Home Archive by category ರಾಜ್ಯ (Page 41)

ತೇರದಾಳ ಶಾಸಕ ಸಿದ್ದು ಸವದಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ : ಸಂಗಮೇಶ್ ನಿರಾಣಿಗೆ ಟಿಕೆಟ್ ನೀಡಲು ಆಗ್ರಹ

ತೇರದಾಳ (ಬಾಗಲಕೋಟೆ ಜಿಲ್ಲೆ) : ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಅವರಿಗೆ ಮತ್ತೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಪಕ್ಷದ ಕಾರ್ಯಕರ್ತರೇ ಹೋರಾಟಕ್ಕೆ ಇಳಿದಿದ್ದಾರೆ. ಸಿದ್ದು ಸವದಿ ಕ್ಷೇತ್ರದ ಅಭಿವೃದ್ಧಿಗೆ ಏನೂ ಮಾಡಿಲ್ಲ. ಜನರು ಅವರನ್ನು ತಿರಸ್ಕರಿಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಮತ್ತೆ ಅಭ್ಯರ್ಥಿಯಾಗಿ ಅವರನ್ನು

ಸುಳ್ಯ : ಹಿರಿಯ ಕಾರ್ಯಕರ್ತರ ಭೇಟಿ ಮಾಡಿದ ಜಿ.ಕೃಷ್ಣಪ್ಪ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಕ್ಷೇತ್ರದಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾರೆ.ಕೃಷ್ಣಪ್ಪ ಅವರು ಸುಳ್ಯದ ವಿವಿಧ ಬೂತ್ , ಬ್ಲಾಕ್ ಗಳ ಹಿರಿಯ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದರು.ಕುಟ್ರಾಪ್ಪಾಡಿಯಲ್ಲಿ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಸುಬ್ರಾಯ ಹೆಬ್ಬಾರ್ ಅವರನ್ನು ಭೇಟಿ ಮಾಡಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆನಂದ ಪೂಜಾರಿ

ಪೀಲಿತಡ್ಕ ಶ್ರೀ ಗುಳಿಗ ಮತ್ತು ಶ್ರೀ ಕೊರಗ ತನಿಯ ದೈವ ಸನ್ನಿಧಿ : ತುಳು ಲಿಪಿ ನಾಮಫಲಕ ಅನಾವರಣ

ಕಾಸರಗೋಡಿನ ಬದಿಯಡ್ಕದ ವಿದ್ಯಾಗಿರಿಯ ಪೀಲಿತಡ್ಕ ಶ್ರೀ ಗುಳಿಗ ಮತ್ತು ಶ್ರೀ ಕೊರಗ ತನಿಯ ದೈವ ಸನ್ನಿಧಿಯಲ್ಲಿ ತುಳು ಲಿಪಿ ನಾಮಫಲಕವನ್ನು ಅಳವಡಿಸಲಾಯಿತು. ಕಾರ್ಯಕ್ರಮದಲ್ಲಿ ಬದಿಯಡ್ಕದ ಗ್ರಾಮ ಪಂಚಾಯತ್ ಮೆಂಬರ್ ಶ್ರೀ ಬಾಲಕೃಷ್ಣ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಿದ್ದರು, ಇವರು ತಮ್ಮ ಭಾಷಣದಲ್ಲಿ ತುಳು ಬಾಷೆಯು ಶೀಘ್ರದಲ್ಲಿ 8ನೇ ಪರಿಚ್ಚೆದಕ್ಕೆ ಸೇರುವಂತಾಗಲಿ ಎಂದರು. ಸ್ಥಳದ ಹಿರಿಯ ದೈವ ಪಾತ್ರಿ ಶ್ರೀ ನಿಟ್ಟೋನಿ ಇವರು ತುಳು ಲಿಪಿ ನಾಮಫಲಕವನ್ನು ಉದ್ಘಾಟಿಸಿದರು.

ಮೇ. 29ರಿಂದ ಪ್ರಾಥಮಿಕ ಹಾಗೂ ಪ್ರೌಡಶಾಲೆಗಳು ಪ್ರಾರಂಭ

ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2023-24ರ ಶೈಕ್ಷಣಿಕ ವರ್ಷ ಮೇ. 29ರಿಂದ ಪ್ರಾರಂಭಗೊಳ್ಳಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಸುತ್ತೋಲೆಯನ್ನು ಹೊರಡಿಸಿದೆ. ಮೊದಲ ಅವಧಿ ಮೇ 29ರಿಂದ ಅಕ್ಟೋಬರ್ 7ರ ತನಕ ಇರಲಿದ್ದು, ಅಕ್ಟೋಬರ್ 8ರಿಂದ ಅಕ್ಟೋಬರ್ 24ರ ತನಕ ದಸರಾ ರಜೆ ಇರಲಿದೆ.ಇನ್ನು ಎರಡನೇ ಅವಧಿ ಅಕ್ಟೋಬರ್ 25ರಿಂದ 2024ರ ಎಪ್ರಿಲ್ 10ರ ವರೆಗೆ ಇರಲಿದೆ. ಎ.11ರಿಂದ ಬೇಸಗೆ ರಜೆ ಪ್ರಾರಂಭಗೊಳ್ಳಲಿದ್ದು ಮೇ 28ರ ವರೆಗೆ ರಜೆ

ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 13ರಂದು ಫಲಿತಾಂಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಒಂದೇ ಹಂತದ ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು. ದೆಹಲಿಯ ವಿಜ್ಞಾನ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದರು. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 10

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಪ್ರಕಟಿಸಿದೆ.ಪ್ರಮುಖವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಅವರಿಗೆ ಟಿಕೆಟ್ ನೀಡಲಾಗಿದೆ. ಕನಕಪುರ ಕ್ಷೇತ್ರದಿಂದ ಡಿಕೆಶಿ ಅವರು ಸ್ಪರ್ಧಿಸಲಿ. ಮೊದಲ ಹಂತದ

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ : ಜೈನ ಸಂಪ್ರದಾಯದಂತೆ ನಡೆದ ಅಂತ್ಯಕ್ರಿಯೆ

ಜೈನ ಸಂಪ್ರದಾಯದಂತೆ, ಸೂರ್ಯಾಸ್ತಕ್ಕೂ ಮುನ್ನವೇ ಗುರುವಾರ ಸಂಜೆ 6.05ಕ್ಕೆ ಬೆಟ್ಟದ ತಪ್ಪಲಿನಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಿತು. ಮೂರು ಕುಶಾಲು ತೋಪುಗಳನ್ನು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವವನ್ನು ಸಲ್ಲಿಸಲಾಯಿತು. ಸಂಜೆಯ ವೇಳೆಗೆ ಚಾವುಂಡರಾಯ ಮಂಟಪದಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ನಂತರ ನಮೋಕಾರ ಮಹಾಮಂತ್ರ, ಮಹಾಶಾಂತಿಧಾರ ಪಠಣ, ವಿವಿಧ ಮಂಗಲವಾದ್ಯಗಳೊಂದಿಗೆ ಪ್ರಮುಖ ರಸ್ತೆಗಳಲ್ಲಿ ಪಾರ್ಥಿವ ಶರೀರದ

ವಿಶಾಲಾಕ್ಷಿ ಶಿವಾನಂದ್ ಪಾಟೀಲ್‍ಗೆ ಟಿಕೆಟ್ ಘೋಷಣೆ ವಿಚಾರ : ಸಿಂಧಗಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಅಸಮಾಧಾನ

ಸಿಂದಗಿಯಲ್ಲಿ ದಿವಂಗತ ಶಿವಾನಂದ್ ಪಾಟೀಲ್ ಸೋಮಜಾಳ ಶ್ರದ್ದಂಜಲಿ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯೆಂದು ವಿಶಾಲಾಕ್ಷಿ ಶಿವಾನಂದ್ ಪಾಟೀಲ್ ಎಂದು ಘೋಷಣೆ ಮಾಡಿದ್ದು ಕೆಲವು ಜೆಡಿಎಸ್ ಕಾರ್ಯಕರ್ತರ ಅಸಮಾಧಾನ ಉಂಟಾಗಿದೆ ಎಂದು ಸಿದ್ದನಗೌಡ ಪಾಟೀಲ್ ಹೇಳಿದರು. ಅವರು ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿಯಲ್ಲಿ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವಿಶಾಲಾಕ್ಷಿ ಶಿವಾನಂದ್ ಪಾಟೀಲ ಇವರು ಹಳೆ ಕಾರ್ಯಕರ್ತರನ್ನು

ದೇಶದಲ್ಲಿ ಅತಿ ದೊಡ್ಡ ಕೃತಕ ಅಂಗಾಂಗ ಜೋಡಣಾ ಶಿಬಿರ

ಬೆಂಗಳೂರು, ; ದೇಶಾದ್ಯಂತ ದಿವ್ಯಾಂಗರು, ವಿಶೇಷ ಚೇತನರು, ಅವಕಾಶ ವಂಚಿತರ ಶ್ರೇಯೋಭಿವೃದ್ಧಿಗಾಗಿ ಭಾರತದಾದ್ಯಂತ 38 ವರ್ಷಗಳಿಂದ ನಿರಂತರವಾಗಿ ಉದಾತ್ತ ಸೇವೆ ಸಲ್ಲಿಸುತ್ತಿರುವ ನಾರಾಯಣ್ ಸೇವಾ ಸಂಸ್ಥಾನ್ ಬೆಂಗಳೂರಿನಲ್ಲಿ ಮಾ. 19 ರಂದು ದೇಶದಲ್ಲಿಯೇ ಅತಿ ದೊಡ್ಡ ಉಚಿತ ಕೃತಕ ಅಂಗಾಂಗ ಜೋಡಣಾ ಶಿಬಿರ ಆಯೋಜಿಸಿದೆ. ಒಂದೇ ದಿನ 593 ಮಂದಿಗೆ ಕೃತಕ ಅಂಗಾಂಗ, ಕ್ಯಾಲಿಪರ್ ಗಳನ್ನು ಜೋಡಿಸಿ ದಿವ್ಯಾಂಗರ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿಸಲಾಗುತ್ತಿದೆ ಎಂದು ನಾರಾಯಣ್ ಸೇವಾ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೈಸೂರಿನ ಮನೆಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. 1983 ರಲ್ಲಿ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದ ಅವರು, ಸಂತೇಮರಹಳ್ಳಿ ಕ್ಷೇತ್ರದಿಂದ ಒಂದು ಶಾಸಕರಾಗಿ ಆಯ್ಕೆಯಾಗಿ, ಎರಡನೇ ಬಾರಿ ಕೊಳ್ಳೇಗಾಲ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಚಾಮರಾಜನಗರ ಕ್ಷೇತ್ರದಿಂದ