ಪುತ್ತೂರು: ಕಾಂಗ್ರೆಸ್ ನಾಯಕಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ದಿವ್ಯ ಪ್ರಭಾ ಚಿಲ್ತಡ್ಕ ಕಾಂಗ್ರೆಸ್ ಗೆ ರಾಜಿನಾಮೆ ನೀಡಿದ್ದು ಇಂದು ಅಧಿಕೃತವಾಗಿ ಜೆಡಿಎಸ್ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಜೆ ಪಿ ಭವನದಲ್ಲಿ ಜೆಡಿಎಸ್ ಅಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ಇಮದು ಮದ್ಯಾಹ್ನ ಕಾಂಗ್ರೆಸ್ ನಾಯಕ ರಘು ಆಚಾರ್
ಉಳ್ಳಾಲ: ಎಪ್ರಿಲ್ 17 ಸೋಮವಾರದಂದು ಮಂಗಳೂರು ವಿಧಾನಸಭಾ ಕ್ಷೇತ್ರ ಎಸ್ ಡಿಪಿಐ ಚುನಾವಣಾ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಯವರು ಸಹಸ್ರಾರು ಕಾರ್ಯಕರ್ತರೊಂದಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಎಸ್ ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಹಾಗೂ ರಾಜ್ಯ ಸಮಿತಿ ಸದಸ್ಯರೂ ಆದ ಅಥಾವುಲ್ಲಾ ಜೋಕಟ್ಟೆ ತಿಳಿಸಿದ್ದಾರೆ.ಸೋಮವಾರ ಬೆಳಿಗ್ಗೆ 11:00 ಗಂಟೆಗೆ ಸರಿಯಾಗಿ ಉಳ್ಳಾಲ ಮಾಸ್ತಿಕಟ್ಟೆ ಜಂಕ್ಷನ್ ನಿಂದ ಕಾಲ್ನಡಿಗೆ ಜಾಥಾದಲ್ಲಿ ಸಹಸ್ರಾರು
ಮಂಗಳೂರು: ಈ ಬಾರಿ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಶತಸ್ಸಿದ್ಧ. ಮಂಗಳೂರು ಕ್ಷೇತ್ರವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಎಂಟೂ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲುವುದು ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಂಗಳೂರು ಕ್ಷೇತ್ರದ ಪ್ರಭಾರಿ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಬಿಜೆಪಿಯ ಮಂಗಳೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಇಂದು ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಅತ್ಯಂತ ಪ್ರಜಾಸತ್ತಾತ್ಮಕ ವಿಧಾನದಲ್ಲಿ
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಹಾಗೂ ಸಾವಿತ್ರಿ ಸತ್ಯವಾನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಮಮತಾ ಹೆಗ್ಡೆ ರವರು ಕಾರ್ಕಳ ತಾಲೂಕಿನ ಎಣ್ಣೆ ಹೊಳೆಯ ಸುಮಾರು 138 ಕೋಟಿಯ ಕಳಪೆ ಕಾಮಗಾರಿಯನ್ನು ವೀಕ್ಷಿಸಿದರು.ಎಣ್ಣೆ ಹೊಳೆಯ ಅಣೆಕಟ್ಟಿನ ಕಾಮಗಾರಿಯು ಕಳಪೆ ದರ್ಜೆಯ ಕಾಮಗಾರಿಯಾಗಿದ್ದು , ತೆರಿಗೆದಾರರ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದು ಮಮತಾ ಹೆಗ್ಡೆ ಅವರು ದೂರಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣ ಖರ್ಚು ಮಾಡಿದರೂ ಕಾರ್ಕಳಕ್ಕೆ ಕುಡಿಯುವ
ಉಳ್ಳಾಲ : ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಲ್ಲಿ ಯಾವುದೇ ಗೊಂದಲವಿಲ್ಲ, ಒಮ್ಮತದ ಅಭ್ಯರ್ಥಿ, ಕಾಂಗ್ರೆಸ್ ಸೋಲಿಸುವುದೇ ನಮ್ಮ ಧ್ಯೇಯವಾಗಿದೆ, ಕಾರ್ಯಕರ್ತರು ನೋವಿನಿಂದ ಇದ್ದಲ್ಲಿ ನೇರ ಬಂದು ತಿಳಿಸಿ, ಸೂಕ್ತ ಅಭ್ಯರ್ಥಿ ಸತೀಶ್ ಕುಂಪಲ ಅವರನ್ನು ಅತ್ಯಧಿಕ ಮತಗಳೊಂದಿಗೆ ಗೆಲ್ಲಿಸುವುದೇ ಮಂಗಳೂರು ಮಂಡಲ ಬಿಜೆಪಿಯ ಗುರಿಯಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಹೇಳಿದ್ದಾರೆ. ಮುಡಿಪು ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಮುಖ್ಯಮಂತ್ರಿ ಅವರಿಗೆ ಹೂ ನೀಡಿ, ಆಶೀರ್ವಾದ ಪಡೆದರು.ಶುಭವಾಗಲಿ ಎಂದು ಸಿಎಂ ಆಶೀರ್ವದಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಭಾಗೀರಥಿ ಮುರುಳ್ಯ ಅವರು, ಸಾಮಾನ್ಯ ಕಾರ್ಯಕರ್ತೆ ಆಗಿರುವ ನನಗೆ ಚುನಾವಣೆ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಿದೆ. ಪಕ್ಷದ ಹಿರಿಯ ಮಾರ್ಗದರ್ಶನದಲ್ಲಿ ಕೆಲಸ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಜಿ.ಪಂ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರಿಗೆ ಪಕ್ಷ ಅವಕಾಶ ನೀಡಿದ ಹಿನ್ನಲೆಯಲ್ಲಿ ಎ.12 ರಂದು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ದಂಪತಿ ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಬಳಿಕ ಅವರು ಡಾ.ಎಂ.ಕೆ ಪ್ರಸಾದ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಈ ಬಾರಿಯ ಚುನಾವಣೆಯಲ್ಲಿ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ಮುಖಂಡೆ ಶಕುಂತಳಾ ಶೆಟ್ಟಿಯವರಿಗೆ ಟಿಕೆಟ್ ನೀಡದಿದ್ದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್ ನ ಎಲ್ಲ ಪದಾಧಿಕಾರಿಗಳು ಸಾಮೊಹಿಕ ರಾಜೀನಾಮೆ ನೀಡುವುದಾಗಿಯೂ ಹಾಗು ಶಕುಂತಳಾ ಶೆಟ್ಟಿಯವರು ಪಕ್ಷೇತರರರಾಗಿ ಸ್ಪರ್ಧಿಸಲು ಅಗ್ರಹಿಸುವುದಾಗಿಯೂ ಮಹಿಳಾ ಕಾಂಗ್ರೆಸ್ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅದ್ಯಕ್ಷೆ ಶಾರದ್ ಅರಸ್, ಮತ್ತು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ವಿಶಾಲಕ್ಷಿ ಬನ್ನೂರು ತಿಳಿಸಿದ್ದಾರೆ.
ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಟಿಕೆಟ್ ತಪ್ಪುತ್ತಲೇ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅವರ ಮನೆಯತ್ತ ದೌಡಾಯಿಸುತ್ತಿದ್ದಾರೆ. ಅಭಿಮಾನಿಗಳನ್ನು ಕಂಡು ರಘುಪತಿ ಭಟ್ ಭಾವುಕರಾಗಿದ್ದಾರೆ. ನಾನು ಶಾಕ್ ನಲ್ಲಿದ್ದೇನೆ ಏನು ಹೇಳುವ ಸ್ಥಿತಿಯಲಿಲ್ಲ ಎಂದು ರಘುಪತಿ ಭಟ್ ಹೇಳಿದ್ದರು. ಪಕ್ಷ ನನ್ನನ್ನು ನಡೆಸಿಕೊಂಡ ಬಗ್ಗೆ ತುಂಬಾ ಬೇಸರವಿದೆ. ಕನಿಷ್ಠ ಜಿಲ್ಲಾ ಮಟ್ಟದ ನಾಯಕರು ಕೂಡ ಕರೆ ಮಾಡಿ ಮಾತನಾಡಿಲ್ಲ. ಜಾತಿಯ ಕಾರಣಕ್ಕೆ ನನಗೆ ಟಿಕೆಟ್ ತಪ್ಪಿದೆ ಅನ್ನೋದು
ಉಳ್ಳಾಲ: ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಪಕ್ಷದ ಆದೇಶದಂತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದರೂ ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ, ಪಕ್ಷಕ್ಕಾಗಿ ದುಡಿಯುವ ಕಾರ್ಯವನ್ನು ಹಿಂದಿನಿಂದ ಮಾಡುತ್ತಾ ಬಂದಿದ್ದೇವೆ, ಅಭ್ಯರ್ಥಿಯಾಗಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ. ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ



























