“ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೀನಕಳಿಯ, ಕೊಟ್ಟಾರ, ಹೊಸಬೆಟ್ಟು ಲೋಟಸ್ ಪಾರ್ಕ್ ಪ್ರದೇಶದಲ್ಲಿ ಮೊದಲ ಮಳೆಯಲ್ಲೇ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರು ಪಡಬಾರದ ಸಂಕಷ್ಟ ಅನುಭವಿಸಿದ್ದಾರೆ ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಆರೋಪಿಸಿದ್ದಾರೆ. ಸುರತ್ಕಲ್‍ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ನಗರದ ಮಿನಿ ವಿಧಾನಸೌಧದ ಬಳಿ ನಡೆದ ಪ್ರತಿಭಟನೆಯಲ್ಲಿ ನಡೆಯಿತ್ತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿ, ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಜನರಿಗೆ ಮೋಸ ಮಾಡುತ್ತಿದೆ. ಜನರಿಗೆ ಅಲ್ಪ ಅವಧಿಯ ಸೇವೆಯನ್ನ ನೀಡುವ ಉದ್ದೇಶ ಏನೂ ಎಂದು ಪ್ರಶ್ನೆ ಮಾಡಿದರು. ದೇಶದಲ್ಲಿ ಅಗ್ನಿಪಥ್ ಯೋಜನೆಯನ್ನು
ರಾಜಸ್ಥಾನದ ಉದಯಪುರದಲ್ಲಿ ಹಿಂದು ಯುವಕನ ಶಿರಚ್ಛೇದ ಘಟನೆ ಮಾನವೀಯತೆಗೆ ಸವಾಲಾದ ಪ್ರಕರಣ. ಕೃತ್ಯದ ಹಿಂದೆ ವ್ಯವಸ್ಥಿತ ಸಂಚಿದೆ, ಭಯೋತ್ಪಾದಕ ಕೃತ್ಯ. ದೇಶದಲ್ಲಿ ಐಸಿಸ್, ತಾಲಿಬಾನ್ ಮಾನಸಿಕತೆ ತಲೆ ಎತ್ತುತ್ತಿರುವುದಕ್ಕೆ ಇದು ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ. ಇದೇ ಮಾದರಿಯ ಹತ್ಯೆ ಶಿವಮೊಗ್ಗದಲ್ಲೂ ನಡೆದಿತ್ತು. ಹಿಂದು ಕಾರ್ಯಕರ್ತ ಹರ್ಷನ ಕತ್ತು ಕೊಯ್ದು ಅದರ ವಿಡಿಯೋವನ್ನು ಆತನ ಸೋದರಿಗೆ ಕಳಿಸಲಾಗಿತ್ತು.
ಬಂಟ್ವಾಳ: ಉಡುಪಿ ಜಿಲ್ಲೆಯ ಉಡುಪಿ ಪವರ್ ಕಾರ್ಪೋರೇಷನ್ ಲಿಮಿಟೆಡ್ ನಿಂದ ಕೇರಳದ ಕಾಸರಗೋಡಿಗೆ ವಿದ್ಯುತ್ ವಿತರಣಾ ಲೈನ್ ಮತ್ತು ಟವರ್ ನಿರ್ಮಾಣದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳನ್ನು ಹಾಗೂ ಭೂಮಿ ಕಳೆದುಕೊಳ್ಳಲಿರುವ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಹಾಗೂ ಪರಿಹಾರದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಬೆಳಗಾವಿ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದರು. ಈ ಯೋಜನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ , ಮಂಗಳೂರು, ಮೂಡಬಿದ್ರೆ, ಮುಲ್ಕಿ
ಕಾಪು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳೂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಬಂಡಾಯದ ಬಿಸಿ ಬಿಜೆಪಿಯನ್ನು ಸುಡಲಿದೆಯೇ ಎಂಬ ಆತಂಕ ಬಿಜೆಪಿ ಪಾಳಾಯದಲ್ಲಿ ಮೂಡಿದೆ.ನಾಮಪತ್ರ ಸಲ್ಲಿಕೆಗೆ ಡಿ.15 ಅಂತಿಮ ದಿನವಾಗಿದ್ದು, ಇದೀಗ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆಗೊಳಿಸುತ್ತಿರುವಂತೆ, ಟಿಕೇಟ್ ವಂಚಿತರು ಕೆಂಡಾಮಂಡಲವಾಗಿದ್ದಾರೆ. ಪಕ್ಷಕ್ಕಾಗಿ ದುಡಿದ ನಮಗೆ ನಮ್ಮದೇ ಪಕ್ಷದ ನಾಯಕರಿಂದ ಅನ್ಯಾಯವಾಗಿದೆ ಎಂಬ ಮಾತುಗಳು ಅತೃಪ್ತರ
ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಮೊದಲ ಸ್ಥಾನವನ್ನು ಪಡೆದಿದ್ದಾರೆ. ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಮತದಾರರಿಗೆ ಹಾಗೂ ಖರ್ಚಿಗೆ ಒಂದೇ ಒಂದು ರೂಪಾಯಿ ಖರ್ಚು ಮಾಡಿದೇ ಗೆದ್ದಂತಹ ಅಭ್ಯರ್ಥಿ ಅಂದರೆ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಎಂದು ಹೇಳಲು ಸಂತೋಷಪಡುತ್ತೇನೆ. ಇದು ನೈಜ ಮತದಾರರ ಗೆಲುವು ಅಂತ ನನಗೆ ಅನಿಸುತ್ತೆ. ಮತ್ತು ಇದು ಬಿಜೆಪಿ ಪಕ್ಷದ ಪ್ರತಿ
ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಕೊಟ್ಟ ಕಾಂಗ್ರೆಸ್ಸಿಗೆ ನಮಿಸುತ್ತೇನೆ. ನನಗೆ ಬೆಂಬಲ ಕೊಟ್ಟು ಹಾಗೂ ಮತದಾನ ಮಾಡಿದ ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ಸಿನ ವಿಧಾನಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು. ಈ ಗೆಲುವು ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದು ಸಂತೋಷ ವ್ಯಕ್ತಪಡಿಸಿದರು. ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಈ ಮಟ್ಟಕ್ಕೆ ಗುರುತಿಸಿ ಬೆಳೆಸಿದ ಕಾಂಗ್ರೆಸ್
ಮಂಗಳೂರಿನ ರೊಸಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಂನ್ನು ತೆರೆಯಲಾಯಿತು. ಬಳಿಕ ಮತಪತ್ರಗಳ ವಿಂಗಡನೆ ಮಾಡಲಾಯಿತು. 10:45ರ ಸುಮಾರಿಗೆ ಮತ ವಿಂಗಡನೆ ಕಾರ್ಯ ಪೂರ್ಣಗೊಂಡಿದ್ದು, ಕೆಲಹೊತ್ತಿನಲ್ಲಿ ಮತ ಎಣಿಕೆಗೆ ಚಾಲನೆ ಸಿಗಲಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ ದ್ವಿ ಸದಸ್ಯತ್ವ ಸ್ಥಾನಕ್ಕೆ ಡಿ.10ರಂದು ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಬಗ್ಗೆ
ಮಡಿಕೇರಿ: 20 ಕ್ಷೇತ್ರಗಳ 25 ಸ್ಥಾನಗಳಿಗೆ ಡಿ.10ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ. ಪ್ರತಸ್ಪರ್ಧಿ ಮಂಥರ್ ಗೌಡ ಅವರ ವಿರುದ್ಧ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ. ಇನ್ನು ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆ





















