇರಿಕುದ್ರು ಸೇತುವೆಯ ಮೇಲೆ ಬಂದು, ಬಳಿಕ ಸೈಕಲ್ ಹಾಗೂ ಮೊಬೈಲ್ ಅನ್ನು ಮೇಲೆ

ಉಳ್ಳಾಲ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

ಉಳ್ಳಾಲ, ಸೆ.3; ಹಿಂದೂ ಯುವಸೇನೆಯ ಸಕ್ರಿಯ ಕಾರ್ಯಕರ್ತ ಕುಂಪಲ ಹನುಮಾನ್ ನಗರ ನಿವಾಸಿ ಜಯಂತ್  ಎಸ್. ಕುಂಪಲ(49)  ಕೃಷ್ಣ ನಗರದ  ಬಾಡಿಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಕ್ಷಾ ಚಾಲಕನಾಗಿದ್ದ ಅವರು ಕುಂಪಲ ಹನುಮಾನ್ ನಗರದಲ್ಲಿ ನೂತನ ಮನೆ ನಿರ್ಮಾಣದ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಈ ನಡುವೆ ಆತ್ಮಹತ್ಯೆಗೈದಿರುವುದು ಸಂಶಯಕ್ಕೆಡೆ ಮಾಡಿದೆ. ಕೂಳೂರಿನಲ್ಲಿ ನಿನ್ನೆ ನಡೆದ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಯಂತ್ ,

ಕಡಬ : ಮನೆಯಿಂದ ಚಿನ್ನಾಭರಣ ಹಾಗೂ ನಗದು ಕಳ್ಳತನ

ಕಡಬ ತಾಲೂಕಿನ ಗೋಳಿ ತೊಟ್ಟು ಗ್ರಾಮದ ಆರಂತಬೈಲು ಎಂಬಲ್ಲಿ ನಿನ್ನೆ ತಡರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಗೆ ನುಗ್ಗಿದ ಕಳ್ಳರು 105 ಗ್ರಾಂ ಚಿನ್ನ ಹಾಗೂ 8 ಸಾವಿರ ರೂ ನಗದು ಸೇರಿ ಒಟ್ಟು 5.30 ಲಕ್ಷ ಮೌಲ್ಯದ ವಸ್ತುವನ್ನು ದೋಚಿ ಪರಾರಿಯಾಗಿದ್ದಾರೆ.ಮನೆಯ ಮಾಲೀಕ ರಮ್ಲತ್ ಹಾಗೂ ಅವರ ಪತ್ನಿ ಖತೀಜಮ್ಮ ರವರು ದುಬೈಯಿಂದ ಬರುವ ತಮ್ಮ ಪುತ್ರನನ್ನು ಕರೆ ತರಲು ನಿನ್ನೆ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ವಾಪಸ್ ತಡರಾತ್ರಿ ಮನೆಗೆ ಬಂದ […]

ಮೂಡುಬಿದರೆ: ಮನೆಗೆ ನುಗ್ಗಿ ಮಹಿಳೆಗೆ ತಲವಾರು ಝಳಪಿಸಿ ಕರಿಮಣಿ ಸರ ದರೋಡೆ

ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಬಡಗ ಮಿಜಾರು ಗ್ರಾಮದ ಬೇರಿಂಜೆಯ ಮನೆಯೊಂದಕ್ಕೆ ಮುಸುಕುಧಾರಿ ವ್ಯಕ್ತಿಗಳಬ್ಬರು ನುಗ್ಗಿ ತಲವಾರು ಝಳಪಿಸಿ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 5 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ನಡೆದಿದೆ. ಸ್ಥಳೀಯ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ದುಡಿಯುತ್ತಿರುವ ಕಮಲ ಶೆಟ್ಟಿ ದರೋಡೆಗೊಳಗಾದ ಮಹಿಳೆ ಇವರ ಇಬ್ಬರು ಗಂಡು ಮಕ್ಕಳು ಮೃತಪಟ್ಟಿದ್ದು, ಪತಿ ಕಳೆದ ವರ್ಷ ನಿಧನ ಹೊಂದಿದ್ದರು.