ರಾಜ್ಯದ ಜನತೆಯು ರಾಜ್ಯದ ಅಭಿವೃದ್ಧಿಗಳಿಗೆ ಕರ್ನಾಟಕ ಜನತಾ ಪಕ್ಷವನ್ನು ಬೆಂಬಲಿಸಿ ಸುವರ್ಣ ನಾಡನ್ನು ಕಟ್ಟಲು ಕೈ ಜೋಡಿಸಬೇಕೆಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ಪದ್ಮನಾಭ ಪ್ರಸನ್ನ ಕುಮಾರ್ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.ರಾಜ್ಯದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ. ರಾಜ್ಯದ ಜನ ಬಿಜೆಪಿ,
ಭಾರತ ದೇಶ ಹಾಗೂ ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರು ನೀಡಿದ ಕೊಡುಗೆ ಅತ್ಯಮೂಲ್ಯವಾದದ್ದು ಎಂದು ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ಬಣ್ಣಿಸಿದರು.ಅವರು ಫೆ. 19ರ ಭಾನುವಾರ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ದಕ್ಷಿಣ ಕನ್ನಡ ಹಾಗೂ ಜಿಲ್ಲೆಯ ಆರ್ಯ ಯಾನೆ ಮರಾಠ ಸಮಾಜ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಛತ್ರಪತಿ ಶಿವಾಜಿಯವರ 396ನೇ
ಉಡುಪಿ ಜಿಲ್ಲಾ ಪ್ರವಾಸದ ನಿಮಿತ್ತ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಇವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. , ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಶಾಸಕ ರಾಜೇಶ್ ನಾಯ್ಕ್, ಭರತ್ ಶೆಟ್ಟಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಇಂದು ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾ ಅವರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್ ಮುಖಂಡರಾದ ಪ್ರದೀಪ ರಾವ್, ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಜೆಪಿ ನಡ್ದಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದು, ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಉಡುಪಿ ಶಾಸಕ ರಘುಪತಿ ಭಟ್, ಮುಖಂಡರಾದ
ರಾಜ್ಯದ ಸಂಸದರ ಮೌನ, ಸರಕಾರದ ಅಸಹಾಯಕತೆ, ಕೇಂದ್ರ ಸರಕಾರದ ಮಲತಾಯಿ ಧೋರಣೆಯಿಂದಾಗಿ ರಾಜ್ಯದ ಜನತೆ ಸಾಲದ ಹೊರೆಯಲ್ಲಿ ಹೊತ್ತುಕೊಳ್ಳುವಂತಾಗಿದೆ. ರಾಜ್ಯ ಸರಕಾರ ಮಂಡಿಸಿದ್ದು ಸುಲಿಗೆ, ಸಾಲದ ಬಜೆಟ್ ಆಗಿದೆ ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊನೆಯ ಉಸಿರೆಳೆಯುತ್ತಿರುವ ಸರಕಾರ ಮಹತ್ವವಿಲ್ಲದ ಬಜೆಟ್ ಮಂಡಿಸಿದ್ದು, ಜನತೆಯನ್ನು ಸಾಲದಲ್ಲಿ ಮುಳುಗಿಸಿದೆ
ಕಾರ್ಕಳ: ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲದ ಐದನೇ ಅಭ್ಯರ್ಥಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಜಯಶಾಲಿಯಾಗಲಿದ್ದೇವೆ ಎಂದು ಕಾರ್ಕಳ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ನೀರೆ ಕೃಷ್ಣ ಶೆಟ್ಟಿ, ಮಂಜುನಾಥ್ ಪೂಜಾರಿ ಮುದ್ರಾಡಿ, ಡಿ ಆರ್ ರಾಜು, ಸುರೇಂದ್ರ ಶೆಟ್ಟಿ ಪುನರುಚ್ಚರಿಸಿದ್ದಾರೆ. ಕಾರ್ಕಳ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹೆಬ್ರಿ ಬ್ಲಾಕ್
ಮಾಜಿ ಸಿಎಂ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಿ, ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿ ಸಾಮಾಜಿಕ ಮೌಲ್ಯವನ್ನು ಎತ್ತಿ ಹಿಡಿದು
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ರಾಜ್ಯ ಬಜೆಟ್ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ಆರೋಗ್ಯದಲ್ಲಿ ಪರಿವರ್ತನೆ ತರೋ ಕೆಲಸ ಸರ್ಕಾರ ಮಾಡಿದೆ. ಕೃಷಿಕರು, ಮಹಿಳೆಯರು, ಮತ್ತು ಯುವಕರ ಪರವಾದ ಬಜೆಟ್ಈಗ ಮೂರು ಲಕ್ಷ ಕೋಟಿಗೂ ಅಧಿಕ ಬಜೆಟ್ ಮಂಡನೆಯಾಗಿದೆ. ಇದು ಕೃಷಿಕನ ಕನಸಿನ ಬಜೆಟ್,
ಮೂಡುಬಿದಿರೆ: ಉನ್ನತ ಶಿಕ್ಷಣ ಸಚಿವ ಡಾ.ಸಿ ಅಶ್ವತ್ಥನಾರಾಯಣ ಅವರು ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಟಿಪ್ಪುಸುಲ್ತಾನನ್ನು ಹೊಡೆದು ಹಾಕಿದಂತೆ ಹೊಡೆದು ಹಾಕಬೇಕು ಎಂದಿರುವ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮತ್ತು ರಾಷ್ಟ್ರಪತಿಯವರು ಮುಖ್ಯಮಂತ್ರಿಗೆ ಸೂಚನೆ ನೀಡಬೇಕು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆಗ್ರಹಿಸಿದ್ದಾರೆ. ಗುರುವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ನಡೆಸಿದ



























