ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಪು ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೇ ಸುರೇಶ್ ಶೆಟ್ಟಿ ಅವರ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್ ಉದ್ಘಾಟಿಸಲಾಯಿತು. ರಾಜ್ಯ ಚುನಾವಣಾ ಸಹ ಉಸ್ತುವಾರಿಗಳಾದ ಕೆ. ಅಣ್ಣಾಮಲೈ ಹಾಗೂ ಶಾಸಕರಾದ ಲಾಲಾಜಿ ಮೆಂಡನ್ ಅವರು ಮಾಧ್ಯಮ ಕೇಂದ್ರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್
ಮೂಡುಬಿದಿರೆ: ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಎ. ಕೋಟ್ಯಾನ್ ಅವರು ಸಹಸ್ರಾರು ಸಂಖ್ಯೆಯ ಕೇಸರಿಪಡೆಯೊಂದಿಗೆ ಮೆರವಣಿಗೆಯಲ್ಲಿ ಆಡಳಿತ ಸೌಧಕ್ಕೆ ಆಗಮಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಅವರು ಕಳೆದ ಐದು ವರ್ಷಗಳಲ್ಲಿ ಎರಡು ವರ್ಷ ಕೊರೋನಾದಿಂದಾಗಿ ಸಮಸ್ಯೆಯಾಗಿತ್ತು. ಆದರೆ ಮೂರು ವರ್ಷಗಳಲ್ಲಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ತರುವ ಮೂಲಕ ಅಭಿವೃದ್ಧಿ ಪಡಿಸಲಾಗಿದೆ.
ಸುಳ್ಯ: ಸುಳ್ಯ ಮೀಸಲು ಕ್ಷೇತ್ರದಿಂದ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಇಂದು ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಲಿದರು. ಇಂದು ಬೆಳಗ್ಗೆ 11:35 ರ ವೇಳೆಗೆ ಪಕ್ಷದ ಹಿರಿಯ ನಾಯಕರ ಜೊತೆ ಆಗಮಿಸಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಸಲಿದ್ದರು. ನಾಮಪತ್ರ ಸಲ್ಲಿಕೆಯ ಮೊದಲು ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಅದ್ದೂರಿ ಮೆರವಣಿಗೆ ನಡೆಯಿತು. ಶ್ರೀರಾಮಪೇಟೆಯ ಶ್ರೀರಾಮ ಭಜನಾ ಮಂದಿರದ ಬಳಿಯಿಂದ ಮೆರವಣಿಗೆ ನಗರದ ಬೀದಿಯಲ್ಲಿ ಸಾಗಿ ಬಂದಿತು. ಶ್ರೀರಾಮ ಪೇಟೆಯಿಂದ
ವಿಧಾನಸಭಾ ಚುನಾವಣೆಯ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಇಂದು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಅರುಣಕುಮಾರ ಸಂಗಾವಿ ಅವರಿಗೆ ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಕೆ.ಪಿ.ಸಿ.ಸಿ. ವಕ್ತಾರ ಟಿ.ಎಂ. ಶಹೀದ್ ಮೊದಲಾದ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಸ್ರಾರು ಕಾರ್ಯಕರ್ತರೊಂದಿಗೆ ಜಾಥದೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಅಭ್ಯರ್ಥಿ ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಕಾಪು ಜನಾರ್ದನ ದೇವಸ್ಥಾನದಲ್ಲಿ ಅಂತಿಮವಾಗಿ ಪೂಜೆ ಸಲ್ಲಿಸಿ ಐದು ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಜಾಥದ ಮೂಲಕ ತೆರಳಿ
ಚನ್ನರಾಯಪಟ್ಟಣ: ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಎನ್ ಬಾಲಕೃಷ್ಣ ನಾಮಪತ್ರ ಸಲ್ಲಿಸಿದರು. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಎನ್ ಬಾಲಕೃಷ್ಣ ಅವರು ಸಹಸ್ರಾರು ಸಂಖ್ಯೆಯ ಬೆಂಬಲಿಗರೊಂದಿಗೆ ಮಖಾನ್ ಬಳಿಯ ಕೆಂಪೇಗೌಡ ಸರ್ಕಲ್ ನಿಂದ ಹೊರಟು ಹೊಸ ಬಸ್ ನಿಲ್ದಾಣ, ನವೋದಯ ವೃತ್ತ, ಕೆ.ಆರ್ ಸರ್ಕಲ್ ಮಾರ್ಗವಾಗಿ ರೋಡ್ ಶೋ ಮಾಡುವ ಮೂಲಕ ಆಂಜನೇಯ ದೇವಸ್ಥಾನ ಮುಂಭಾಗ
ಉಳ್ಳಾಲ : ಬಿಜೆಪಿ ಗೆಲುವು ಸಾಧಿಸಿದಲ್ಲಿ ಶಾಸಕರಿಂದ ಆಗಿರುವ ತೊಂದರೆ, ತಾರತಮ್ಯವನ್ನು ದೂರವಾಗಿಸುವ ಪ್ರಾಮಾಣಿಕ ಪ್ರಯತ್ನ. ಪ್ರತಿಯೊಬ್ಬರನ್ನು ಮುಟ್ಟುವ ಕೆಲಸವನ್ನು ಪ್ರಯತ್ನಿಸುತ್ತೇನೆ, ಸೀಮಿತ ದಿನಗಳಿರುವುದರಿಂದ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದರೂ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿರಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಹೇಳಿದ್ದಾರೆ. ಅವರು ಪಂಡಿತ್ ಹೌಸ್ ನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ
ಮಂಗಳೂರು ವಿಧಾನಸಭಾ ಕ್ಷೇತ್ರದ ಎಸ್‍ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ ಅವರು ನಾಮಪತ್ರ ಸಲ್ಲಿಸಿದರು. ಅವರು ತೊಕ್ಕೊಟ್ಟುವಿನ ಮೈದಾನದಲ್ಲಿ ಜರಗಿದ ಎಸ್‍ಡಿಪಿಐ ಮಂಗಳೂರು ವಿಧಾಸನಭಾ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಪ್ರಯುಕ್ತ ಹಮ್ಮಿಕೊಳ್ಳಲಾದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಸರಳ ವ್ಯಕ್ತಿತ್ವ, ಸ್ಟೀಲ್ ಲೋಟದಲ್ಲಿ ಚಹಾ ಕುಡಿಯುವವರು ಕೆ.ಟಿಯನ್ನು ಸೇವಿಸುವವರು ಉಳ್ಳಾಲದ ಶಾಸಕರು. ಚುನಾವಣೆ ಬಂದಾಗ ಎಲ್ಲರಿಂದಲೂ ಹಣ
ಬೈಂದೂರು: ಈಗಾಗಲೇ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು ಏಪ್ರಿಲ್ 20 ರಂದು ಗುರುವಾರ ಬಿಜೆಪಿ ಕಾರ್ಯಕರ್ತರ ಬ್ರಹತ್ ಸಮಾವೇಶದ ಮೂಲಕ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೈಂದೂರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ಸೋಮವಾರ ಬಿಜೆಪಿ ಕಛೇರಿಯಲ್ಲಿ ನಡೆದ
ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿ ಸೋಮವಾರ ದರ್ಬೆ ರೈ ಎಸ್ಟೇಟ್ ಬಿಲ್ಡಿಂಗ್ ನಲ್ಲಿ ಉದ್ಘಾಟನೆಗೊಂಡಿತು. ಗಣಹೋಮದೊಂದಿಗೆ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಂಎಸ್ ಮುಹಮ್ಮದ್, ಚಂದ್ರಹಾಸ ಶೆಟ್ಟಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಡಾ ರಾಜಾರಾಂ , ಪುತ್ತೂರು ಬ್ಲಾಕ್ ಕಾಂಗ್ರೆಸ್



























