ಮಂಜೇಶ್ವರ: ಹೊಸಂಗಡಿ – ವರ್ಕಾಡಿ – ಆನೆಕಲ್ಲು ರಸ್ತೆಯ ವಿವಿಧ ಕಡೆ ರಸ್ತೆ ಬದಿ ಬೃಹತ್ ಮರಗಳು ಅಪಾಯಕಾರಿ ಸ್ಥಿತಿಯಲ್ಲಿ ಇದ್ದು, ಇನ್ನು ಕೆಲವು ಕೊಂಬೆಗಳು ಮುರಿದು ಬೀಳುವ ಹಂತದಲ್ಲಿವೆ. ಮಳೆಗಾಲ ಆರಂಭಗೊಂಡ ಬಳಿಕ ಈಗಾಗಲೇ ಹಲವಾರು ಅನಾಹುತಗಳು ಸಂಭವಿದೆ. ಇಲಾಖೆ ಈ ಬಗ್ಗೆ ಎಚ್ಚರ ವಹಿಸದಿದ್ದರೆ ಅನಾಹುತ ಸಂಭವಿಸುವ ಸಾಧ್ಯತೆಗಳಿವೆ. ಮಂಜೇಶ್ವರದ
ಬಂಟರ ಸಂಘ ಮುಂಬಯ ಇದರ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಮೀರಾರೋಡ್ ಪೂರ್ವದ ಠಾಕೂರ್ ಮಾಲ್ ಮತ್ತು ಪ್ರಸಾದ್ ಇಂಟರ್ ನ್ಯಾಶನಲ್ ಹೊಟೇಲ್ ಸಮೀಪದ, ಮಹಾಜನ್ ವಾಡಿಯಲ್ಲಿನ ಭಾರತ ರತ್ನ ಗಾನ ಸಾಮ್ರಾಜ್ಯ ದಿ. ಲತಾ ಮಂಗೇಶ್ಯ ನಾಟ್ಯ ಸಭಾಗೃಹದಲ್ಲಿ ಯಕ್ಷಗಾನ ವೇಷಧಾರಿ ಮಹಾಬಲೇಶ್ವರ ಭಟ್ ಕ್ಯಾದಗಿ, ವಿನೂತನ ಶೈಲಿ. ಪುಷ್ಪಕ ಯಾನ’ ಏಕವ್ಯಕ್ತಿ ನವರಸಾಭಿವ್ಯಕ್ತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನೀಡಿದ ಮಹಾಬಲೇಶ್ವರ ಭಟ್ ಕ್ಯಾದಗಿ ಅವರನ್ನು ಜಾಗತಿಕ
ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 5 ಕೆ.ಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 5.ಕೆ.ಜಿ ಅಕ್ಕಿಯನ್ನು ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದ್ದು, ಉಳಿದ ಹೆಚ್ಚುವರಿ 5 ಕೆ.ಜಿ ಅಕ್ಕಿಗೆ 170 ರೂ. ನೀಡಲು ತೀರ್ಮಾನ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ. ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ
ಕಾಸರಗೋಡು ಶಾಲೆಯಲ್ಲಿ ಕನ್ನಡಕ್ಕಾಗಿ ಹೋರಾಟ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನೆಮಾ ನೆನಪಿಸುವ ನೈಜ ದೃಶ್ಯ
ಕನ್ನಡ ಸರಿಯಾಗಿ ಬಾರದ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿರುವುದನ್ನು ವಿರೋಧಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಇತ್ತೀಚೆಗೆ ಈ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಿಗೆ ಬೇರೆ ಶಾಲೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕೇರಳ ಶಿಕ್ಷಣ ಇಲಾಖೆ ಆ ಜಾಗಕ್ಕೆ ಹೊಸ ಶಿಕ್ಷಕಿಯೋರ್ವರನ್ನು ನೇಮಿಸಿದೆ. ಆದರೆ ಈ ಶಿಕ್ಷಕಿಗೆ ಕನ್ನಡ ಸರಿಯಾಗಿ
ಬೆಂಗಳೂರು: ರಾಜ್ಯಾದ್ಯಾಂತ ಇರುವ ಇಂದಿರಾ ಕ್ಯಾಂಟೀನ್‍ಗಳಲ್ಲಿ ನಂದಿನಿ' ಉತ್ಪನ್ನಗಳನ್ನು ಮಾರಾಟ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ನಂದಿನಿ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಣೆ ಮಾಡಲು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ ಯೋಜನೆ ರೂಪಿಸಿದ್ದು ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್‍ಗಳಲ್ಲಿನಂದಿನಿ’ ಉತ್ಪನ್ನಗಳು ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್
ರಾಜ್ಯದ ಎಲ್ಲ ಮುಜರಾಯಿ ಇಲಾಖೆಗೊಳಪಡುವ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಯಾವುದೇ ಸರತಿ ಸಾಲಿನಲ್ಲಿ ನಿಲ್ಲಿಸದೇ ನೇರವಾಗಿ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ಅಡ್ಡಿಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿಯುವ ಮೂಲಕ ಮಂಗಳವಾರ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಲಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಡವರ ಅನ್ನಕ್ಕೆ ಕಲ್ಲು ಹಾಕುವವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ದೇಶದಲ್ಲೇ ಬಡವರಿಗೆ ಪ್ರಥಮವಾಗಿ ಉಚಿತವಾಗಿ ಅಕ್ಕಿ ನೀಡಿದ ಕೀರ್ತಿ ಸಿದ್ದರಾಮಯ್ಯ ನೇತೃತ್ವದ
ಮಂಜೇಶ್ವರ ಗ್ರಾಮ ಪಂಚಾಯತ್‍ನ ಎರಡನೇ ವಾರ್ಡು ವ್ಯಾಪ್ತಿಯಲ್ಲಿರುವ ತೂಮಿನಾಡು ಮಹಾಕಾಳಿ ರಸ್ತೆ, ಕಳಪೆ ಕಾಮಗಾರಿಯಿಂದ ತಿಂಗಳು ಕಳೆಯುವ ಮುನ್ನವೇ ಕಿತ್ತು ಹೋಗಿದೆ. ಕಳಪೆ ಮತ್ತು ಅರೆಬರೆ ಕಾಮಗಾರಿ ನಡೆಸಿದ ಗುತ್ತಿಗೆದಾರನ ವಿರುದ್ಧ ವ್ಯಾಪಕ ಆಕ್ರೋಶವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಮಂಜೇಶ್ವರ ಗ್ರಾಮ ಪಂಚಾಯತ್ ಫಂಡ್‍ನಿಂದ 3 ಲಕ್ಷ ರೂ. ಖರ್ಚಿನಲ್ಲಿ ನಿರ್ಮಾಣಗೊಂಡ 120 ಮೀಟರ್ ಅಂತರದ ರಸ್ತೆ ಇದೀಗ ತಿಂಗಳಾಗುವ ಮೊದಲೇ ಕಿತ್ತು ಹೋಗಿದೆ.
ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆ ಹಾಲೇಬೇಲೂರು ಅಂಡರ್ ಪಾಸ್ ಸಮೀಪ ಮಳಲಿಗ್ರಾಮ ಪಂಚಾಯತಿಯ ಕೊಲ್ಲಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಗೌರಿಕೆರೆಯನ್ನು ಅಕ್ರಮವಾಗಿ ಮುಚ್ಚಲು ಪ್ರಯತ್ನಿಸುತ್ತಿರುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಳಲಿಗ್ರಾಮ ಪಂಚಾಯತಿಯ ಕೊಲ್ಲಹಳ್ಳಿ ಗ್ರಾಮದಲ್ಲಿರುವ ಸರ್ವೆ ನಂ 64ರಲ್ಲಿ ಸುಮಾರು 1ಎಕರೆ 33ಗುಂಟೆ ಸರಕಾರಿ




























