ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ. ಪ್ರತಿಮಾ ಎಂಬಾಕೆಯೇ ತನ್ನ ಪತಿಗೆ ವಿಷವುಣಿಸಿ ಕೊಂದ ಅರೋಪಿಯಾಗಿದ್ದಾಳೆ.ಈಕೆಗೆ ಕೆಲವು ವರ್ಷಗಳ ಹಿಂದೆ ಬಾಲಕೃಷ್ಣ ಎನ್ನುವವರ ಜೊತೆಗೆ
ಮಂಗಳೂರಿನ ಪ್ರಖ್ಯಾತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಇಬ್ಬರು ಯುವಕರು ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕರನ್ನು ಬಂಧಿಸಿದ್ದಾರೆ. ಖ್ಯಾತ ಬಿಲ್ಡರ್ ಲೋಟಸ್ ಪ್ರಾಪರ್ಟೀಸ್ ಪಾಲುದಾರ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಏರ್ಪೋರ್ಟಿನಿಂದ ಕಾರಿನಲ್ಲಿ ಬರುತ್ತಿರುವಾಗ ಈ ಯುವಕರ ಕಾರನ್ನು ಓವರ್ ಟೇಕ್ ಮಾಡಿ ಬಂದಿದ್ದರು. ಇದೇ ಕಾರಣಕ್ಕೆ ಕೋಪದಿಂದ ಕೊಟ್ಟಾರಿ ಅವರ
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಬೆಳ್ಳಾರೆ ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಂಘ ಸಂಸ್ಥೆ, ಗುಂಪು, ಪಂಗಡಗಳ, ವಿರುದ್ಧ ತಕರಾರು ಎತ್ತಿ ದ್ವೇಷ ಹರಡಿ ನಿರಂತರ ತೊಡಕುಂಟು ಮಾಡುತ್ತಿರುವ. ಅಲ್ಲದೆ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಸಂದೇಶ ಹಾಕಿರುವುದಾಗಿ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯ ಆಡಳಿತ ಮಂಡಳಿಯವರು ನಿಂತಿಕಲ್ ಸಮೀಪದ ಸಮಹಾದಿಯ ಇಬ್ರಾಹಿಂ ಖಲೀಲ್ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸೆ.27
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು. ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ.
ಮಂಗಳೂರು: ಮಂಗಳೂರು ನಗರದಲ್ಲಿರುವ ಜೈಲಿಗೆ ಗುರುವಾರ ಬೆಳ್ಳಂಬೆಳಗ್ಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮಾಡಿದ ದಾಳಿ ನಡೆಸಿ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿಗೆ ಸುಮಾರು 150 ಸಿಬಂದಿಗಳ ಜೊತೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ ವೇಳೆ ಖೈದಿಗಳಿಂದ 25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಸಾಧನ, 5 ಇಯರ್‌ಫೋನ್‌ಗಳು, 1 ಪೆನ್ ಡ್ರೈವ್, 5 ಚಾರ್ಜರ್‌ಗಳು, 1 ಜೊತೆ ಕತ್ತರಿ, 3ಕೇಬಲ್‌ಗಳು ಸೇರಿದಂತೆ ಗಾಂಜಾ ಅಮಲು ಪದಾರ್ಥಗಳು
ಎರಡನೆಯ ಅತ್ಯಾಚಾರ ಪ್ರಕರಣದಲ್ಲಿ ಮಾಜೀ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತು. ಪ್ರಜ್ವಲ್ ರೇವಣ್ಣ ಮೇಲೆ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ಮೊದಲ ಅತ್ಯಾಚಾರ ಪ್ರಕರಣ ಮತ್ತು ಒಟ್ಟು ಅಸಹ್ಯ ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಸೆರೆಮನೆಯಲ್ಲಿ ಇದ್ದಾರೆ. ಎರಡನೆಯ ಪ್ರಕರಣ ಸಂಬಂಧ ವಿಚಾರಣೆಗೆ ಕರೆತರಲಾಗಿತ್ತು.
ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೆÇಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.
ಕಳೆದ ನಾಲ್ಕು ವರ್ಷದ ಹಿಂದೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿ ಬಹಳ ಸಂಚಲನ ಹುಟ್ಟಿದ್ದ ವಾಸುದೇವ ಭಟ್ ಎಂಬವರ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಸರಿ ಸುಮಾರು 12 ಲಕ್ಷಕ್ಕೂ ಹೆಚ್ಚು ಒಡವೆ ಹಾಗೂ ಆಭರಣ ದೋಚಿದ್ದರು. ಇದನ್ನು ಬೆನ್ನಟ್ಟಿದ ಧರ್ಮಸ್ಥಳ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಗಳು ಮುಂಡಾಜೆ ಗ್ರಾಮ ನಿವಾಸಿಗಳಾದ ನವಾಝ್ (38) ರಿಯಾಝ್ ಹಾಗೂ ಬೆಂಗಳೂರಿನ ಕೃಷ್ಣ ಎಂದು ತಿಳಿದುಬಂದಿದೆ. ಈ ಬಗ್ಗೆ
ಇಂದು ನಸುಕಿನ ವೇಳೆ ಅತೀ ವೇಗವಾಗಿ ಬಂದ ಕಾರೊಂದು ಹೆದ್ದಾರಿ ಪಕ್ಕದ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಕಾರು ತೀವೃ ಜಖಂ ಗೊಂಡಿದ್ದು ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾದರೆ ಮತ್ತಿಬ್ಬರಿಗೆ ತೀವೃ ಸ್ವರೂಪದ ಗಾಯಗಳಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ನಾಲ್ವರು ಯುವಕರು ಪ್ರಯಾಣಿಸುತ್ತಿದ್ದ ಕಾರು ಕಾಪುವಿನ ಕೊಪ್ಪಲಂಗಡಿಯಲ್ಲಿ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಬಹುತೇಕ




























