ರಾಜ್ಯ ಬಿಜೆಪಿ ಸರಕಾರವು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸ್ಥಳೀಯ ಆಡಳಿತಕ್ಕೆ ಒತ್ತು ನೀಡಿ ಪಂಚಾಯತ್ ರಾಜ್ ವ್ಯವಸ್ಥೆಗೆ ನೀಡಲಾಗಿದ್ದ ಅಧಿಕಾರವನ್ನು ಮೊಟಕುಗೊಳಿಸಲು ಮುಂದಾಗಿದೆ. ಈ ತಿದ್ದುಪಡಿಯನ್ನು ರಾಜ್ಯ ಸರಕಾರ ಗ್ರಾ.ಪಂ.ಅಧ್ಯಕ್ಷರ ಅಧಿಕಾರ ಮೊಟಕು ಗೊಳಿಸುವ ವಿರುದ್ದ ಸುಳ್ಯ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ
ಮಂಗಳೂರು : ಸುರತ್ಕಲ್ ಜಂಕ್ಷನ್ ಅನ್ನು ವೀರ್ ಸಾವರ್ಕರ್ ಜಂಕ್ಷನ್ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಸೆಪ್ಟೆಂಬರ್ 30 ರಂದು ಶುಕ್ರವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಯಿತು. ವೃತ್ತಕ್ಕೆ ಮರುನಾಮಕರಣ ಮಾಡುವಂತೆ ಶಾಸಕ ಡಾ.ಭರತ್ ಶೆಟ್ಟಿ ಮನವಿ ಮಾಡಿದ್ದರು. ಆಗಸ್ಟ್ 3, 2021 ರಂದು ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿಯ ವರದಿಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಪ್ರಸ್ತಾವನೆಯನ್ನು ಎಂಸಿಸಿ ಸದಸ್ಯರಾದ ಎ ಸಿ
ಬಹುನಿರೀಕ್ಷಿತ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಗಡಿನಾಡು ಗುಂಡ್ಲುಪೇಟೆ ಪಟ್ಟಣದಿಂದ ಆರಂಭವಾಗಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ ಪಾದಯಾತ್ರೆ ಮುಗಿಸಿ ರಾಜ್ಯಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಗುಂಡ್ಲುಪೇಟೆಯಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಇಡೀ ರಾಜ್ಯಮಟ್ಟದ ನಾಯಕರು ಹಾಗೂ ರಾಷ್ಟ್ರಮಟ್ಟದ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು 40 ಸಾವಿರಕ್ಕು ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಈ
ದೇಶದಲ್ಲಿ ಶಾಂತಿ ಸಾಮರಸ್ಯ ಹದಗೆಡಿಸುವ ಯಾವುದೇ ಸಂಘಟನೆ ವಿರುದ್ಧ ಕ್ರಮ ಆಗಬೇಕು. ಇದು ಸರ್ಕಾರದ ಜವಾಬ್ದಾರಿ, ಹಾಗಾಗಿ ಎಲ್ಲಾ ಸಂಘ ಸಂಸ್ಥೆಗಳ ಮೇಲೆ ಕ್ರಮ ಆಗಲಿ ಎಂದು ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಹಲ್ಲೆ, ಅಶಾಂತಿ, ಕೋಮುದ್ವೇಷದ ಸಂಘಟನೆ ವಿರುದ್ದ ಕ್ರಮ ಕೈಗೊಳ್ಳಲಿ. ತಾರತಮ್ಯ ಮಾಡದೇ ಸದುದ್ದೇಶದಿಂದ ಕ್ರಮ ವಹಿಸಲಿ. ಒಂದು ಕ್ರಮದ ಮೂಲಕ ಸಮಾಜದಲ್ಲಿ ಅಶಾಂತಿ ಕಡಿಮೆಯಾಗಬೇಕು. ಉತ್ತಮ ಸಮಾಜ
ದೇಶದಲ್ಲಿ ಈಗಾಗಲೇ ಕೇಂದ್ರ ಗೃಹ ಇಲಾಖೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ನಿಷೇಧವನ್ನು ಹೊರಡಿಸಿರುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)ಪ್ರವೀಣ್ ಸೂದ್ ತಿಳಿಸಿದ್ದಾರೆ.ರಾಜ್ಯದಲ್ಲಿ ಪಿಎಫ್ ಐ ಚಟುವಟಿಕೆಗಳನ್ನು ನಡೆಸುವುದಾಗಲಿ, ಆ ಸಂಘಟನೆ ಪರವಾಗಿ ಮಾತನಾಡುವುದಾಗಲೀ ಮಾಡಬಾರದು. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು. ಈಗಾಗಲೇ ರಾಜ್ಯದ ನಾನಾ
ಮೂಡುಬಿದಿರೆ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಜನವಿರೋಧಿ, ದೇಶವಿರೋಧಿ ಆಡಳಿತವನ್ನು ವಿರೋಧಿಸಿ ಮತ್ತು ವಿಪರೀತ ಬೆಲೆ ಏರಿಕೆಯನ್ನು ಖಂಡಿಸಿ ಸಿ.ಪಿ.ಐ.ಎಂನ ತಾಲೂಕು ಸಮಿತಿ ವತಿಯಿಂದ ಸೋಮವಾರ ಆಡಳಿತ ಸೌಧದ ಮುಂಭಾಗದಲ್ಲಿ ಪ್ರಚಾರಾಂದೋಲನ ನಡೆಯಿತು.ಸಿ.ಪಿ.ಐ.ಎಂನ ರಾಜ್ಯ ಸಮಿತಿಯ ಸದಸ್ಯ ಜಿ.ಎನ್ ನಾಗರಾಜ್ ಅವರು ಪ್ರಚಾರಾಂದೋಲನವನ್ನು ಉದ್ದೇಶಿಸಿ ಮಾತನಾಡಿ ನಿರುದ್ಯೋಗ, ಹಣದುಬ್ಬರ, ದೇಶದ ಸಂಪತ್ತಿನ ಲೂಟಿ ಮತ್ತು ಭ್ರಷ್ಟಾಚಾರದಲ್ಲಿ ತನ್ನನ್ನು
ರಾಜ್ಯ ಸರಕಾರದ ಇಲಾಖೆಗಳಲ್ಲಿ ಶೇ40 ಕಮಿಷನ್ ಪಡೆಯಲಾಗಿದೆ ಎಂದು ಗುತ್ತಿಗೆ ದಾರರು ಪ್ರಧಾನಿ ಮೋದಿಗೆ ನೀಡಿದ ದೂರಿನ ಬಗ್ಗೆ ಹಾಲಿ ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶ ರ ಮೂಲಕ ತನಿಖೆ ನಡೆಯಲಿ’ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ‘ರಾಜ್ಯದಲ್ಲಿ 40 ಶೇ. ಕಮೀಷನ್ ಪಡೆಯುವ ಆರೋಪ ಹೊಂದಿರುವ ಇಲಾಖೆಗಳ ಮೇಲೆ ಐ.ಟಿ, ಇ.ಡಿ ದಾಳಿ ಏಕೆ ನಡೆಯುತ್ತಿಲ್ಲ. ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶದ ಜನಕ್ಕೆ
ವಿಪಕ್ಷ ನಾಯಕರಾದ ಸಿದ್ದರಾಮಯ್ಯರನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿರುವ ಸಚಿವ ಸುನೀಲ್ ಕುಮಾರ್ ಅವರು ಭ್ರಷ್ಟಾಚಾರ ದಾಖಲೆ ಬಹಿರಂಗಪಡಿಸಬೇಕು ಇಲ್ಲವೆ ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ PAYCM ಮಾದರಿಯಲ್ಲಿ SUNILPAY ಪೋಸ್ಟರ್ ಬಿಡುಗಡೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯರವರು ಈ ರಾಜ್ಯ ಕಂಡ ಶ್ರೇಷ್ಠ ರಾಜಕಾರಣಿ, ಯಾವುದೇ ಲೋಪಗಳಿಲ್ಲದ ಭ್ರಷ್ಟಾಚಾರ ರಹಿತ ಪೂರ್ಣ ಅವಧಿಯ
ಮಂಜೇಶ್ವರ: ಪಾಪ್ಯುಲರ್ ಫ್ರಂಟ್ ಮುಖಂಡರ ಬಂಧನವನ್ನು ವಿರೋಧಿಸಿ ರಾಜ್ಯ ವ್ಯಾಪಕವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು. ಮಂಜೇಶ್ವರ ಭಾಗದಲ್ಲಿ ಹರತಾಳ ಬೆಂಬಲಿಗರ ಮನವಿ ಮೇರೆಗೆ ಬಹುತೇಕ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚಿ ಸಹಕರಿಸಿದ್ದಾರೆ. ಅತ್ಯವಶ್ಯಕ ಕೆಲವೊಂದು ವಾಹನಗಳು ರಸ್ತೆಗಿಳಿಯುವುದನ್ನು ಹೊರತು ಪಡಿಸಿದರೆ ಖಾಸಗಿ ಅಥವಾ ಸರಕಾರಿ ಬಸ್ಸುಗಳು
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ (ಮತಾಂತರ ನಿಷೇಧ ) ಸಂವಿಧಾನದ ಕಲಂ 25 ರ ಸ್ಪಷ್ಟ ಉಲ್ಲಂಘನೆಯಾಗಿದೆ. ಆದರೂ ಸಂವಿಧಾನ ವಿರೋಧಿಯಾಗಿರುವ ಮಸೂದೆ ಜಾರಿಗೆ ತಂದಿರುವ ರಾಜ್ಯ ಸರ್ಕಾರವನ್ನು ತಕ್ಷಣ ವಜಾ ಮಾಡುವ ಅಗತ್ಯವಿದೆ ಎಂದು ಒತ್ತಾಯಿಸಿದ ಅವರು ಪರಿಶಿಷ್ಟ ಜಾತಿ/ಪಂಗಡಗಳನ್ನು ಇಂದಿಗೂ ಜಾತಿಯ ಕಾರಣಕ್ಕಾಗಿ ಹಿಂದೂ ಧರ್ಮದ ಸಂಪ್ರದಾಯ , ಆಚರಣೆ ವಿಚಾರದಲ್ಲಿ ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಅದರ ಬಗ್ಗೆ ಯಾವುದೇ ಕಠಿಣ ಮಸೂದೆ,



























