ಬಂಟ್ವಾಳ: ನಾವೂರು ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದ ಹೊರಾಂಗಣದ ನೈಋತ್ಯ ದಿಕ್ಕಿನಲ್ಲಿ ನೂತನವಾಗಿ ನಿರ್ಮಿಸಲ್ಪಡುವ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಕ್ಷೇತ್ರದಲ್ಲಿ ನಡೆಯಿತು. ಬೆಳಗ್ಗಿನ 10.15 ರ ಧನುರ್ಲಗ್ನ ಸುಮುಹೂರ್ತದಲ್ಲಿ ತಂತ್ರಿಗಳಾದ ಶ್ರೀ ಪಾದ ಪಾಂಗಣ್ಣಾಯ ಅವರು ಧಾರ್ಮಿಕ ವಿಧಿ ವಿಧಾನಗಳನ್ನು
ಹಾಸನ ಪ್ರಸಿದ್ಧ ಹಾಸನಾಂಬ ದೇವಿ ದರ್ಶನೋತ್ಸವ ಇಂದಿನಿಂದ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಹಾಸನಾಂಬ ದೇವಾಲಯ ಆವರಣದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಹಂತದ ಸಿದ್ದತೆಗಳನ್ನು ಪರಿಶೀಲಿಸಿದರು. ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ದೇವಾಲಯದ ಅಲಂಕಾರ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಬಹುತೇಕ ಪೂರ್ಣಗೊಂಡಿದೆ ಎಂದರು. ಸಾರ್ವಜನಿಕರಿಗೆ ಅ.29 ರಿಂದ ನ.5ರ ವರೆಗೆ ಪ್ರತಿ
ಸುಬ್ರಹ್ಮಣ್ಯ: ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.ಕುಟುಂಬದವರೊಂದಿಗೆ ಆಗಮಿಸಿದ ಪ್ರವೀಣ್ ಸೂದ್ ಅವರು ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಮಹಾಪೂಜೆ, ಅಭಿಷೇಕ ನೆರವೇರಿಸಿದರು. ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಪ್ರವೀಣ್ ಸೂದ್ ಪತ್ನಿ, ಮಗಳು ಹಾಗೂ ಅಳಿಯ ಕ್ರಿಕೆಟ್ ಆಟಗಾರ ಮಾಯಾಂಕ್ ಅಗರ್ವಾಲ್ ಜೊತೆಗಿದ್ದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ ಮಹೋತ್ಸವ’ ಶುಕ್ರವಾರ ಸಂಪನ್ನಗೊಂಡಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಗಣಪತಿ, ನವದುರ್ಗೆಯರು, ಆದಿಶಕ್ತಿ ಸಹಿತ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನೆರವೇರಿತು. ಶುಕ್ರವಾರ ಬೆಳಗ್ಗೆ ವಾಗೀಶ್ವರಿ ದುರ್ಗಾ ಹೋಮ, ಮಧ್ಯಾಹ್ನ ಶಿವಪೂಜೆ, ಪುಷ್ಪಾಲಂಕಾರ ಮಹಾ ಪೂಜೆ ನೆರವೇರಿತು. ರಾತ್ರಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ ನಡೆದು
ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಸಂಭ್ರಮ.ದಸರಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ದಸರಾ ಉತ್ಸವವನ್ನು ಕೊರೋನ ನಿಯಮಾವಳಿಯ ಪಾಲನೆಯೊಂದಿಗೆ ಆಚರಿಸುವಂತೆ ದಸರಾ ಉತ್ಸವದ ಸಂದರ್ಭದಲ್ಲಿ ಎಲ್ಲಾ ಸಂಕಷ್ಟಗಳು ಕಳೆದು ದೇವರು ಎಲ್ಲರಿಗೂ ಮಂಗಳವನ್ನುಂಟು ಮಾಡಲಿ ಎಂದು ಹೇಳಿದರು. ಕೋವಿಡ್ ಎರಡನೇ ಅಲೆಯ ಇಳಿಕೆ ಬಳಿಕ ನಡೆಯುತ್ತಿರುವ ನಾಡಿನ ಪ್ರಮುಖ ಹಬ್ಬವಾದ್ದರಿಂದ
ಗಂದಕಾಡು ಕ್ಷೇತ್ರದ ಧರ್ಮದರ್ಶಿಗಳಾದ ಅಶೋಕ್ ಬಂಗೇರಾ ಇವರ ಶುಭ ಆಶೀರ್ವಾದದೊಂದಿಗೆ ತುಳುನಾಡ ಕಾರ್ಣಿಕ ದೈವ ಶ್ರೀ ವರ್ತೆ ಪಂಜುರ್ಲಿಯ ತುಳು ಭಕ್ತಿಗೀತೆ ’ಕುಟುಂಬದ ಮೆಯ್ಯಾರಿಗೆದ ಸತ್ಯೊಲು’ ಎಂಬ ತುಳು ಭಕ್ತಿಗೀತೆ ಸದ್ಯದಲ್ಲೇ ಯೂ ಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ. ಶ್ರೀ ಪಾಪು ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಭಕ್ತಿ ಗೀತೆಗೆ ತುಳು ರಂಗಭೂಮಿ ಕಲಾವಿದ ಸುರೇಶ್ ನಿಟ್ಟೆ ಸಾಹಿತ್ಯ ಬರೆದು ಹಾಡಿದ್ದಾರೆ. ಇನ್ನು ನಿರ್ಮಾಣದ ಹೊಣೆಯನ್ನು ಸಂದೀಪ್
ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ದಸರಾ ವೈಭವಕ್ಕೆ ಚಾಲನೆ ನೀಡಲಾಗಿದೆ. ಈ ಉತ್ಸವವು
ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಅಕ್ಟೋಬರ್ 7 ರಿಂದ ಅಕ್ಟೋಬರ್ 16ರ ವರೆಗೆ ನಡೆಯಲಿದೆ. ನವರಾತ್ರಿಯ ಸಂದರ್ಭ ಪ್ರತಿದಿನ ವಿಶೇಷ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿರುವುದು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,ಸುದ್ದಿಗೋಷ್ಟಿಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಪಿ ರಾಮನಾಥ ಹೆಗ್ಡೆ ರಘುರಾಮ ಉಪಾದ್ಯಾಯ, ಅರುಣ ಐತಾಳ್ ರಾಮನಾಯ್ಕ ಉಪಸ್ಥಿತರಿದ್ದರು.
ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವರಾತ್ರಿ ಉತ್ಸವ ಮತ್ತು ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 7ರಿಂದ 16ರತನಕ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ ಕುದ್ರೋಳಿ ಕ್ಷೇತ್ರದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಬ್ರಹ್ಮ ಶ್ರೀ ನಾರಾಯಣ ಗುರುಗಳಿಂದ ರಾಜ್ಯದಲ್ಲಿ ಸ್ಥಾಪಿತ ಏಕೈಕ ಕ್ಷೇತ್ರ ಮಂಗಳೂರಿನ ಕುದ್ರೋಳಿಯ ಶ್ರೀ
ಬಂಟ್ವಾಳದ ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಆಚರಣೆ ಸಂಪನ್ನಗೊಂಡಿತು. ಪ್ರತಿ ವರ್ಷ ಕನ್ಯಾ ಸಂಕ್ರಮಣದ ಮರು ದಿವಸ ನಡೆಯುವ ತೆನೆ ಹಬ್ಬ ಆಚರಣೆಗಾಗಿ ಕಾರಿಂಜದಿಂದ ಸುಮಾರು 9ಕಿ.ಮೀ. ದೂರವಿರುವ ಸರಪಾಡಿ ಹಲ್ಲಂಗಾರು ಗದ್ದೆಯೊಂದರಿಂದ ತೆನೆಗಳನ್ನು ತರಲಾಗುತ್ತಿದ್ದು, ಈ ಬಾರಿಯೂ ಸಂಪ್ರದಾಯದಂತೆ ನೆರವೇರಿಸಲಾಯಿತು. ಸೂರ್ಯೋದಯದ ಮುಂಚೆ ಶ್ರೀ ಕ್ಷೇತ್ರ ಕಾರಿಂಜದಿಂದ ವಾದ್ಯ ವೃಂದ ಸಹಿತ ಅರ್ಚಕರು, ತಂತ್ರಿಗಳು,



















