ಕರ್ನಾಟಕ ವಿಧಾನ ಪರಿಷತ್ ನ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಖ್ಯಾತ ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಉತ್ತಮ ಪ್ರಚಾರವನ್ನು ಮಾಡಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ
ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಅವರು ಶಿವಮೊಗ್ಗದ ವಿವಿಧೆಡೆ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದರು. ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಖ್ಯಾತ ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರು ಹಾಗೂ ಸೇವಾ ಮನೋಭಾವನೆಯುಳ್ಳ ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಅವರು ಸ್ಪರ್ಧಿಸುತ್ತಿದ್ದಾರೆ.
ಪುತ್ತೂರು: ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲೆಯಲ್ಲಿ ವಿಶೇಷ ಗಮನಕ್ಕೆ ಪಕ್ಷದ ರಾಜ್ಯಾಧ್ಯಕ್ಷರು ಸೂಚಿಸಿದ್ದಾರೆ. ಗರಿಷ್ಠ ಪ್ರಮಾಣದ ಮತದಾನದೊಂದಿಗೆ ಎರಡೂ ಅಭ್ಯರ್ಥಿಗಳ ಗೆಲುವು ನಮ್ಮದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ, ಶಿಕ್ಷಕರ ಕ್ಷೇತ್ರದ ದ.ಕ. ಜಿಲ್ಲಾ ಚುನಾವಣಾ ಸಂಚಾಲಕ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ನೈರುತ್ಯ ಪದವೀಧರ ಮತ್ತು
2023ರಲ್ಲಿ ಪ್ರಪಂಚದಲ್ಲಿ 1,153 ಜನರಿಗೆ ಮರಣದಂಡನೆ ನೆರವೇರಿಸಿದ್ದು ಇದು ದಶಕದಲ್ಲೇ ಅತಿ ಹೆಚ್ಚು ಎಂದು ಲಂಡನ್ ಮೂಲದ ಅಮ್ನೆಸ್ಟಿ ಇಂಟರ್ನಾ್ಯಶನಲ್ ಹೇಳಿದೆ. ಇಷ್ಟೊಂದು ಮರಣದಂಡನೆ ನೆರವೇರಿರುವುದು 2015ರ ಬಳಿಕ ಅತಿ ಹೆಚ್ಚಿನದಾಗಿದೆ. 2023ರಲ್ಲಿ ಮರಣದಂಡನೆ ನೆರವೇರಿದ ಪ್ರಮಾಣವು 2022ಕ್ಕಿಂತ 30 ಶೇಕಡಾ ಹೆಚ್ಚು. ಮರಣದಂಡನೆ ಶಿಕ್ಷೆ ತೀರ್ಪು ನೀಡಿಕೆ ಕೂಡ 2023ರಲ್ಲಿ 20 ಶೇಕಡಾ ಅಧಿಕರಿಸಿದೆ ಎಂದು ಅಮ್ನೆಸ್ಟಿ ಇಂಟರ್ನಾ್ಯಶನಲ್ ಹೇಳಿದೆ. ಹಾಗಾದರೂ
ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಎಷ್ಟು ಅಕ್ರಮ ಕಟ್ಟಡಗಳಿವೆ, ಅಕ್ರಮ ಮಳಿಗೆಗಳಿವೆ ಎಂಬುದನ್ನು ಪಟ್ಟಿ ಮಾಡಿ ಕೊಡುತ್ತೇವೆ. ಇದನ್ನೇಲ್ಲಾ ಕೆಡವಲು ಒತ್ತಾಯಿಸಿ ಪ್ರತಿಭಟನೆ ನಡೆಸಲು ಯಶ್‌ಪಾಲ್ ಸುವರ್ಣ ಅವರು ತಯಾರಿದ್ದಾರೆಯೇ. ಈ ಬಗ್ಗೆ ಅವರು ಬಹಿರಂಗ ಚರ್ಚೆಗೆ ಸಿದ್ಧರಿದ್ದಾರೆಯೇ ಎಂದು ಎಸ್.ಡಿ.ಪಿ.ಐ ವಕ್ತಾರ ರಿಯಾಝ್ ಕಡಂಬು ಅವರು ಸವಾಲು ಹಾಕಿದ್ದಾರೆ. ಈ ಬಗ್ಗೆ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕ ಯಶ್ ಪಾಲ್ ಸುವರ್ಣ ಅವರು ಶಾಂತವಾಗಿರುವ
ಚಲನಚಿತ್ರೋತ್ಸವದಲ್ಲಿ ಭಾರತದ ಪಾಯಲ್ ಕಪಾಡಿಯಾರ ಕಿರು ಚಿತ್ರ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಚಿತ್ರವು ಅತ್ಯುತ್ತಮ ಪ್ರಶಸ್ತಿ ಪಡೆದಿದೆ. ಕಿರುಚಿತ್ರ ವಿಭಾಗದಲ್ಲಿ ಪಾಯಲ್‌ರ ಈ ಚಿತ್ರವು ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದುಕೊಂಡಿದೆ. ಮುಂಬಯಿ ಮೂಲದ ಪಾಯಲ್‌ರಿಗೆ ಕಿರುಚಿತ್ರ ತಯಾರಿಕೆ ಮತ್ತು ಪ್ರಶಸ್ತಿ ಹೊಸತಲ್ಲ. 2021ರ ಕಾನ್ ಚಿತ್ರೋತ್ಸವದಲ್ಲಿ ಅವರ ‘ನೈಟ್ ಆಫ್ ನೋಯಿಂಗ್ ನತಿಂಗ್’ ಗೋಲ್ಡನ್ ಐ ಪ್ರಶಸ್ತಿ ಪಡೆದಿತ್ತು.
ಸತ್ಯಪಾಲ್ ಮಲಿಕ್ ಅವರ ಕಚೇರಿಗಳ ಮೇಲೆ ಆರು ತಿಂಗಳ ಹಿಂದೆ ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಗಳ ದಾಳಿಯೋ ದಾಳಿಗೆ ಕಾರಣ ಪುಲ್ವಾಮಾದ ಕೊಲೆಗಳು ಎಂಬುದು ಒಂದು ಮಾತು. 2019ರಲ್ಲಿ 40 ಸಿಆರ್‌ಪಿಎಫ್ ಸೈನಿಕರು ಪುಲ್ವಾಮಾದಲ್ಲಿ ಸ್ಫೋಟಕ್ಕೆ ಸಿಕ್ಕಿ ಸತ್ತರು. ಇದನ್ನು ಚುನಾವಣಾ ವಿಷಯ ಮಾಡಿ ಬಿಜೆಪಿಯು ಅದೇ ವರುಷ ನಡೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದಿತು ಎಂದು ಜಮ್ಮು ಮತ್ತು ಕಾಶ್ಮೀರ ರಾಜ್ಯದ ಕೊನೆಯ ರಾಜ್ಯಪಾಲರಾಗಿದ್ದ ಸತ್ಯ ಪಾಲ್ ಮಲಿಕ್ ಕಳೆದ ವರುಷ
ರೆಮಲ್ ಚಂಡಮಾರುತವು ಪಡುವಣ ಬಂಗಾಳದಲ್ಲಿ ಹದಿನಾರಕ್ಕೂ ಹೆಚ್ಚು ಮತ್ತು ಬಾಂಗ್ಲಾದೇಶದಲ್ಲಿ ಹದಿನೆಂಟಕ್ಕೂ ಹೆಚ್ಚು ಜನರ ಪ್ರಾಣ ಹರಣ ಮಾಡಿದೆ. ಇದೇ ವೇಳೆ ಅಮೆರಿಕ ಸಂಯುಕ್ತ ಸಂಸ್ಥಾನದ ಬಯಲು ಪ್ರದೇಶದಲ್ಲಿ ದಿಗಿಣ ಹಾಕಿದ ಸುಳಿಗಾಳಿಯು ನಾಲ್ಕು ಮಕ್ಕಳ ಸಹಿತ ಹದಿನೆಂಟಕ್ಕೂ ಹೆಚ್ಚು ಮಂದಿಯ ಜೀವವನ್ನು ಹೀರಿದೆ. ರೆಮಲ್ ಚಂಡ ಸುಂಟರ ಕುಣಿತಕ್ಕೆ ಮರಗಳುರುಳಿ, ಕಟ್ಟಡಗಳು ಜರಿದು, ಭೂಕುಸಿತ ಉಂಟಾಗಿ, ಮಾಡಿನ ತಗಡುಗಳು ತರಗೆಲೆಗಳಾಗಿ ಹಾರಿ ಎಲ್ಲೆಲ್ಲೂ ವೇಗದ ಗಾಳಿ ಮತ್ತು
ಕಾರು – ಕಂಟೇನರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ನಡೆದಿದೆ. ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪದ ಇಂದು ಬೆಳಗಿನ ಜಾವ 6:30 ರಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಮೂರು ಪುರುಷರು, ಒಂದು ಮಗು ಸೇರಿ 6 ಮಂದಿ ಮೃತರಾಗಿದ್ದಾರೆ. ಒಂದೇ ಕುಟುಂಬದ ನಾರಾಯಣ ಸ್ವಾಮಿ, ಸುನಂದಾ, ರವಿಕುಮಾರ್, ನೇತ್ರ,ಚೇತನ್ (ಬಾಲಕ), ರಾಕೇಶ್ (ಡ್ರೈವರ್) ಮೃತರು. ಎಲ್ಲರೂ
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ.




























