Home Archive by category ಕ್ರೈಮ್ (Page 2)

ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್- 6 ಮಂದಿಯ ಬಂಧನ

ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಐವರನ್ನು ಬಂಧಿಸಿದ್ದಾರೆ. ಗುಪ್ತಚರ ಮಾಹಿತಿಯ ಮೇರೆಗೆ ತ್ವರಿತವಾಗಿ ಕಾರ್ಯನಿರ್ವಹಿಸಿದ

ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ತಡೆಗಟ್ಟುವ ಉದ್ದೇಶದಿಂದ ಆರೋಪಿಗಳ ಬಂಧನ

ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿರುವ ಆರೋಪಿಗಳ ಬಗ್ಗೆ ಕಡಿವಾಣ ಹಾಕಲು ಹಾಗೂ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ತಡೆಗಟ್ಟುವ ಉದ್ದೇಶದಿಂದ ಪದೇ ಪದೇ ಪ್ರಕರಣಗಳಲ್ಲಿ ಭಾಗಿಯಾಗಿರುವ ಜಿಲ್ಲೆಯ ಹಲವು ಠಾಣೆಯಲ್ಲಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ವಿರುದ್ದ ಪಿಟ್ ಎನ್.ಡಿ.ಪಿ.ಎಸ್ ಕಾಯಿದೆ ಅಡಿಯಲ್ಲಿ ಕೃಷ್ಣ ಆಚಾರಿ @ ಕೃಷ್ಣ(43), ಕೊಳಲಗಿರಿ ಉಪ್ಪೂರು ಗ್ರಾಮ, ಬ್ರಹ್ಮಾವರದ ಅಬ್ದುಲ್‌ ಜಬ್ಬಾರ್‌ @ ಜಬ್ಬಾರ್‌ (27),

ಮಂಗಳೂರು:ಸುಹಾಸ್ ಶೆಟ್ಟಿ ಹತ್ಯೆ: 8 ಆರೋಪಿಗಳ ಬಂಧನ:ಗೃಹ ಸಚಿವ ಡಾ. ಜಿ. ಪರಮೇಶ್ವರ್

ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ ಎಲ್ಲ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ’ ಎಂದರು. ಆರೋಪಿಗಳ ವಿವರ ನೀಡಿದ ಪೊಲೀಸ್ ಕಮಿಷನರ್ ಅನುಪಮ್‌ ಅಗ್ರವಾಲ್ ‘ಕಿನ್ನಿಪದವಿನಲ್ಲಿ ಮೇ 1 ರಂದು ರಾತ್ರಿ ಸುಹಾಸ್ ಶೆಟ್ಟಿ ಕೊಲೆ ನಡೆದಿತ್ತು. ಕಿನ್ನಿಪದವಿನಲ್ಲಿ ವಾಸವಾಗಿರುವ

ಮಂಜೇಶ್ವರ: ವ್ಯಕ್ತಿಯೋರ್ವನನ್ನು ಇರಿದು ಕೊಲೆ

ಮಂಜೇಶ್ವರ : ವ್ಯಕ್ತಿಯೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಮಂಜೇಶ್ವರದ ಉಪ್ಪಳದಲ್ಲಿ ನಡೆದಿದೆ. ಕಣ್ಣೂರು ಪಯ್ಯನ್ನೂರು ನಿವಾಸಿ ಹಾಗೂ ಉಪ್ಪಳ ಮೀನು ಮಾರುಕಟ್ಟೆ ಸಮೀಪದ ಫ್ಲಾಟಿನ ನೌಕರನಾಗಿರುವ ಸುರೇಶ್ ಕುಮಾರ್ (48) ಸಾವನ್ನಪ್ಪಿದ ದುರ್ದೈವಿ. ಮಂಗಳವಾರ ರಾತ್ರಿ ಉಪ್ಪಳ ಮೀನು ಮಾರುಕಟ್ಟೆ ಪರಿಸರದಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿ ಉಪ್ಪಳ ಫತ್ವಾಡಿ ಕಾರ್ಗಿಲ್ ನಿವಾಸಿ ಸವಾದ್( 23) ಎಂಬಾತನನ್ನು ಮಂಜೇಶ್ವರ ಪೊಲೀಸರು  ವಶಕ್ಕೆ ತೆಗೆದಿದ್ದಾರೆ.

ಮುಲ್ಕಿ: ಪತ್ನಿ, ಮಗುವನ್ನು ಹತ್ಯೆಗೈದು ಪತಿ ಆತ್ಮಹತ್ಯೆ

ಮುಲ್ಕಿ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಸಮೀಪದ ಬಹು‌ಮಹಡಿ ಕಟ್ಟಡದಲ್ಲಿ ವಾಸವಿದ್ಧ ವ್ಯಕ್ತಿನೋರ್ವ ಪತ್ನಿ.ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಡಿದ್ದಾನೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪಕ್ಷಿಕೆರೆ ಸ್ಧಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದೆ.ಪತ್ನಿ ಪ್ರಿಯಾಂಕ (28) ಮಗು ಹೃದಯ್ (4) ಹತ್ಯೆಗೀಡಾದ ದುದೈರ್ವಿಗಳು ಎಂದು ತಿಳಿದು ಬಂದಿದೆ.ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದೆ.

ಕಾರ್ಕಳ: ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿದ ಪತ್ನಿ

ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ  ದೆಪ್ಪುಜೆಯಲ್ಲಿ ನಡೆದಿದೆ. ಪ್ರತಿಮಾ ಎಂಬಾಕೆಯೇ ತನ್ನ ಪತಿಗೆ ವಿಷವುಣಿಸಿ ಕೊಂದ ಅರೋಪಿಯಾಗಿದ್ದಾಳೆ.ಈಕೆಗೆ ಕೆಲವು ವರ್ಷಗಳ ಹಿಂದೆ ಬಾಲಕೃಷ್ಣ ಎನ್ನುವವರ ಜೊತೆಗೆ ಮದುವೆಯಾಗಿತ್ತು.ಈಕೆಗೆ ಈ ಹಿಂದಿನಿಂದಲೂ ಹಿರ್ಗಾನದ ದಿಲೀಪದ ಎನ್ನುವವನ ಜೊತೆಗೆ ಸಂಭಧವಿತ್ತು. ರೀಲ್ಸ್ ಹುಚ್ಚು

ಮಂಗಳೂರು: ಲೋಟಸ್ ಬಿಲ್ಡರ್ಸ್‌ನ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಇಬ್ಬರ ಸೆರೆ

ಮಂಗಳೂರಿನ ಪ್ರಖ್ಯಾತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಇಬ್ಬರು ಯುವಕರು ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕರನ್ನು ಬಂಧಿಸಿದ್ದಾರೆ. ಖ್ಯಾತ ಬಿಲ್ಡರ್ ಲೋಟಸ್ ಪ್ರಾಪರ್ಟೀಸ್ ಪಾಲುದಾರ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಏರ್ಪೋರ್ಟಿನಿಂದ ಕಾರಿನಲ್ಲಿ ಬರುತ್ತಿರುವಾಗ ಈ ಯುವಕರ ಕಾರನ್ನು ಓವರ್ ಟೇಕ್ ಮಾಡಿ ಬಂದಿದ್ದರು. ಇದೇ ಕಾರಣಕ್ಕೆ ಕೋಪದಿಂದ ಕೊಟ್ಟಾರಿ ಅವರ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಬೆಳ್ಳಾರೆ : ಸಾಮಾಜಿಕ ಜಾಲತಾಣದಲ್ಲಿ ಝಕರಿಯ ಜುಮ್ಮ ಮಸೀದಿ ಬಗ್ಗೆ ಅಪಪ್ರಚಾರ – ಇಬ್ರಾಹಿಂ ಖಲೀಲ್ ವಿರುದ್ಧ ದೂರು

ಬೆಳ್ಳಾರೆ ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಂಘ ಸಂಸ್ಥೆ, ಗುಂಪು, ಪಂಗಡಗಳ, ವಿರುದ್ಧ ತಕರಾರು ಎತ್ತಿ ದ್ವೇಷ ಹರಡಿ ನಿರಂತರ ತೊಡಕುಂಟು ಮಾಡುತ್ತಿರುವ. ಅಲ್ಲದೆ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಸಂದೇಶ ಹಾಕಿರುವುದಾಗಿ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯ ಆಡಳಿತ ಮಂಡಳಿಯವರು ನಿಂತಿಕಲ್ ಸಮೀಪದ ಸಮಹಾದಿಯ ಇಬ್ರಾಹಿಂ ಖಲೀಲ್ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸೆ.27

ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು. ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ.