“ಜನತಾ ದರ್ಶನ” ಕಾರ್ಯಕ್ರಮವು ರಾಜ್ಯ ಸರ್ಕಾರದ ಬಹುಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ, ನಿಗಧಿತ ಕಾಲಾವಧಿಯೊಳಗೆ ಸೂಕ್ತ ಪರಿಹಾರವನ್ನು ಒದಗಿಸುವ ಉದ್ದೇಶವನ್ನು ಹೊಂದಿರುತ್ತದೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ. ಹಾಸನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜನತಾ
ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭ ನಿಯೋಗದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯಳ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ
ಹಾಸನ : ಬೆಂಗಳೂರು ನಗರದ ಸಂಚಾರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಮೊಹಮ್ಮದ್ ಸುಜೀತಾ ಎಂ.ಎಸ್, ಐಪಿಎಸ್ (ಕೆಎನ್-2014) ರವರನ್ನು ಹಾಸನ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.ಹರಿರಾಮ್ ಶಂಕರ್ ಐಪಿಎಸ್ ವರ್ಗಾವಣೆ ಮಾಡಿದೆ.ಈ ಹಿಂದೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.
ಮೈಸೂರು : ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ , ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜತೆಗಿದ್ದರು.
ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರ ಅಯ್ಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಗಲ್ಫ್ ಕನ್ನಡಿಗರ ಒಕ್ಕೂಟದ ಅಧ್ಯಕ್ಷ ಇಬ್ರಾಹಿಂ ಕಲೀಲ್ ಹೇಳಿದರು. ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿಯಾಗಿ ಮನವಿ ಸಲ್ಲಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು. ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಕೆಎನ್‍ಆರ್‍ಐಗೆ ಕಳೆದ ಕೆಲವು ವರ್ಷಗಳಿಂದ ಉಪಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆದಿರಲ್ಲಿಲ್ಲ. ಈ
ಹಾಸನ ಜಿಲ್ಲೆಯ ಸಕಲೇಶಪುರ ಹೆಬ್ಬನಹಳ್ಳಿ ಸಮೀಪ ಇರುವ ಎತ್ತಿನಹೊಳೆ ಯೋಜನೆಯ ಕಚೇರಿಗೆ ಇಂದು ಭೇಟಿ ನೀಡಿದ ಉಪ ಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದರು. ಸಭೆಯಲ್ಲಿ ಯೋಜನೆ ಪ್ರಾರಂಭಕ್ಕೆ ಇರುವ ತೊಂದರೆಗಳ ಕುರಿತಾಗಿ ಚರ್ಚಿಸಿದ ಸಚಿವರು, ವಿದ್ಯುತ್ ಇಲಾಖೆ ಮತ್ತು ಭೂ ಸ್ವಾದೀನ ಪಡಿಸಿಕೊಳ್ಳಲು ಕಂದಾಯ ಇಲಾಖೆಯಿಂದ ಇರುವ ತೊಂದರೆ ಕುರಿತಾಗಿ ಚರ್ಚಿಸಿ ಭೂಮಿ ಯೋಜನೆಗಾಗಿ ಭೂಮಿ
ಹಾಸನ ಜಿಲ್ಲೆ ಹೆಬ್ಬಾನಹಳ್ಳಿಯಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿಯ ವೀಕ್ಷಣೆಗೆಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆಗಮಿಸಿದ್ದರು. ಇದೇ ವೇಳೆ ಪೆÇಲೀಸರಿಂದ ಗೌರವ ಸಮರ್ಪಣೆ ಸ್ವೀಕರಿಸಿದರು. ನಂತರ ಯೋಜನೆ ಕುರಿತಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. ಸಕಲೇಶಪುರ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನೆಯನ್ನು ನಡೆಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಡಾನೆ ಹಾವಳಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಭೆಯಲ್ಲಿ
ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಅಡಿಯಲ್ಲಿ ಭಾರತದಾದ್ಯಂತ 508 ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಅಡಿಪಾಯ ಹಾಕಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಕಾರ್ಯಕ್ರಮ ನಡೆಸಿಕೊಟ್ಟರು. ಕರ್ನಾಟಕದ ಮಂಗಳೂರು, ಅರಸೀಕೆರೆ, ಹರಿಹರ ಸೇರಿ 15 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. “ಅಭಿವೃದ್ಧಿಯ ಗುರಿಯತ್ತ ಸಾಗುತ್ತಿರುವ ಭಾರತವು ತನ್ನ ಅಮೃತ ಕಾಲದ ಆರಂಭದಲ್ಲಿದೆ. ಹೊಸ ಶಕ್ತಿ,
ಮುಂಬಯಿ : ಕುಲಾಲ ಸಂಘ ಮುಂಬಯಿ, ನವಿಮುಂಬಯಿ ಸಮಿತಿಯ ಮಹಿಳಾ ವಿಭಾಗವು ”ಆಟಿದ ಅಟೀಲ್” ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಆಟಿ ಕೇವಲ ಆಚರಣೆಯಾಗಿರದೆ ಆಟಿ ನಮ್ಮ ಸಂಪ್ರದಾಯವಾಗಿದೆ ಎಂದು ಕುಲಾಲ ಸಂಘ ಮುಂಬಯಿ ಹ ಅಧ್ಯಕ್ಷರಾದ ರಘು ಎ. ಮೂಲ್ಯ ಪಾದೆಬೆಟ್ಟು ತಿಳಿಸಿದರು. ಕನ್ನಡ ಸಂಘ ಸಭಾಗೃಹ, ಶಿವ ವಿಷ್ಣು ಮಂದಿರ ಮಾರ್ಗ, ಜುಹು ನಗರ, ಸೆಕ್ಟರ್ 9ಎ, ವಾಶಿ, ನವಿ ಮುಂಬಯಿ ಇಲ್ಲಿ ಜರಗಿದ ಕುಲಾಲ ಸಂಘದ ನವಿಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಸತ್ ಭವನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ, ಅವರನ್ನು ಭೇಟಿಯಾದರು ಇದೇ ಸಂದರ್ಭದಲ್ಲಿ ರಕ್ಷಣಾ ಸಚಿವರಾದ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು. ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.




























