ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವವನ್ನು ಆಯೋಜಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯು ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಈ ಉತ್ಸವವು ದಕ್ಷಿಣ ಭಾರತದಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರಾದ ಕಿಶನ್ ರೆಡ್ಡಿ ಅವರು ಅಭಿಪ್ರಾಯ ಪಟ್ಟರು. ಇದೇ
ಕೋವಿಡ್ ಸಮಸ್ಯೆ, ಆರ್ಥಿಕ ತೊಂದರೆಗಳಿಂದ ಭಾರೀ ಸಂಕಷ್ಟದಲ್ಲಿರುವ ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದ್ಯತೆ ನೀಡಬೇಕು ಎಂದು ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಆಗ್ರಹಿಸಿದೆ. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್ ರಕ್ಷಾ ರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಷ್ಟ್ರೀಯ ಯುವ ಕಾಂಗ್ರೆಸ್
ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮೂಲಕ ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ್ರು. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಕೆಲಸ ಮಾಡ್ತಾರೆ ಎನ್ನುವ ವಿಶ್ವಾಸವಿದೆ ಎಂದು ಮೋದಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಬಿಎಸ್‌ವೈ ಅವರನ್ನು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ. ಬಿಎಸ್‌ವೈಗೆ ಪಕ್ಷ ಮೇಲಿನ ಬದ್ಧತೆ ಅವರ್ಣನೀಯವಾಗಿದೆ. ಸಾಮಾಜಿಕ ನ್ಯಾಯ,
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಜ ಬೊಮ್ಮಾಯಿ ಅವರಿಗೆ ಪ್ರಮಾಣ ಬೋಧಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಕಾರ್ಯಕ್ರಮ
ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಕ ಮಾಡಲಾಗಿದೆ. ಶಾಸಕಾಂಗದ ಪಕ್ಷದ ಸಭೆಯ ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನೇಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್
ಮಂಗಳೂರು: ನಗರದ ಯೆನೆಪೊಯ ಆಸ್ಪತ್ರೆಯಲ್ಲಿ ಕಳೆದ ಒಂಬತ್ತು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ (80) ಅವರಿಗೆ ಮಂಗಳವಾರ ನಸುಕಿನ ಜಾವ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ತಡರಾತ್ರಿ 12ರಿಂದ ಆರಂಭವಾದ ಶಸ್ತ್ರ ಚಿಕಿತ್ಸೆಯು ನಸುಕಿನ ಜಾವ 5.30 ರವರೆಗೂ ನಡೆಯಿತು. ಯೆನೆಪೊಯ ಆಸ್ಪತ್ರೆಯ ನ್ಯೂರಾಲಜಿಸ್ಟ್ ಡಾ.ದಿವಾಕರ್ ರಾವ್, ಎ.ಜೆ. ಆಸ್ಪತ್ರೆಯ
ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದು 2 ವರ್ಷದ ಸಂದರ್ಭದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದರು. ಅಲ್ಲದೇ ರಾಜಭವನಕ್ಕೆ ಕಾಲ್ನಡಿಗೆಯಲ್ಲೇ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಇದೀಗ ಬಿಎಸ್ ಯಡಿಯೂರಪ್ಪ ಅವರ ಸಿಎಂ ಸ್ಥಾನಕ್ಕೆ ನೀಡಿದಂತ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಈ ಮೂಲಕ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ
ಕೊನೆಗೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಂದು ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು, ತಮ್ಮ ರಾಜಕೀಯ ಏಳು ಬೀಳುಗಳನ್ನು ಹೇಳುವಾಗ ಭಾವುಕರಾದರು. ಇಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು. 75 ವರ್ಷದ ಬಳಿಕ ಎರಡು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟ
ನಾಗಮಂಗಲ: ಪ್ರತಿಯೊಬ್ಬರು ಸಮಾಜದಲ್ಲಿ ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಎಲ್ಲರೂ ಆರೋಗ್ಯದಿಂದ ಎಚ್ಚರಿಕೆಯಿಂದ ಇರುವಂತೆ ಶಾಸಕ ಸುರೇಶಗೌಡ ಕರೆ ನೀಡಿದರು. ಅವರಿಂದು ನಾಗಮಂಗಲ ಕಾಲೇಜು ಕ್ರೀಡಾಂಗಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಕೂಲಿ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸುತ್ತ ಕರೋನಾ ಮಹಾಮಾರಿಯ ಕಡಿಮೆ ಯಾಗಿದೆ ಎಂದು ಎಚ್ಚರ ತಪ್ಪಿದರೆ ಅಪಾಯ ಆದ್ದರಿಂದ ಸಾಮಾಜಿಕ ಅಂತರದೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಈ
ಅನಾರೋಗ್ಯದಿಂದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರದ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಆರೋಗ್ಯವನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಚಾರಿಸಿದರು. ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಆಗಮಿಸಿದ ಇವರಿಬ್ಬರು ಆಸ್ಕರ್ ಫೆರ್ನಾಂಡಿಸ್ ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆಸ್ಕರ್ ಅವರ


















