Home Archive by category ರಾಜಕೀಯ (Page 6)

ಪುತ್ತೂರು ನಗರಸಭಾಧ್ಯಕ್ಷೆ ವಿರುದ್ಧ ಅವಾಚ್ಯ ಪದ ಬಳಕೆ : ಆಕ್ರೋಶ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್

ಪುತ್ತೂರು: ಪುತ್ತೂರು ನಗರಸಭಾಧ್ಯಕ್ಷೆ ವಿರುದ್ಧ ಅವಾಚ್ಯ ಪದ ಬಳಸಿದ್ದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ಥಳೀಯ ಶಾಸಕ ಅಶೋಕ್ ಕುಮಾರ್ ರೈ ಅವರ ಆಪ್ತನೆಂಬಂತೆ ಅದ್ದು ಪಡೀಲ್ ಗುರುತಿಸಿಕೊಂಡಿದ್ದು, ಶಾಸಕರು ಇಂತಹವರಿಂದ ದೂರ ಇರುವುದು ಉತ್ತಮ.

ದಿಲ್ಲಿ ವಿಧಾನಸಭೆಗೆ ಎಎಪಿ ಏಕಾಂಗಿ ಸ್ಪರ್ಧೆ: ಅರವಿಂದ್ ಕೇಜ್ರಿವಾಲ್ ಘೋಷಣೆ

ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. 70 ಸದಸ್ಯ ಬಲದ ದಿಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ಇದಕ್ಕೂ ಮುನ್ನ, ಈ ವರ್ಷಾರಂಭದಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿದಿದ್ದ ಆಮ್ ಆದ್ಮಿ ಪಕ್ಷ, ಯಾವುದೇ

ಶಿಗ್ಗಾಂವಿ ಫಲಿತಾಂಶ, ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆ ಗೆಲುವು

ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಯಾಸೀರ್​ ಪಠಾಣ್​ಗೆ 13,448 ಮತಗಳ ಅಂತರದಲ್ಲಿ ಗೆಲುವು ದೊರೆತಿದೆ. ಅವರಿಗೆ

ಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆ ಗೆಲುವು

 ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್​​ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ. ಅತ್ತ ನಿಖಿಲ್​ಗೆ ಮೂರನೇ ಬಾರಿಯೂ

ಸಂಡೂರು ಕ್ಷೇತ್ರದ ಉಪಚುನಾವಣೆ: ಅನ್ನಪೂರ್ಣ ತುಕರಾಂಗೆ ಗೆಲುವು

ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ ತುಕಾರಾಂ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆದರೆ, 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇ

ಜಾರ್ಖಂಡ್ ಚುನಾವಣೆ: ಎಐಸಿಸಿ ಸಮನ್ವಯಕಾರರಾಗಿ ಬಿ.ಕೆ.ಹರಿಪ್ರಸಾದ್

ಮಂಗಳೂರು: ಜಾರ್ಖಂಡ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಐಸಿಸಿಯ ಹಿರಿಯ ಸಮನ್ವಯಕಾರರನ್ನಾಗಿ ಕಾಂಗ್ರೆಸ್‌ನ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಆದೇಶಿಸಿದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ಬಿ.ಕೆ. ಹರಿಪ್ರಸಾದ್, ಗೌರವ್ ಗೊಗಾಯ್, ಮೋಹನ್ ಮರ್ಕಮ್ ಅವರನ್ನು ನೇಮಕಗೊಳಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಜಮ್ಮು ಮತ್ತು ಕಾಶ್ಮೀರ – ಖಾತೆ ತೆರೆದ ಎಎಪಿ – ದೋಡಾದಲ್ಲಿ ಗೆಲುವು

ಹೊಸ ರಾಜ್ಯಗಳಿಗೆ ವಿಸ್ತರಿಸಿಕೊಳ್ಳುವ ಆಮ್ ಆದ್ಮಿ ಪಕ್ಷದ ಪ್ರಯತ್ನವು ಜಮ್ಮು ಮತ್ತು ಕಾಶ್ಮೀರದಲ್ಲಿ ಫಲ ನೀಡಿದೆ.ದೋಡಾ ವಿಧಾನ ಸಭಾ ಕ್ಷೇತ್ರದಲ್ಲಿ ಮೆಹ್ರಾಜ್ iಲಿಕ್ ಅವರು ಎಎಪಿ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅವರು ಬಿಜೆಪಿಯ ಅಭ್ಯರ್ಥಿ ಗಜಯ್ ಸಿಂಗ್ ರಾಣಾರನ್ನು ಸೋಲಿಸಿದರು. ೩೬ರ ಮಲಿಕ್ ಅವರು ರಾಜ್ಯಪಾಲರ ಆಡಳಿತದ ಕಟು ಟೀಕಾಕಾರರಾಗಿ ಜನಪ್ರಿಯತೆ ಗಳಿಸಿದ್ದರು.

ಎನ್‌ಸಿಯ ಓಮರ್ ಅಬ್ದುಲ್ಲಾ ಮತ್ತೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ

ನ್ಯಾಶನಲ್ ಕಾನ್ಫರೆನ್ಸ್‌ನ ನಾಯಕ ಓಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದನ್ನು ಇಂಡಿಯಾ ಮೈತ್ರಿ ಕೂಟವು ಸ್ಪಷ್ಟಪಡಿಸಿದೆ.ಶೇಖ್ ಅಬ್ದುಲ್ಲಾ, ಅವರ ಮಗ ಫಾರೂಕ್ ಅಬ್ದುಲ್ಲಾ ಹಾಗೂ ಮೊಮ್ಮಗ ಓಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದರು. ಈಗ ಅಲ್ಲಿ ಇಂಡಿಯಾ ಮೈತ್ರಿ ಕೂಟವು ಬಹುಮತ ಸಾಧಿಸಿದೆ; ಅದರಲ್ಲಿ ಎನ್‌ಸಿ ಬಹುತೇಕ ಸ್ಥಾನಗಳನ್ನು ಗೆದ್ದಿದೆ. ಈಗ ಓಮರ್ ಅಬ್ದುಲ್ಲಾರು ಜಮ್ಮು

ಇದು ಪ್ರತಿಯೊಬ್ಬ ಹುಡುಗಿಯ ಹೋರಾಟ – ವಿನೇಶಾ ಪೋಗಟ್

ಪ್ರತಿಯೊಬ್ಬ ಮಹಿಳೆಯು ಹೋರಾಟದಲ್ಲಿ ತೊಡಗಿದ್ದು, ತನ್ನ ಹೋರಾಟದ ದಾರಿಯನ್ನು ಆಯ್ಕೆ ಮಾಡಿಕೊಂಡು, ಮುನ್ನಡೆಯಬೇಕು ಎಂದು ಹೊಸ ಶಾಸಕಿ ಕುಸ್ತಿಪಟು ವಿನೇಶಾ ಪೋಗಟ್ ಹೇಳಿದರು. ಇದು ಪ್ರತಿಯೊಬ್ಬ ಹುಡುಗಿಯ ಹೋರಾಟ. ಪ್ರತಿಯೊಬ್ಬ ಮಹಿಳೆಯು ತನ್ನ ಹೋರಾಟದ ಹಾದಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ನನಗೆ ದಕ್ಕಿರುವ ಗೆಲುವು ಹೋರಾಟದ ಗೆಲುವಾಗಿದೆ, ಸತ್ಯದ ಗೆಲುವಾಗಿದೆ. ಈ ದೇಶ ನನಗೆ ನೀಡಿರುವ ಪ್ರೀತಿ ಮತ್ತು ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಹೊಸದಾಗಿ ವಿಧಾನಸಭೆ