ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ
ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 02-09-2025 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಿಸುಂತೆ ಜೊತೆಗೆ ಸಂಚಾರಕ್ಕೆ ಬದಲಿ ರಸ್ತೆ ಗುರುತಿಸುವಂತೆ ಮತ್ತು ಉಚ್ಚಿಲ ಹಾಗೂ ಪಡುಬಿದ್ರಿ
ವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ 18 ಮಂದಿ ಸಾಧಕರನ್ನು ಸಮಾಜ ಮಂದಿರ ಪುರಸ್ಕಾರದೊಂದಿಗೆ ಗೌರವಿಸಲಾಗುವುದೆಂದು ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ತಿಳಿಸಿದ್ದಾರೆ.ಐದು ದಿನಗಳ ಉತ್ಸವದ ಅವಧಿಯಲ್ಲಿ ಹಂತ ಹಂತವಾಗಿ ಸಾಧಕರನ್ನು ಗೌರವಿಸಲಾಗುವುದು. ಸಮಾಜ ಮಂದಿರ ಗೌರವ 2025 ಕ್ಕೆ ಆಯ್ಕೆಯಾಗಿದ್ದಾರೆ. ವೇ.ಮೂ ಎಂ. ಹರೀಶ್ ಭಟ್ (ಧಾರ್ಮಿಕ), ಆಡ್ಲಿನ್ ಜೆ. ಜತನ್ನ (ಶಿಕ್ಷಣ), ಗೌರಾ ಗೋವರ್ಧನ್ (ಶಿಕ್ಷಣ, ಸಾಹಿತ್ಯ), ಹರ್ಷವರ್ಧನ್ ಪಡಿವಾಳ್ (ಆಹಾರ ಉದ್ಯಮ)
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಅಧ್ಯಕ್ಷ ಯು ಸಂದೇಶ್ ಭಟ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಉಪ್ಪುಂದ – ಬಿಜೂರು ಗ್ರಾಮ ವ್ಯಾಪ್ತಿಯ ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿ.ಯು.ಸಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ದುರ್ಗಾಪರಮೇಶ್ವರಿ ದೇವಸ್ಥಾನ
ಸಮಾಜ ಮಂದಿರ ಸಭಾ (ರಿ) ವತಿಯಿಂದ ಜರಗಲಿರುವ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಈ ಬಾರಿ ಉದ್ಯಮಿ, ಧಾರ್ಮಿಕ ನೇತಾರ ನವಮಿ ಸಮೂಹ ಸಂಸ್ಥೆಗಳ ನಂದ ಕುಮಾರ್ ಆರ್. ಕುಡ್ವ ಅವರಿಗೆ ಸಮಾಜ ಮಂದಿರ ಪುರಸ್ಕಾರ 2025 ನೀಡಿ ಗೌರವಿಸಲಾಗುವುದು ಎಂದು ಸಮಾಜ ಮಂದಿರ ಸಭಾದ ಅಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ತಿಳಿಸಿದ್ಧಾರೆ. ಸೆ 22ರಿಂದ 26ರವರೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಪ್ರತೀ ದಿನ ಸಂಜೆ 7 ರಿಂದ ಸಾಹಿತ್ಯ […]
ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು, ಇಲ್ಲಿದ್ದ ವೃತ್ತವನ್ನು ಪೊದೆಗಳಲ್ಲಿ ಬಿಸಾಡಿರುವುದು ಖಂಡನೀಯ. ಇದು ದಾರ್ಶನಿಕ ಮಹಾನ್ ಪುರುಷರಿಗೆ ಮಾಡಿದ ಮಹಾ ಅಪಮಾನವಾಗಿದೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ವಿಶೇಷವಾಗಿ ಪ್ರಯತ್ನಿಸಿದ ಫಲವಾಗಿ ಬನ್ನಂಜೆ ವೃತ್ತಕ್ಕೆ
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ, ಅಭಿವೃದ್ಧಿ ಸಮಿತಿ ಮತ್ತು ಗುರು ಮಂದಿರ ನಿರ್ಮಾಣ ಸಮಿತಿ, ಎಸ್. ಕೋಡಿ, ತೋಕೂರು ಇದರ ಸಹಭಾಗಿತ್ವದಲ್ಲಿ ಸಪ್ಟೆಂಬರ್ 7,.2025 ರಂದು ನೆರವೇರಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆಯ ಪ್ರಯುಕ್ತ ಸ್ಥಳೀಯ ಮಕ್ಕಳಿಗೆ, ಆಶುಭಾಷಣ, ರಸಪ್ರಶ್ನೆ ಸಂಗೀತ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಬ್ರಹ್ಮಶ್ರೀ
ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆಗಳ ಸಂಬಂಧವಾಗಿ ಪಡುಬಿದ್ರಿಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರದಂದು ಅವಲೋಕನ ಸಭೆಯು ನಡೆಯಿತು. ಮುಂದಿನ ಮಳೆಗಾಲದೊಳಗೆ ಪಡುಬಿದ್ರಿಯ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಗಬೇಕಿದ್ದು, ಈ ಮಹತ್ಕಾರ್ಯಕ್ಕೆ ಗ್ರಾಮಸ್ಥರ ಸಹಭಾಗಿತ್ವ ಮತ್ತು ದೇಣಿಗೆಯೊಂದಿಗಿನ ಸಹಕಾರದಿಂದ ದೇವಾಲಯದ ಪುನರ್ ನಿರ್ಮಾಣ ಆಗಬೇಕಿದೆ’ ಸಕಲ ಅಡೆತಡೆಗಳ ಮೀರಿ
ಪದವಿ ಪೂರೈಸುವುದು ಅಥವಾ ಕಂಠಪಾಠ ಮಾಡಿ ರ‍್ಯಾಂಕ್, ಪದಕ ಪಡೆಯುವುದು ಶಿಕ್ಷಣ ಅಲ್ಲ. ಬದುಕಿನಲ್ಲಿ ಎದುರಾಗುವ ಸವಾಲು ಹಾಗೂ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್ ಹೇಳಿದರು.ಮಂಗಳೂರು ವಿವಿ ಘಟಕ ಕಾಲೇಜು ಬನ್ನಡ್ಕ ಇಲ್ಲಿ ಶನಿವಾರ ಪ್ರೇರಣಾ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಭವಿಷ್ಯದ ನೌಕಕರಾಗಬಾರದು.
ರಾಸ್ತಿಗಳ ಮೇಲಿನ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಶುಲ್ಕವನ್ನು ಶೇ 1ರಿಂದ ಶೇ 2ಕ್ಕೆ ಏರಿಸಿ ರಾಜ್ಯ ಸರ್ಕಾರವು ಆದೇಶಿಸಿದೆ. ಭಾನುವಾರದಿಂದಲೇ (ಆಗಸ್ಟ್ 31) ಇದು ಜಾರಿಯಾಗಲಿದ್ದು, ಸಾರ್ವಜನಿಕರು ಆಸ್ತಿ ನೋಂದಣಿಗೆ ಹೆಚ್ಚು ಶುಲ್ಕ ತೆರಬೇಕಾಗುತ್ತದೆ. ಈ ಮೊದಲು ಸ್ಥಿರಾಸ್ತಿ ನೋಂದಣಿ ವೇಳೆ ಆಸ್ತಿಯ ಮಾರ್ಗಸೂಚಿ ಮೌಲ್ಯದ ಶೇ 5ರಷ್ಟು ಮುದ್ರಾಂಕ ಶುಲ್ಕ, ಶೇ 0.5ರಷ್ಟು ಸೆಸ್, ಶೇ 0.1ರಷ್ಟು ಸರ್ಚಾರ್ಜ್ ಮತ್ತು ಶೇ1ರಷ್ಟು ನೋಂದಣಿ ಶುಲ್ಕ ವಿಧಿಸಲಾಗುತ್ತಿತ್ತು.




























