ಬಂಟ್ವಾಳ: ನರಹರಿ ಸದಾಶಿವ ದೇವಾಲಯದಲ್ಲಿ ಇಂದು ಆಟಿ ಅಮವಾಸ್ಯೆ, ತೀರ್ಥ ಸ್ನಾನ ನಡೆಯಿತು. ಪ್ರತಿ ವರ್ಷವೂ ಆಟಿ ತಿಂಗಳಲ್ಲಿ ಬರುವ ಅಮವಾಸ್ಯೆ ದಿನದಂದು ಇಲ್ಲಿನ ತೀರ್ಥ ಸ್ನಾನ ನಡೆಯುತ್ತದೆ. ತೀರ್ಥ ಬಾವಿಯಲ್ಲಿ ತೀರ್ಥ ಸ್ನಾನ ಮಾಡಿದರೆ ಸಕಲ ಇಷ್ಟಾರ್ಥಗಳು ನೆರವೇರುವುದು ಎಂಬ ಪ್ರತೀತಿ ಇದೆ. ಇಂದು ಮುಂಜಾನೆಯಿಂದಲೇ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.                        
        
              ಉಡುಪಿ: ಪ್ರಥಮ ಏಕಾದಶಿ ಪ್ರಯುಕ್ತ ಪೆರ್ಡೂರು ಬ್ರಾಹ್ಮಣ ಸೇವಾ ಸಮಿತಿಯ ವತಿಯಿಂದ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು. ಶ್ರೀ ರಾಘವೇಂದ್ರ ಆಚಾರ್ಯರ ನೇತೃತ್ವದಲ್ಲಿ ಬೆಳಿಗ್ಗೆ ಶ್ರೀ ಸುದರ್ಶನ ಹೋಮ ನಡೆಸಿ, ಪೂರ್ಣಾಹುತಿಯ ನಂತರ ಶೀರೂರು ಮಠದ ಸ್ವಾಮಿಗಳಾದ ಶ್ರೀ ಶ್ರೀ ವೇದದವರ್ಧನ ತೀರ್ಥರು ತಾಮ್ರದಿಂದ ತಯಾರಿಸಿದ ಸುದರ್ಶನ ಹಾಗೂ ಪಾಂಚಜನ್ಯ ಮುದ್ರೆಯನ್ನು, ಅದೇ ಅಗ್ನಿಯಲ್ಲಿ ಕಾಯಿಸಿ ಎಲ್ಲಾ                         
        
              ಉಡುಪಿ: ಮಳೆಗಾಲ ಬಂತು ಅಂದರೆ ನಾನಾ ರೋಗರುಜಿನಗಳ ಆಗಮನವಾಯಿತೆಂದೇ ಅರ್ಥ. ಈ ಸಮಯದಲ್ಲಿ ಒಂದಲ್ಲ ಒಂದು ರೀತಿಯ ರೋಗಕ್ಕೆ ತುತ್ತಾಗುವುದು ಸಾಮಾನ್ಯ. ಆದರೆ ಮಳೆಗಾಲದಲ್ಲಿ ಬರಬಹುದಾದ ರೋಗರುಜಿನಗಳಿಂದ ರಕ್ಷಣೆಯ ಸಲುವಾಗಿ ತಪ್ತ ಮುದ್ರಾಧಾರಣೆ ಮಾಡುವ ಎಂಬ ನಂಬಿಕೆಯಿದೆ. ಮುದ್ರಾಧಾರಣೆಯನ್ನು ಚಾತುರ್ಮಾಸ್ಯದ ಮೊದಲ ದಿನ ಸರ್ವೈಕಾದಶಿಯಂದೇ ನಡೆಸಲಾಗುತ್ತದೆ. ಈ ಸಲುವಾಗಿ ಇಂದು ಉಡುಪಿಯ ಶ್ರೀ ಕೃಷ್ಣ ಮಠ ಹಾಗೂ ಅಷ್ಟಮಠಗಳಲ್ಲಿ ಮುದ್ರಾಧಾರಣೆ ನಡೆಯಿತು. ಮಳೆಗಾಲದ                         
        
              ಉಡುಪಿ : ಉಡುಪಿ ಜಿಲ್ಲೆಯ ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪರಿವಾರ ದೈವಗಳಾದ ವಾರ್ತಾಳಿ ಪಾಶಾಣ ಕಲ್ಲುರ್ಟಿ ದೈವಗಳಿಗೆ ಬ್ರಹ್ಮಕಲಶೋತ್ಸವ, ರಾಶಿ ಪೂಜೆ ಮತ್ತು ಸಿರಿ ಸಿಂಗಾರದ ನೇಮೋತ್ಸವದ ಪ್ರಯುಕ್ತ ಬೆಳಿಗ್ಗೆ ನವಕ ಪ್ರಧಾನ ಕಲಶಾಭಿಷೇಕ ನಡೆದು ಸಾಮೂಹಿಕ ಪ್ರಾರ್ಥನೆಯೊಂದಿಗೆ ಭಂಡಾರ ಇಳಿದು ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ರಾತ್ರಿ ನೇಮೋತ್ಸವ ನಡೆಯಿತು. ಈ ಸಂದರ್ಭ ದೇಗುಲದ ವ್ಯವಸ್ಥಾಪನ ಸಮಿತಿ ಮತ್ತು ಸಮಿತಿ ಅಧ್ಯಕ್ಷ ಯು.ಎ. ಪ್ರಭಾಕರ                         
        
              ಉಡುಪಿ : ನೆನ್ನೆಯಿಂದ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಇಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಅಡಿಗರ ನೇತ್ರತ್ವದಲ್ಲಿ ನೆಡೆದ ಚಂಡಿಹೋಮ ಹಾಗೂ ಇತರೆ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಇವರ ಆತ್ಮೀಯರು ಮತ್ತು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಕಯ್ ಅಕ್ಷಯ ಎಂ . ಇವರೊಂದಿಗೆ ಭಾಗಿಯಾಗಿದ್ದರು.                         
        
              ದಿನ ಕಳೆದಂತೆ ಹತ್ತಿರವಾಗುತ್ತಿದೆ ಉಡುಪಿಯ ಭವ್ಯ ಆಚರಣೆ. ಇಡೀ ಜಗತ್ತಿನಲ್ಲೇ ವಿಶಿಷ್ಟವಾದ ಸಂಪ್ರದಾಯಗಳಲ್ಲಿ ಒಂದು, ಶತಮಾನಗಳಿಂದ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಚಾಚೂ ತಪ್ಪದೇ ಆಚರಿಸಿಕೊಂಡು ಬರುತ್ತಿರುವ “ಪರ್ಯಾಯ”ಮಹೋತ್ಸವ. ಉಡುಪಿಯ 8 ಮಠಗಳ ನಡುವೆ ಶ್ರೀ ಕೃಷ್ಣ ದೇವಾಲಯದ ಜವಾಬ್ದಾರಿಗಳ ಹಸ್ತಾಂತರವನ್ನೇ ಪರ್ಯಾಯ ಮಹೋತ್ಸವ ಎನ್ನುತ್ತಾರೆ. ಪ್ರಸ್ತುತ ಕೃಷ್ಣಪುರ ಮಠದ ವಿದ್ಯಾಸಾಗರ ತೀರ್ಥರು ಶ್ರೀ ಕೃಷ್ಣನ ಆರಾಧನೆಯಲ್ಲಿ ತೊಡಗಿದ್ದರೆ, ಮುಂದಿನ ಸರದಿಯಲ್ಲಿ                         
        
              ಜೀವನದಲ್ಲಿ ಉತ್ತಮವಾಗಿ ಬದುಕುವುದೇ ಧರ್ಮ. ಪ್ರತಿಯೊಂದು ಜೀವರಾಶಿಗೂ ಬದುಕುವ ಹಕ್ಕು ಇದೆ. ಧರ್ಮ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವ ಕಾರ್ಯ ನಮ್ಮಿಂದ ನಡೆಯಬೇಕು ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಧಾನದ ಅಷ್ಟಬಂಧ ಬ್ರಹ್ಮಕುಂಭಾಭೀಷೇಕದ ಅಂಗವಾಗಿ ಸ್ಕಂದ ಮಂಟಪದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಅವರು ಇಂದಿನ ಯುಗದಲ್ಲಿ ಸಂಸ್ಕಾರವನ್ನು                         
        
              ಕುಲಶೇಖರ, ಮೇ 11: ಮಂಗಳೂರು ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. ಹತ್ತು ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ಮೇ 14ರಿಂದ 25ವರೆಗೆ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಬಹಳ ವಿಜೃಂಭನೆಯಿಂದ ಜರಗಲಿದೆ ಎಂದು ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ, ಬ್ರಹ್ಮಕಲಶೋತ್ಸವ                         
        
              ಮಂಗಳೂರು : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ ಸಿದ್ಧತೆ ಹಾಗೂ ಹಸಿರು ಹೊರೆ ಕಾಣಿಕೆಯ ಸಭೆಯು ವೀರನಾರಾಯಣ ಸಭಾಭವನದಲ್ಲಿ ನಡೆಯಿತು. ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶದ ಎಲ್ಲಾ ರೀತಿಯ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಹೊರೆಕಾಣಿಕೆಗಳ ಸಂಗ್ರಹ, ಕೇಂದ್ರ, ಹೊರೆಕಾಣಿಕೆಯ ದಿನದ ಸೇರುವಿಕೆ, ಸಾಗುವ ಸಮಯ, ಹೊರೆಕಾಣಿಕೆ ವಸ್ತುಗಳ ಪಟ್ಟಿಯ ಬಗ್ಗೆ ಚರ್ಚಿಸಲಾಯಿತು. ಹಾಗೂ ಬ್ರಹ್ಮಕಲಶದ ವಿವಿಧ ಸಮಿತಿಗಳ ಕಾರ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ                         
        
              ಮಂಜೇಶ್ವರ : ಕಳೆದ ಸುಮಾರು 800 ವರ್ಷಗಳಿಂದ ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾಗಿ ನಿಂತಿರುವ ಮಂಜೇಶ್ವರ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ ಮಹೋತ್ಸವದ ದಿನಾಂಕ ನಿಗದಿ ಸಮಾರಂಭವು ನಡೆಯಿತು. “ಕುದಿಕಳ” ಎಂಬ ಹೆಸರಿನಲ್ಲಿ ಸಂಪ್ರದಾಯ ಪ್ರಕಾರ ನಡೆಯುವ ಸಮಾರಂಭದಲ್ಲಿ ಮುಸ್ಲಿಂ ಸಮುದಾಯದ ವ್ಯಾಪಾರಿಯೊಬ್ಬನಿಂದ ದೈವಪಾತ್ರಿಗಳೇ ವೀಳ್ಯದೆಲೆ ಹಾಗೂ ಅಡಿಕೆ ಖರೀದಿಸುವುದು ಸಮಾರಂಭದ ವಿಶೇಷತೆಯಾಗಿದೆ.ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ                         
        


























