Home Archive by category ರಾಜಕೀಯ

ಮಲ್ಲಾರು ಶ್ರೀ ಧೂಮಾವತಿ ದೈವಸ್ಥಾನಕ್ಕೆ ಗ್ರಾನೈಟ್ ಅಳವಡಿಸಲು 10 ಲಕ್ಷ ರೂಪಾಯಿ ಅನುದಾನ ಮಂಜೂರು

ಮಲ್ಲಾರು ಶ್ರೀ ಧೂಮಾವತಿ ದೈವಸ್ಥಾನದ ಅಂಗಳಕ್ಕೆ ಗ್ರಾನೈಟ್ ಅಳವಡಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 10 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭಾ ಸದಸ್ಯರಾದ ಶೈಲೇಶ್ ಎನ್ ಅಮೀನ್,ಉಮೇಶ್

ಮುಂದಿನ ಬಜೆಟ್ ನಲ್ಲಿ ಕರಾವಳಿಯ ಸಮಗ್ರ ಅಭಿವೃದ್ಧಿಗೆ ಒತ್ತು: ಮಂಡಳಿಯಲ್ಲಿ ಜನಪ್ರತಿನಿಧಿಗಳ ಬೇಡಿಕೆ

ಮಂಗಳೂರು: ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ ನಲ್ಲಿ ನೀಡಬೇಕೆಂದು ಮೂರು ಜಿಲ್ಲೆಗಳ ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ. ಗುರುವಾರ ಸ್ಪೀಕರ್ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾ ಸೌಧ’ದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರು ಭಾಗವಹಿಸಿ, ಕರಾವಳಿಯ ಅಭಿವೃದ್ಧಿಯನ್ನು

ಬಜೆಟ್ ನಲ್ಲಿ ಮಂಗಳೂರು ದಸರಾಗೆ 5 ಕೋಟಿ: ಮುಖ್ಯಮಂತ್ರಿಗಳಿಗೆ ಶಾಸಕ ಕಾಮತ್ ಮನವಿ

ಮಂಗಳೂರು ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದ್ದು ಇಂತಹ ವೈಭವದ ಹಬ್ಬಕ್ಕೆ ರಾಜ್ಯ ಸರ್ಕಾರವು ಈ ಬಾರಿಯ 2026-27 ನೇ ಸಾಲಿನ ಬಜೆಟ್ ನಲ್ಲಿ ರೂ.5 ಕೋಟಿ ಅನುದಾನ ಘೋಷಣೆ ಮಾಡುವಂತೆ ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ಮಾಡಿದರು. ಮೈಸೂರು ನಂತರ ರಾಜ್ಯದಲ್ಲೇ ಅತೀ ಹೆಚ್ಚು ಜನ ಸೇರುವ ಹಬ್ಬ ಮಂಗಳೂರು ದಸರಾ. ನವರಾತ್ರಿಯ

ಮುಲ್ಕಿ ತಾಲೂಕು ಸೌಧವನ್ನು ತಕ್ಷಣ ಉದ್ಘಾಟಿಸಿ ಕೇಂದ್ರ ಸಚಿವ ಎಚ್. ಡಿ. ಕೆಗೆ ಮನವಿ

ಮುಲ್ಕಿ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್‌ನ ಸಂಸ್ಥಾಪಕ ಅಧ್ಯಕ್ಷರಾದ Er.ಮುಲ್ಕಿ ಜೀವನ್ ಕೆ. ಶೆಟ್ಟಿ ಅವರು, ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಮುಲ್ಕಿ ಜನತೆಯ ಬಹುದಿನಗಳ ಕನಸಾದ ಮುಲ್ಕಿ ತಾಲೂಕು ಸೌಧವನ್ನು ತಕ್ಷಣ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಅರ್ಪಿಸುವಂತೆ, ಆಯ್ಕೆಯಾದ ಜನಪ್ರತಿನಿಧಿಗಳು ಮತ್ತು ಜಿಲ್ಲಾ ಆಡಳಿತದೊಂದಿಗೆ ಸಮನ್ವಯ ಸಾಧಿಸಿ

ಶಾಸಕರಿಂದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಸಂಪರ್ಕ ಸಭೆ – ಗ್ರಾಮಸ್ಥರ ಅಹವಾಲು ಸ್ವೀಕಾರ

ಹಿರಿಯಡ್ಕ: ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಇಂದು ದಿನಾಂಕ 19-11-2025 ರಂದು ಕೊಡಿಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮಕ್ಕಳಿಗೆ ಟಿ.ವಿ, ಮಕ್ಕಳ ಆಟಿಕೆ ಕಿಟ್ ಹಾಗೂ ಪಂಚಾಯತ್ ವರ್ಗ ಅನುದಾನ ಹಾಗೂ ಶೇಖರ 25ರ ನಿಧಿ ಮತ್ತು

ನ. 28 : ಪ್ರಧಾನಿ ಮೋದಿ ಉಡುಪಿ ಮಠಕ್ಕೆ ಭೇಟಿ

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಮಠಕ್ಕೆ ಆಗಮಿಸಲಿರುವ ಮೋದಿಯವರು ದೇವರ ದರ್ಶನ ಪಡೆದು ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾಗಲಿದ್ದಾರೆ. ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ – ಬೃಹತ್ ಗೀತೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಸುಳ್ಯ ಮಂಡಲದಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

ಮಳೆಯಿಂದಾಗಿ ಕೆಟ್ಟು ಹೋಗಿರುವ ರಾಜ್ಯದ ರಸ್ತೆಗಳ ಗುಂಡಿ ಮುಚ್ಚಲು ಕೂಡ ಅನುದಾನ ನೀಡದ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ವತಿಯಿಂದ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಕಾಣಿಯೂರಿನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಳ್ಯ ಶಾಸಕಿ ಕುಮಾರಿ ಭಾಗಿರತಿ ಮುರುಳ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀ ರಾಕೇಶ್ ರೈ ಕೆಡಂಜಿ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ ವಿನಯ್ ಕುಮಾರ್

ಕನ್ನಡ ಜಾಗೃತಿ ಸಮಿತಿ ದ.ಕ. ಜಿಲ್ಲಾ ಸದಸ್ಯರಾಗಿ ರಾಜೇಶ್ ಕಡಲಕೆರೆ ಆಯ್ಕೆ

ಮೂಡುಬಿದಿರೆ : ಬ್ಲಾಕ್ ಕಾಂಗ್ರೆಸ್ ವಕ್ತಾರ, ರಂಗನಟ,ವಾಗ್ಮಿ ರಾಜೇಶ್ ಕಡಲಕೆರೆ ಅವರು ಕನ್ನಡ ಜಾಗೃತಿ ಸಮಿತಿ ದ.ಕ.ಜಿಲ್ಲಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಪ್ರತೀ ಜಿಲ್ಲಾ ಮಟ್ಟದಲ್ಲಿ ಈ ಸಮಿತಿಯನ್ನು ರಚಿಸಿದ್ದು ದ.ಕ.ಜಿಲ್ಲೆಯಿಂದ 5 ಮಂದಿ ಸದಸ್ಯರ ಪೈಕಿ ಮೂಡುಬಿದಿರೆಯಿಂದ ರಾಜೇಶ್ ಕಡಲಕೆರೆ ಅವರನ್ನು ನೇಮಕ ಮಾಡಲಾಗಿದೆ. ಹಲವಾರು ತುಳು,ಕೊಂಕಣಿ

ಮೂಡುಬಿದಿರೆ ;ಪೋನ್ ಕರೆ ಮೂಲಕ ಮಹಿಳೆಗೆ ಕಿರುಕುಳ ತನ್ನದೇ ಸಿಬ್ಬಂದಿ ವಿರುದ್ಧ ಕೇಸು ದಾಖಲಿಸಿದ ಮೂಡುಬಿದಿರೆ ಇನ್ಸ್ ಪೆಕ್ಟರ್

ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೋವ೯ರ ಮೊಬೈಲ್ ನಂಬರ್ ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ಧ ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ. ಜಿ. ಅವರು ಕೇಸು ದಾಖಲಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಶಾಂತಪ್ಪ ಪ್ರಕರಣ ಆರೋಪಿ. ಈತ ಮೂಡುಬಿದಿರೆ ಠಾಣೆಯಲ್ಲಿ ಕಳೆದ ಕೆಲ ಸಮಯಗಳಿಂದ ಕರ್ತವ್ಯ ಪೊಲೀಸ್ ಸಿಬ್ಬಂದಿಯಾಗಿ ಕತ೯ವ್ಯ ನಿವ೯ಹಿಸುತ್ತಿದ್ದ.ಕೆಲವು ದಿನಗಳ ಹಿಂದೆ ಈ ಭಾಗದ ಮಹಿಳೆಯೊಬ್ಬರು ಯಾವುದೋ ಪ್ರಕರಣವೊಂದಕ್ಕೆ ಸಂಬಂಧಿಸಿ

ಮಂಗಳೂರಿನ ಶರವು ದೇವಸ್ಥಾನ ;ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಮಾತ್ರವಲ್ಲದೆ ಕೆಲವೊಂದು ಕಡೆ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆಯು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮಂಗಳೂರಿನ ಶರವು ದೇವಸ್ಥಾನ ಬಳಿ ಬಾಲಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಿ ಎಸ್ ಪ್ರಕಾಶ್, ವಿಶ್ವ ಹಿಂದೂ