ಉಳ್ಳಾಲ: ಕಾಂಗ್ರೆಸ್ ಚುನಾವಣಾ ಪ್ರಚಾರವಾಗಿ ಸೋಮೇಶ್ವರ ಕೊಲ್ಯ ಸಮೀಪ ಹಾಕಲಾದ ಬ್ಯಾನರಿಗೆ ಗ್ರಾಮಸ್ಥರು ಸ್ಟಿಕ್ಕರ್ ಅಂಟಿಸಿ 15 ವರ್ಷಗಳಿಂದ ಹದಗೆಟ್ಟಿರುವ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ. 15 ವರ್ಷಗಳಿಂದ ಇಲ್ಲಿಯ ರಸ್ತೆ ಕಾಮಗಾರಿ ನಡೆಯದೆ ಜನರು ಕೊಳಚೆಯಲ್ಲಿಯೇ ಬದುಕಬೇಕಾಗಿದೆ. ಯಾವ ಪಕ್ಷಕ್ಕೆ ಮತ ಹಾಕಬೇಕು? ಅನ್ನುವ ಸ್ಟಿಕ್ಕರ್ ಅಂಟಿಸಲಾಗಿದೆ.
KARKALA : ಜನಪ್ರತಿನಿಧಿಯಾಗಿ ಕ್ಷೇತ್ರದ ಅಭಿವೃದ್ದಿಯ ರಿಪೋರ್ಟ್ ಕಾರ್ಡ್ ನೀಡುವುದು ನನ್ನ ಜವಾಬ್ದಾರಿ ಯಾಗಿದೆ. ಅಭಿವೃದ್ಧಿಗೆ ಹೊಸ ಸ್ಪರ್ಷ ನೀಡಿ ಸ್ವರ್ಣ ಕಾರ್ಕಳ ಪರಿಕಲ್ಪಯು ಈಡೇರುತ್ತಿದೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳ ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆದ ಕ್ಷೇತ್ರದ ಸಾಧನೆಯ ರಿಪೋರ್ಟ್ ಕಾರ್ಡ್ ಅನಾವರಣ ಗೊಳಿಸಿ ಮಾತನಾಡಿದರು. ಮೂಲಭೂತ ಸೌಕರ್ಯಗಳ ಜೊತೆ ಬೃಹತ್ ಪ್ರಮಾಣದ
ಉಡುಪಿ ಶಾಸಕ ರಘುಪತಿ ಭಟ್ ವಿರುದ್ದ ಅಟೋ ಚಾಲಕರು ತಿರುಗಿ ಬಿದ್ದಿದ್ದಾರೆ. ನಗರದ ಒಳಗಡೆ ಓಡಾಡುವ ಅಟೋಚಾಲಕರ ಮಧ್ಯೆ ಬಿರುಕು ಮೂಡಿಸಿ, ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎನ್ನುವ ಅರೋಪಗಳನ್ನು ಅಟೋ ಚಾಲಕರು ಮಾಡಿದ್ದಾರೆ.ಅಷ್ಟೇ ಅಲ್ಲ ನಗರದೊಳಗಡೆ ಸಂಚರಿಸುವ ಅಟೋ ಚಾಲಕರ ಸಮಸ್ಯೆಗಳನ್ನು ಬಗೆ ಹರಿಸದಿದ್ದಲ್ಲಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆಯನ್ನು ಕೂಡ ಅಟೊ ಚಾಲಕರು ನೀಡಿದ್ದಾರೆ. ನಿಯಮದಂತೆ ನಗರದಲ್ಲಿ ಸಂಚರಿಸುವ ಅಟೋಗಳು ರೋಟೆಶನ್ ಮಾದರಿಯಲ್ಲಿ
ಮಂಗಳೂರು: ರಾಜ್ಯದಿಂದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯು ನಾಲ್ಕು ತಂಡಗಳ ನೇತೃತ್ವದಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳನ್ನು ಪ್ರವೇಶಿಸಿ ರೋಡ್ ಶೋ, ಸಭೆಗಳನ್ನು ನಡೆಸುತ್ತಿದೆ. ಆರ್.ಅಶೋಕ್ ಹಾಗೂ ಕೆ.ಎಸ್.ಈಶ್ವರಪ್ಪ ನೇತೃತ್ವದ ತಂಡವು ಮುನ್ನಡೆಸುತ್ತಿರುವ ವಿಜಯ ಸಂಕಲ್ಪ ಯಾತ್ರೆಯು ಮಾ.11-13ರವರೆಗೆ ದ.ಕ.ಜಿಲ್ಲೆಯಲ್ಲಿದ್ದು ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ ನಡೆಸಲಿದೆ ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ
ಸುರತ್ಕಲ್: ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿ ಬಿಜೆಪಿ ಕಾರ್ಪೋರೇಟರ್ ಒಬ್ಬರ ಮೇಲೆ ಯುವಕನೊಬ್ಬ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ:ಬಿಜೆಪಿ ಕಾರ್ಪೋರೇಟರ್ ಲೋಕೇಶ್ ಬೊಳ್ಳಾಜೆ ಎಂಬವರು ದೂರಿದ್ದು ಅದರಲ್ಲಿ ಸ್ಥಳೀಯ ನಿವಾಸಿ ಗಣೇಶ್ ದೇವಾಡಿಗ ಎಂಬವನನ್ನು ಆರೋಪಿ ಎಂದು ಹೆಸರಿಸಲಾಗಿದೆ. ಕಾಟಿಪಳ್ಳದಲ್ಲಿ ಸೇವಾ ಚಾರಿಟೇಬಲ್ ಟ್ರಸ್ಟ್ ಕಟ್ಟಿಕೊಂಡಿರುವ ಎ.ಪಿ.
ಪುತ್ತೂರು: ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು.ಅವರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾದ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.ಸಾಮಾಜಿಕ ನ್ಯಾಯ ನೀಡಲು ಪೂರಕವಾಗಿ
ಬೆಂಗಳೂರು, ಮಾ, 3; ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ “ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕಾರಣಿ” ಆರಂಭಗೊಂಡಿದೆ. ವಿಧಾನಸಭಾ ಚುನಾವಣೆಯಲ್ಲಿ ಯುವ ಕಾಂಗ್ರೆಸ್ ಪಾತ್ರ, ಚುನಾವಣಾ ಪ್ರಚಾರ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಜನರ ಮುಂದಿಟ್ಟು ಪರಿಣಾಮಕಾರಿಯಾಗಿ ಹೋರಾಟ ನಡೆಸುವ ಮತ್ತು ನಿರುದ್ಯೋಗ, ಇತರೆ ಯುವ ಜನಾಂಗ ಎದುರಿಸುತ್ತಿರುವ ಗಂಭೀರ
ಬೆಂಗಳೂರು,ಫೆ,27: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕಿರುವ ಉನ್ನತ ಶಿಕ್ಷಣ ಮತ್ತು ಐಟಿ – ಬಿಟಿ ಸಚಿವ ಸಿ.ಎನ್. ಅಶ್ವಥ್ ನಾರಾಯಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಒತ್ತಾಯಿಸಿದ್ದಾರೆ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಜೀವ
ಉಳ್ಳಾಲ ನಗರಸಭೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಬಹುಮತವಿಲ್ಲದ ಕಾಂಗ್ರೆಸ್ ಪಕ್ಷ ದುರಾಡಳಿತ ಮತ್ತು ಅವ್ಯವಹಾರಗಳಿಗೆ ಪ್ರಸಿದ್ಧಿಯನ್ನು ಪಡೆದಿದ್ದು, ದೇಶದಲ್ಲಿ ಮತ್ತು ರಾಜ್ಯದಲ್ಲಿ ಬದ್ಧ ವೈರಿಯಾಗಿರುವ ಬಿಜೆಪಿ ಉಳ್ಳಾಲ ನಗರಸಭೆಯಲ್ಲಿ ಮಾತ್ರ ಕಾಂಗ್ರೆಸ್‍ನೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಆಡಳಿತದ ಅವ್ಯವಹಾರಕ್ಕೆ ಬೆಂಬಲ ನೀಡುತ್ತಿದೆ ಎಂದು ಜಾತ್ಯಾತೀತ ಜನತಾದಳದ ರಾಜ್ಯ ವಕ್ತಾರ ಹಾಗೂ ಉಳ್ಳಾಲ ನಗರಸಭೆಯ ಸದಸ್ಯ ದಿನಕರ ಉಳ್ಳಾಲ್
ತನ್ನ ಅಳಿಯನನ್ನೇ ಅಪಹರಣ ಮಾಡಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿದ ಆರೋಪದ ಮೇಲೆ ಪುತ್ತೂರು ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಹಾಗೂ ಅವರ ಕುಟುಂಬದ ಐವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಿವ್ಯಪ್ರಭಾ ಅವರ ವಿರುದ್ದ ಅವರ ಅಳಿಯ ನವೀನ್ ಗೌಡ ಅವರು ದೂರು ನೀಡಿದ್ದು, ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ದಿವ್ಯಪ್ರಭಾ ಹಾಗೂ ಮಗಳು ಸ್ಪಂದನಾ , ಪರಶುರಾಮ್ ,



























