ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ಎರಡು ಬಣಗಳ ಮಧ್ಯೆ ಅಸಮಾಧಾನ ಸ್ಪೋಟಗೊಂಡು, ಬಡಿದಾಟ ಮಾರಾಮಾರಿ ನಡೆದಿದೆ. ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಪರಾಮರ್ಶೆ ಸಭೆಯು ಕಾಂಗ್ರೇಸ್ ಮುಖಂಡರಾದ ಜಿ.ಕೃಷ್ಣಪ್ಪ ಹಾಗೂ ನಂದಕುಮಾರ್ ಬಣದ ನಾಯಕರ ಕಾರ್ಯಕರ್ತರ ವಾಕ್ಸಮರ, ಕೈ ಕೈ ಮಿಲಾಯಿಸಿಕೊಳ್ಳವ ರಣರಂಗಕ್ಕೆ ವೇದಿಕೆಯಾಯಿತು.
BEST KARNATAKA BUDGET HAS EVER SEEN: RAMANATHA RAI ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್. ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ. ಈ ಬಜೆಟ್ ಎಲ್ಲಾ
ಮಂಗಳೂರು : ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ರಾಜ್ಯದ ಜನತೆಯನ್ನು ವಂಚಿಸಿದ ಕಾಂಗ್ರೆಸ್ ಸರಕಾರ ಇದೀಗ ಸುಳ್ಳು ಭರವಸೆಗಳ ಬಜೆಟ್ ಮಂಡಿಸಿ ಮತ್ತೆ ಜನರ ವಂಚಿಸಲು ಪ್ರಯತ್ನಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಗ್ಯಾರಂಟಿಗಳ ಜಾರಿಗೆ 57,910 ಕೋಟಿ ರೂ. ವೆಚ್ಚ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಆದರೆ ಆದಾಯ ಸಂಗ್ರಹದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ನಿರುದ್ಯೋಗಿ ಪದವೀಧರರಿಗೆ ಮಾಸಿಕ ಭತ್ಯೆ
ಸುಳ್ಯ ತಾಲೂಕಿನ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬದ ನೂತನ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಡಬ ಮಿನಿ ವಿಧಾನ ಸೌಧದಲ್ಲಿ ನೂತನ ಕಚೇರಿ ಉದ್ಘಾಟಿಸಲಾಯಿತು. ಬೆಳಿಗ್ಗೆ ಗಣಹೋಮ ಪೂಜೆ ನಡೆಸಿದ ಬಳಿಕ ಉದ್ಘಾಟನೆ ನೆರವೇರಿಸಲಾಯಿತು. ಜನಸಂಘ ಹಗೂ ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ರೈ ಪಟ್ಟೆಗುತ್ತು ಪೆರಾಬೆ ಹಾಗೂ ತನಿಯಪ್ಪ ಮಜ್ಜಗುಡ್ಡೆ ಕಡಬ, ಕುಶಾಲಪ್ಪ ಗೌಡ ಕುಡಾಲ ದೀಪ ಬೆಳಗಿಸಿ ಉದ್ಘಾಟನೆ ನೆರವೇರಸಿದರು. ಶಾಸಕಿ ಭಾಗೀರಥಿ ಮುರುಳ್ಯ ಅವರು 94
ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ದಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿಗೆ ಮನವಿ ಮಾಡಿದ್ದಾರೆ. ಪೊಲೀಸ್ ಕಮೀಷನರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಶಾಸಕರು ಸಾಮರಸ್ಯ, ಸಹಬಾಳ್ವೆ ಮತ್ತು ಶಾಂತಿ ಸುವ್ಯವಸ್ಥೆ ತುಂಬಿರುವ ಜಿಲ್ಲೆಯಲ್ಲಿ ಅವಹೇಳನಕಾರಿ ಪೋಸ್ಟ್ ಮೂಲಕ
ಬಿಜೆಪಿಯಲ್ಲಿ ಮನೆಯೊಂದು ಬಾಗಿಲು ಹತ್ತು ಎಂಬಂತಾಗಿದೆ. ಯಾರು ಏನು ಮಾತನಾಡುತ್ತಾರೆಂದು ಗೊತ್ತಾಗುತ್ತಿಲ್ಲ. ರಾಜ್ಯ ಬಿಜೆಪಿಯ ಪರಿಸ್ಥಿತಿಯನ್ನು ನಿಯಂತ್ರಿಸಲು 56 ಇಂಚಿನ ಎದೆಯವರಿಗೂ ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬಿಜೆಪಿಯಲ್ಲಿ ಉದ್ಭವಿಸಿರುವ ಗೊಂದಲಗಳನ್ನು ನಿವಾರಿಸಲು ಕೇಂದ್ರದ ವರಿಷ್ಠರಿಗೂ ಸಾಧ್ಯವಾಗದ
ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 5 ಕೆ.ಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 5.ಕೆ.ಜಿ ಅಕ್ಕಿಯನ್ನು ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದ್ದು, ಉಳಿದ ಹೆಚ್ಚುವರಿ 5 ಕೆ.ಜಿ ಅಕ್ಕಿಗೆ 170 ರೂ. ನೀಡಲು ತೀರ್ಮಾನ
ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ನಡೆಸುವವರ ವಿರುದ್ಧ ನಿಗಾ ವಹಿಸಬೇಕು. ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಕಾಮತ್ ಅವರು, ಗೋವು ಹಿಂದುಗಳಿಗೆ ಪವಿತ್ರವಾಗಿದೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಅಕ್ರಮ ಗೋವಧೆ, ಅಕ್ರಮ ಗೋಹತ್ಯೆ ತಡೆಯಲು ಪೆÇಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಅನೇಕ ಕಡೆಗಳಲ್ಲಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ. ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಿಮಗೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಯಾರು ಕೇಳಿದ್ರು? ಶಿಕ್ಷಣ ಸಂಸ್ಥೆ, ಪಾಲಕರು,