ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಹಾಡಹಗಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಉಣಕಲ್ಲ ಕೆರೆ ಬಳಿಯ ಖಾಸಗಿ ಹೋಟೆಲ್ ನ ಸ್ವಾಗತಕಾರರ ಕೌಂಟರ್ ಬಳಿ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಗುರೂಜಿ ಮೇಲೆ ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ಇರಿದು
ಬೆಂಗಳೂರು, ಜು, 5; ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನಿಂದ ಭಾರತದ ಅತಿ ಎತ್ತರದ “ಭೀಮಾ” ರೋಬೋಟ್ ಅನ್ನು ಅನಾವರಣಗೊಳಿಸಲಾಗಿದೆ. ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನ ಸಂಸ್ಥಾಪಕ ಹರ್ಷ ಕಿಕ್ಕೇರಿ ಅವರು ದೇಶೀಯ ರೊಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. “ಭೀಮಾ” 7.7 ಅಡಿ ಎತ್ತರದ ರೋಬೋಟ್ ಆಗಿದ್ದು, ಇದರ ದೇಹಕ್ಕೆ ಎಲ್.ಇ.ಡಿ ತಂತ್ರಜ್ಞಾನದ ಸ್ಪರ್ಷ ನೀಡಲಾಗಿದೆ. ಈ ರೋಬೋಟ್ ಬಹುಪಯೋಗಿಯಾಗಿದ್ದು, ವಿಶೇಷವಾಗಿ ಸ್ವಾಗತಕಾರನ
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬಂದಿರುವ ಸಾವಿರಾರು ಕೋಟಿ ರೂ.ಹಣವನ್ನು ಕೇವಲ ರಸ್ತೆ ಅಭಿವ್ರದ್ದಿಗೆ ವಿನಿಯೋಗಿಸಿದರೂ ರಸ್ತೆಗಳಿಗೆ ಮಾತ್ರ ಮುಕ್ತಿ ಸಿಕ್ಕಿಲ್ಲ. ಬಲ್ಮಠದ ಜಿಲ್ಲಾಧಿಕಾರಿಗಳ ನಿವಾಸದ ಪಕ್ಕದಲ್ಲೇ ಎಸ್.ಸಿ.ಎಸ್ ಆಸ್ಪತ್ರೆಯ ಕಡೆಗೆ ಹಾದು ಹೋಗುವ ಮುಖ್ಯ ರಸ್ತೆಯು ಕಳೆದ ಹಲವಾರು ತಿಂಗಳಿನಿಂದ ಶೋಚನೀಯ ಪರಿಸ್ಥಿತಿಯಲ್ಲಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಾಲಿಕೆ ಅಧಿಕಾರಿಗಳು ದಿವ್ಯ ಮೌನ ವಹಿಸಿರುವುದು ಶೋಚನೀಯವಾಗಿದೆ. ಮಳೆ ನೀರು ಹೋಗಲು
ಕಾಪು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳೂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಬಂಡಾಯದ ಬಿಸಿ ಬಿಜೆಪಿಯನ್ನು ಸುಡಲಿದೆಯೇ ಎಂಬ ಆತಂಕ ಬಿಜೆಪಿ ಪಾಳಾಯದಲ್ಲಿ ಮೂಡಿದೆ.ನಾಮಪತ್ರ ಸಲ್ಲಿಕೆಗೆ ಡಿ.15 ಅಂತಿಮ ದಿನವಾಗಿದ್ದು, ಇದೀಗ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆಗೊಳಿಸುತ್ತಿರುವಂತೆ, ಟಿಕೇಟ್ ವಂಚಿತರು ಕೆಂಡಾಮಂಡಲವಾಗಿದ್ದಾರೆ. ಪಕ್ಷಕ್ಕಾಗಿ ದುಡಿದ ನಮಗೆ ನಮ್ಮದೇ ಪಕ್ಷದ ನಾಯಕರಿಂದ ಅನ್ಯಾಯವಾಗಿದೆ ಎಂಬ ಮಾತುಗಳು ಅತೃಪ್ತರ
ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಮೊದಲ ಸ್ಥಾನವನ್ನು ಪಡೆದಿದ್ದಾರೆ. ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಮತದಾರರಿಗೆ ಹಾಗೂ ಖರ್ಚಿಗೆ ಒಂದೇ ಒಂದು ರೂಪಾಯಿ ಖರ್ಚು ಮಾಡಿದೇ ಗೆದ್ದಂತಹ ಅಭ್ಯರ್ಥಿ ಅಂದರೆ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಎಂದು ಹೇಳಲು ಸಂತೋಷಪಡುತ್ತೇನೆ. ಇದು ನೈಜ ಮತದಾರರ ಗೆಲುವು ಅಂತ ನನಗೆ ಅನಿಸುತ್ತೆ. ಮತ್ತು ಇದು ಬಿಜೆಪಿ ಪಕ್ಷದ ಪ್ರತಿ
ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಕೊಟ್ಟ ಕಾಂಗ್ರೆಸ್ಸಿಗೆ ನಮಿಸುತ್ತೇನೆ. ನನಗೆ ಬೆಂಬಲ ಕೊಟ್ಟು ಹಾಗೂ ಮತದಾನ ಮಾಡಿದ ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ಸಿನ ವಿಧಾನಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು. ಈ ಗೆಲುವು ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದು ಸಂತೋಷ ವ್ಯಕ್ತಪಡಿಸಿದರು. ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಈ ಮಟ್ಟಕ್ಕೆ ಗುರುತಿಸಿ ಬೆಳೆಸಿದ ಕಾಂಗ್ರೆಸ್
ಮಡಿಕೇರಿ: 20 ಕ್ಷೇತ್ರಗಳ 25 ಸ್ಥಾನಗಳಿಗೆ ಡಿ.10ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ. ಪ್ರತಸ್ಪರ್ಧಿ ಮಂಥರ್ ಗೌಡ ಅವರ ವಿರುದ್ಧ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.
ಬೇಲೂರಿನಲ್ಲಿ ಪಟ್ಟಣದ ಪುರಸಭೆ ವ್ಯಾಪ್ತೀಯ 8ನೇ ವಾರ್ಡ್ ಬಿಕ್ಕೋಡು ರಸ್ತೆಯ ಮಹಿಳಾ ಕಾಲೇಜ್ ಪಕ್ಕದಲ್ಲಿ ಅನಧಿಕೃತವಾಗಿ ಒಂದು ಕಟ್ಟಡ ನಿರ್ಮಾಣ ಮಾಡಿಕೊಂಡು ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂತರ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆ ಕಾರ್ಯಕರ್ತರು ಬಂದ ಸಂದರ್ಭದಲ್ಲಿ ಪ್ರಾರ್ಥನೆ ನಡೆಯುತ್ತಿದ್ದರಿಂದ ಪ್ರಾರ್ಥನ ಮುಂಭಾಗದ ಗೇಟ್ ಗೆ ಬೀಗ ಹಾಕಿದ ಕಾರಣ ಹೊರಭಾಗದಲ್ಲಿ ನಿಂತು ಮತಾಂತರ ಗೊಳ್ಳಲು ಪ್ರೇರಣೆಯಾಗಿದ್ದ
ನಾಗಮಂಗಲ, ನ 25; ಡಿಸೆಂಬರ್ 10 ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ದಿನೇಶ್ ಗೂಳಿ ಗೌಡ ಪರ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಚಾರದ ಅಖಾಡಕ್ಕೆ ಇಳಿದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾಜಿ ಸಚಿವರಾದ ಚಲುವರಾಯ ಸ್ವಾಮಿ, ನರೇಂದ್ರ ಸ್ವಾಮಿ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಸಭೆಯಲ್ಲಿ ಮಾತನಾಡಿ,
ಮೋದಿ ಸರ್ಕಾರ ಬೇಕಿದ್ದರೆ ಕಂಗನಾ ಅವರನ್ನು ಆಜಾದಿ ಕಾ ಅಮೃತ್ ಮಹೋತ್ಸವ್ ರಾಯಭಾರಿಯಾಗಿ ನೇಮಿಸಿಕೊಳ್ಳಲಿ – ಎಂ.ಎಸ್. ರಕ್ಷಾ ರಾಮಯ್ಯ ಬೆಂಗಳೂರು, ನ, 23; ಸ್ವಾತಂತ್ರ್ಯ ಸಂಗ್ರಾಮದ ವೀರ ಸೇನಾನಿಗಳ ವಿರುದ್ಧ ಕ್ರೂರ ಮತ್ತು ಮಾನಹಾನಿಯಾಗುವ ರೀತಿಯಲ್ಲಿ ಮಾತನಾಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಮಹತ್ಮಾ ಗಾಂಧೀಜಿ – ಪಂಡಿತ್ ಜವಾಹರ್ ಲಾಲ್ ನೆಹರು ವಿರುದ್ಧ ಅವಹೇಳನಕಾರಿಯಾಗಿ ಟೀಕೆ ಮಾಡಿರುವ ಪತ್ರಕರ್ತ ಅಜಿತ್ ಬಾರ್ತಿ ವಿರುದ್ಧ ದೇಶ ದ್ರೋಹ ಪ್ರಕರಣದಡಿ