ಸಕಲೇಶಪುರ: ತಾಲೂಕಿನ ಮಠಸಾಗರ ಗ್ರಾಮದಲ್ಲಿ ವ್ಯಾಪಾರ ಮಾಡುತ್ತಿದ್ದ ಮಹಿಳೆಯೊಬ್ಬರಿಂದ 25 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ಆರೋಪಿ ಸೈಯದ್ ಅಲಿ ನಡಾಫ್ ಬಿನ್ ಬಾಳಾಸಾಬ್ (27), ಗದಗ ಜಿಲ್ಲೆಯ ಹುಲ್ಲೂರು ಗ್ರಾಮದವನು, ಸಕಲೇಶಪುರ ನಗರ ಪೊಲೀಸರು ಸೆರೆಹಿಡಿದಿದ್ದಾರೆ. ಮಾರ್ಚ್ 25 ರಂದು ನಡೆದ ಈ ಕಳವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು,
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಸರಕಾರಿ ಶಾಲೆಗಳನ್ನು ಉಳಿಸುವ ವಿಶೇಷ ಯೋಜನೆ 300 ಟ್ರೀಸ್ ಇದರ ಸಮಾಲೋಚನ ಸಭೆ ನಡೆಸಿ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸುವಂತೆ ಮನವಿ ಮಾಡಿದರು. 300 ಟ್ರೀಸ್ ಸಮಿತಿ ರಚನೆ ಹಾಗೂ ಈ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅಳವಡಿಸುವ ಬಗ್ಗೆ ಶಿಕ್ಷಣ ಪ್ರೇಮಿಗಳು, ಅಧ್ಯಾಪಕರು, ದಾನಿಗಳು ಹಾಗೂ ಕಾರ್ಯಕರ್ತರಿಂದ ಸಲಹೆಗಳನ್ನು ಸ್ವೀಕರಿಸಿದರು. ಸಭೆಯಲ್ಲಿ, ಬೆಂಗಳೂರಿನಲ್ಲಿ ನೆಲೆಸಿರುವ
ಹಾಸನ: ಚನ್ನರಾಯಪಟ್ಟಣದ ರಾಮೇಶ್ವರ ಬಡಾವಣೆಯಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನೊಳಗೆ ಗ್ರಾಮ ಪಂಚಾಯಿತಿ ನೌಕರರೊಬ್ಬರ ಶವ ಪತ್ತೆಯಾಗಿದೆ. ದಿಡಗ ಗ್ರಾಮ ಪಂಚಾಯಿತಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್ (32) ಎಂಬಾತ ತಮ್ಮ ಕಾರಿನೊಳಗೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಆಲೂರು ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಯಾಗಿದ್ದ ಶಿವಪ್ರಸಾದ್, ಅತಿಯಾಗಿ ಮದ್ಯ ಸೇವಿಸುವ ಚಟ ಹೊಂದಿದ್ದ ಎನ್ನಲಾಗಿದೆ. ನಿನ್ನೆ ತಡರಾತ್ರಿ ಮದ್ಯ
ಬೆಂಗಳೂರಿನ ಹಸಿರು ತೋಟದ ಗ್ರೀನ್ ಪಾತ್ ಏರಿನಲ್ಲಿ ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ನಾದ ಬ್ರಹ್ಮ, ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರು ಮಾತನಾಡಿ, ಕಾಲವು ಅಳಿಸಲಾಗದ ಹೆಸರು ಶಕ್ತಿಯುತ ಬಂಡಾಯ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರದು. ಭಾರತದಲ್ಲಿ ನೆಲದ ಮಕ್ಕಳ ಬದುಕಿಗೆ ಮೊದಲು ದನಿ
2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಆದರಂತೆ ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ. ವಿದ್ಯಾರ್ಥಿ ಜೀವನದ ಟರ್ನಿಂಗ್ ಪಾಯಿಂಟ್ ಎಂದೇ ಹೇಳಲ್ಪಡುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಪ್ರಕಟವಾಗಿದೆ. ಬೆಂಗಳೂರಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ 2024-25ನೇ ಸಾಲಿನ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಗೌರವ ಪ್ರಶಸ್ತಿ ಪ್ರದಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭವು ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಿಕ್ಷಣ ತಜ್ಞರಾದ ಪ್ರೊ. ಕೆ.ಇ. ರಾಧಾಕೃಷ್ಣ ಅವರು ಮಾತನಾಡಿ, ಒಂದು ಸಣ್ಣ ಅಕಾಡೆಮಿಯ ಮೂಲಕ
ದಕ್ಷಿಣ ಕನ್ನಡ ಜಿಲ್ಲೆಯ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಸಂಚಾಲಕರಾದ ಡಾ. ರವಿಕಕ್ಕೆಪದವು ನೇತೃತ್ವದಲ್ಲಿ ಮಹಾ ಕುಂಭ ಮೇಳಕ್ಕೆ ತೆರಳಿದ 42 ಮಂದಿ ಸೇರಿ ಅಲ್ಲಿನ ಸ್ವಾಮಿಗಳ ನೇತೃತ್ವದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಪವಿತ್ರ ಧಾರ್ಮಿಕ ಸ್ಥಳವಾದ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ತ್ರಿವೇಣಿ ಸಂಗಮವಾದ ಮಹಾ ಕುಂಭ ಮೇಳದಲ್ಲಿ ಅನಾವರಣ ಗೊಳಿಸಲಾಯಿತು. ಈ ಸಂಧರ್ಭದಲ್ಲಿ ಜಾತ್ರಾ ಮಹೋತ್ಸವ ಯಶಸ್ವಿಯಾಗಬೇಕು ಸಮಾಜಕ್ಕೆ
ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಡೆಗಟ್ಟಬಹುದಾದ ರೋಗವಾಗಿದ್ದು, ತಂಬಾಕು ಉತ್ಪನ್ನಗಳನ್ನು ಬಳಸದೇ ಇದ್ದಲ್ಲಿ ಖಂಡಿತವಾಗಿಯೂ ಬಾಯಿ ಕ್ಯಾನ್ಸರ್ ಬರುವ ಸಾಧ್ಯತೆ ಶೇಕಡಾ 90 ರಷ್ಟು ಕ್ಷೀಣಿಸುತ್ತದೆ. ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಂಬಾಕು ಉತ್ಪನ್ನಗಳಾದ ಗುಟ್ಕಾ, ಪಾನ್ ಪರಾನ್, ಬೀಡಿ, ಸಿಗರೇಟುಗಳ ದುರ್ಬಳಕೆಯಿಂದ ಬರುತ್ತದೆ. ಇದನ್ನು ವರ್ಜಿಸಿದ್ದಲ್ಲಿ ಮುಂದೊದಗುವ ಅನಾಹುತವನ್ನು ತಡೆಗಟ್ಟಬಹುದು. ಅದೇ ರೀತಿ ಒಂದು ವೇಳೆ ಬಾಯಿ ಕ್ಯಾನ್ಸರ್ ಬಂದರೂ
ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಘಟ ನೆ ನಡೆದಿದೆ. ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ಧಾರಾವಿಯ ಮುರುಗಂಡಿ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ್ದಾರೆ. ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಪೊಲೀಸರು ಸ್ಥಳ ಮಹಜರು ನಡೆಸಲು ಆರೋಪಿ ಮುರುಗಂಡಿಯನ್ನು ಕೋಟೆಕಾರಿಗೆ ಕರೆದುಕೊಂಡು ಬಂದಿದ್ದರು. ಈ ವೇಳೆ
ಬೈಂದೂರು: ಬೈಂದೂರು ತಾಲೂಕಿನಲ್ಲಿ ಸರಕಾರಿ ಜಾಗದಲ್ಲಿ ಹಲವಾರು ವರ್ಷಗಳಿಂದ ಮನೆ ಕಟ್ಟಿ ಕೊಂಡು ವಾಸವಾಗಿರುವ 20 ಫಲಾನುಭವಿಗಳಿಗೆ ಶಾಸಕ ಗುರುರಾಜ್ ಶೆಟ್ಟಿ ಗಂಟಿ ಹೊಳೆಯವರು ಜನವರಿ 16ರಂದು ತಾಲೂಕು ಕಚೇರಿಯಲ್ಲಿ ಹಕ್ಕು ಪತ್ರ ವಿತರಿಸಿದರು.ನಂತರ ಮಾತನಾಡಿದ ಶಾಸಕರು, ವಾಸ್ತವ್ಯದ ಹಕ್ಕು ಎಲ್ಲರಿಗೂ ಅಗತ್ಯವಾಗಿ ದೊರಕಬೇಕು. ಹಲವು ವರ್ಷಗಳಿಂದ ಸರಕಾರಿ ಜಾಗದಲ್ಲಿ ಮನೆ ಕಟ್ಟಿ ವಾಸವಾಗಿದ್ದರೂ ಕೂಡ ಹಕ್ಕು ಪತ್ರ ಇಲ್ಲದೇ ಸರಕಾರದ ಯಾವುದೇ ಸೌಲಭ್ಯ ಪಡೆಯದೇ ಇರುವ




























