ಬೈಂದೂರು-ವಿಶ್ವವಿಖ್ಯಾತ ಮರವಂತೆಯ ಪ್ರಕೃತಿ ಸೊಬಗಿನ ತಾಣದಲ್ಲಿ ನೆಲೆ ನಿಂತಿರುವ ಪುರಾಣ ಪ್ರಸಿದ್ದ ಕ್ಷೇತ್ರ ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮವಾಸ್ಯೆ ಜಾತ್ರೆ ಸಂಭ್ರಮದಿಂದ ಜರುಗಿತು. ಮಳೆ ನಡುವೆ ಬೆಳಗಿನಿಂದಲೇ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರ ಮಹಾಪೂರವೇ ಹರಿದು ಬಂದಿತು. ಕೆಲವರು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ                         
        
              ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಗ್ಗಿನ ಉಪಾಹಾರ ಪ್ರಸಾದದ ವ್ಯವಸ್ಥೆ ಯೋಜನೆ ಇಂದಿನಿಂದ ವಿದ್ಯುಕ್ತವಾಗಿ ಆರಂಭವಾಯಿತು. ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ಡಾl ವಿದ್ಯಾಪ್ರಸನ್ನ ಶ್ರೀಗಳು ದೀಪ ಬೆಳಗಿಸಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, . ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ,                         
        
              ಸುಬ್ರಹ್ಮಣ್ಯ:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಸದಸ್ಯರ ನೇಮಕ ಮಾಡಿ ಸರಕಾರ ಆದೇಶ ಮಾಡಿತ್ತು. ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಭಾರೀ ನಾಟಕೀಯ ತಿರುವು ಪಡೆದು ಹರೀಶ್ ಇಂಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷತೆಗೆ ಮಹೇಶ್ ಕುಮಾರ್ ಕರಿಕ್ಕಳ ಅವರನ್ನು ಕಾಂಗ್ರೆಸ್ ಜಿಲ್ಲಾ                         
        
              ಕಡಬ,ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕ ಆದಾಯ ರೂ.155,95,19,567.08ಗೆ ಏರಿಕೆಯಾಗಿದ್ದು, ಕಳೆದ ವರ್ಷ ಕ್ಷೇತ್ರದ ಆದಾಯ ರೂ.146.01 ಕೋಟಿ ಆಗಿತ್ತು. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂಧರ್ಮದಾಯ ದತ್ತಿ ಇಲಾಖೆಯಡಿಯಲ್ಲಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ನಾಗರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕ್ಷೇತ್ರಕ್ಕೆ ರಾಜ್ಯ,                         
        
              ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿ ಯವರನ್ನು ಶಾಲು ಹೊಂದಿಸಿ                         
        
              ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡಿನ ಖ್ಯಾತ ಚಿತ್ರ ನಿರ್ದೇಶಕ ಅತ್ಲೇ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ತದನಂತರ ಶ್ರೀ ದೇವಳದ ಕಚೇರಿಯಲ್ಲಿ ಭಕ್ತಾದಿಗಳ ಅನ್ನದಾನಕ್ಕಾಗಿ ರೂಪಾಯಿ 10 ಲಕ್ಷದ ಬ್ಯಾಂಕ್ ಚೆಕ್ ಅನ್ನು ಕಾರ್ಯನಿರ್ವಹಣಾಧಿಕಾರಿಯವರಿಗೆ ನೀಡಿರುವರು. ಈ ಸಂದರ್ಭದಲ್ಲಿ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಅತ್ಲೇ ಅವರನ್ನು ಶಾಲು ಹೊಂದಿಸಿ ಸ್ಮರಣೆಗೆ                         
        
              ಮಂಜೇಶ್ವರ ಕುಳೂರು ಸಂತಡ್ಕದ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.19ರಿಂದ ಜ.24ರವರೆಗೆ ನಡೆಯಲಿದೆ. ಜ.19ರಿಂದ ಜ.22ರವರೆಗೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಜ.23, 24ರಂದುವಾರ್ಷಿಕ ಜಾತ್ರಾ ಮಹೋತ್ಸವವು ನಡೆಯಲಿದೆ. ಜ.16ರಂದು ಗೊನೆಮುಹೂರ್ತ, ಜ.19ರಂದು ಹೊರೆಕಾಣೀಕೆ ಮೆರವಣಿಗೆ, ಧಾರ್ಮಿಕ ಸಭೆ, ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈಭವ                         
        
              ತಿರುಪತಿಯ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ದರ್ಶನ ಟಿಕೆಟ್ ಪಡೆಯಲು ಸೇರಿದ್ದ ಭಕ್ತರ ಸಮೂಹದಲ್ಲಿ ಉಂಟಾದ ನೂಕು ನುಗ್ಗಲು ಮತ್ತು ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ. ಬುಧವಾರ ಸಂಜೆ ನಡೆದ ಈ ದುರಂತದಲ್ಲಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಷ್ಣು ನಿವಾಸಮ್, ಶ್ರೀನಿವಾಸಂ ಮತ್ತು ಪದ್ಮಾವತಿ ಪಾರ್ಕ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ರಾತ್ರಿ 8 ಗಂಟೆಯ ಸುಮಾರಿಗೆ ತಿರುಮಲ ತಿರುಪತಿ ದೇವಸ್ಥಾನ ಅಧಿಕಾರಿಗಳು                         
        
              ಬೈಂದೂರು: ಬೈಂದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮೇಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ,ಮಹಾ ಮಂಗಳಾರತಿ, ಹಣ್ಣುಕಾಯಿ ಸೇವೆ, ಚಂಡಿಕಾ ಹೋಮ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಸೇವೆಯನ್ನು ನಾನಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಲ್ಲಿಸಲಾಯಿತು. ಅಕ್ಟೋಬರ್ 3 ರಿಂದ ಆರಂಭಗೊಂಡಿರುವ ನವರಾತ್ರಿ ಉತ್ಸವ ಅಕ್ಟೋಬರ್ 12 ರ ತನಕ ವಿಜೃಂಭಣೆಯಿಂದ ನಡೆಯಲಿದೆ.ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ                         
        
              ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ                         
        


























