ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. 70 ಸದಸ್ಯ ಬಲದ ದಿಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ಇದಕ್ಕೂ ಮುನ್ನ, ಈ ವರ್ಷಾರಂಭದಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ
ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ₹16.5 ಹೆಚ್ಚಳ ಮಾಡಿವೆ. ಗೃಹ ಬಳಕೆಯ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದರ ಪರಿಷ್ಕರಣೆ ಬಳಿಕ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ದರ ₹1,818.50 ಆಗಿದ್ದು, 5 ಕೆ.ಜಿಯ ಸಿಲಿಂಡರ್ ದರದಲ್ಲೂ ₹4 ಹೆಚ್ಚಳ ಮಾಡಲಾಗಿದೆ. 14.2 ಕೆ.ಜಿಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಕಳೆದ ತಿಂಗಳು ಕೂಡ 19 ಕೆ.ಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್
ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಯಾಸೀರ್ ಪಠಾಣ್ಗೆ 13,448 ಮತಗಳ ಅಂತರದಲ್ಲಿ ಗೆಲುವು ದೊರೆತಿದೆ. ಅವರಿಗೆ
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ ತುಕಾರಾಂ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆದರೆ, 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇ
ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಗೋವಾದಲ್ಲಿ ತುಳುಕೂಟ ಆರಂಭಿಸಲು ಕಾರಣವಾದ ಅಂಶಗಳನ್ನು ವಿವರಿಸಿದರು. ಮುಂಬೈ ಮತ್ತು
ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ಸಮಯದಿಂದ ಸರೋಜಾ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸರೋಜಾ ಸಂಜೀವ್ ಅವರು ಕೊನೆಯುಸಿರೆಳೆದಿದ್ದಾರೆ.
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಮುಂಬೈ:ಲೋಕಸಭಾ ಉಪಚುನಾವಣೆ ಸಲುವಾಗಿ ಬಿವಂಡಿ ಕ್ಷೇತ್ರದ ಉಸ್ತುವಾರಿಯಾಗಿ ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಯ್ಕೆಯಾಗಿದ್ದಾರೆ. ಇಂದು ಅವರು ಬಿವಂಡಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿ ಚುನಾವಣಾ ಪೂರ್ವ ತಯಾರಿಯಾ ಬಗ್ಗೆ ಜಿಲ್ಲಾ ಅಧ್ಯಕ್ಷ ರಶೀದ್ ತಾಯಿರ್ ಮೊಮಿನ್ ಹಾಗೂ ಪಕ್ಷದ ಪ್ರಮುಖ ನಾಯಕರ ಜೊತೆ ಚರ್ಚಿಸಿದ್ದಾರೆ. ಈ ಸಂದರ್ಭ ಪಕ್ಷದ ಮುಖಂಡರು ಐವನ್ ಡಿಸೋಜರವರನ್ನು ಆತ್ಮೀಯವಾಗಿ ಗೌರವ ಪೂರ್ವಕವಾಗಿ ಸ್ವಾಗತಿಸಿದರು.
ಇತಿಹಾಸ ಪ್ರಸಿದ್ಧ ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಗೆ ಬೇಕಾದ ಅಕ್ಕಿಯನ್ನು ಸಾವಯವ ಕೃಷಿಯ ಮೂಲಕ ತಯಾರಿಸಲು ಭತ್ತದ ನಾಟಿ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರದಲ್ಲಿ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀ ವೇಣುಗೋಪಾಲ ಕಲ್ಲೂರಾಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಏರಿಕ್ಕಳ ಬಯಲಿನಲ್ಲಿ ಶ್ರೀ
ತೈಲ ಮಾರಾಟ ಕಂಪನಿಗಳು ಭಾನುವಾರದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರವನ್ನು 39 ರೂ. ಗೆ ಹೆಚ್ಚಿಸಿವೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವು ₹ 1,691ಕ್ಕೆ ಏರಿಕೆ ಆಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. 14.2 ಕೆ.ಜಿಯ ಗೃಹ ಬಳಕೆ ಸಿಲಿಂಡರ್ ದರವು ಯಥಾಸ್ಥಿತಿಯಲ್ಲಿದೆ.




























