Home Archive by category ರಾಜ್ಯ (Page 60)

ನಟ ಪುನೀತ್ ರಾಜ್‍ಕುಮಾರ್ ಇನ್ನಿಲ್ಲ || Puneeth Rajkumar

ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್(46) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ರಾಜ್ ಕುಮಾರ್ ಅವರು ವಿಧಿವಶರಾಗಿದ್ದಾರೆ.ಶುಕ್ರವಾರ ಅ.29ರಂದು ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್‍ಗೆ ದಾಖಲಿಸಿ ಪ್ರಥಮ ಚಿಕಿತ್ಸೆ

ನಟ ಪುನೀತ್ ರಾಜ್‌ಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಾಗಿದೆ.ಆರೋಗ್ಯದಲ್ಲಿ ಏರುಪೇರಾದ ಕಾರಣ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಪುನೀತ್ ರಾಜ್ ಕುಮರ್ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪುನೀರ್ ರಾಜ್ ಕುಮಾರ್ ಅವರಿಗೆ ಇಸಿಜಿ

ಹಾನಗಲ್ ಉಪ ಚುನಾವಣೆ : ಬಿಜೆಪಿ ಪರವಾಗಿ ಎಂ.ಅಪ್ಪಣ್ಣ ಬಿರುಸಿನ ಪ್ರಚಾರ

ಹಾನಗಲ್ ಉಪಚುನಾವಣೆ ಅಂಗವಾಗಿ ಅರಳೇಶ್ವರದಲ್ಲಿ ಮಾಜಿ ಸಚಿವರಾದ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅರಣ್ಯವಸತಿ ಹಾಗೂ ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷರು ಹಾಗೂ ಶ್ರೀ ವಾಲ್ಮೀಕಿ ಗುರುಪೀಠದ ಧರ್ಮದರ್ಶಿಗಳಾದ ಶ್ರೀ ಎಂ.ಅಪ್ಪಣ್ಣನವರು ಬಿರುಸಿನ ಪ್ರಚಾರ ನಡೆಸಿದರು. ಈ ಹಿಂದೆ ಬಿ‌.ಎಸ್.ಯಡಿಯೂರಪ್ಪನವರು ಹಿಂದುಳಿದ ಸಮಾಜಡಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು ಅದೇ ಹಾದಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ವಿಶೇಷ

ಹಾನಗಲ್ ಕ್ಷೇತ್ರದಲ್ಲಿ ಮಾಜಿ‌ ಸಚಿವ ರಮೇಶ್ ಜಾರಕಿಹೋಳಿ‌ ಬಿರುಸಿನ ಪ್ರಚಾರ

ಉಪ ಚುನಾವಣಾ ನಡೆಯುತ್ತಿರುವ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ‌ಅಭ್ಯರ್ಥಿ ಪರವಾಗಿ ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರು ಸೋಮವಾರದಿಂದ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ. ಕ್ಷೇತ್ರದ ಎಲ್ಲಾ ಬ್ಲಾಕ್ , ವಾರ್ಡ್ ಗಳಿಗೂ ಪಾದಯಾತ್ರೆ ಮೂಲಕ ತೆರಲಿ ರಮೇಶ್ ಜಾರಕಿಹೋಳಿ ಮತ ಯಾಚನೆ‌ ನಡೆಸುತ್ತಿದ್ದಾರೆ.ಕ್ಷೇತ್ರದಾದ್ಯಂತ ಮತದಾರರನ್ನು ಭೇಟಿಯಾಗುತ್ತಿರುವ ರಮೇಶ್ ಜಾರಕಿಹೋಳಿ ಅವರು ಕ್ಷೇತ್ರದಲ್ಲಿ ಸಂಚಲನ ಮೂಡಿಸಿದ್ದಾರೆ. ಉಪ ಚುನಾವಣೆಯಲ್ಲಿ ಕೊನೆಯ ಹಂತದ ಪ್ರಚಾರ

ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟ : ಕರ್ನಾಟಕ ತಂಡ ಆಯ್ಕೆ

ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಭರತೇಶ್ ಗೌಡ ಮೈರೋಳ್ತಡ್ಕ ಅವರು ಆಯ್ಕೆಯಾಗಿದ್ದಾರೆ. ಅ. 29 ರಿಂದ 31ರ ವರೆಗೆ ಹರಿಯಾಣ ವಿಶ್ವವಿದ್ಯಾಲಯ ದಲ್ಲಿ ಪಂದ್ಯಾಕೂಟ ನಡೆಯಲಿದೆ. ಪ್ರಸ್ತುತ ಇವರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಪದವಿ ವಿದ್ಯಾರ್ಥಿ, ಬೆಳ್ತಂಗಡಿ ವಾಣಿಜ್ಯ ಪಿಯು ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ ಪಿ.ಯು ವಿದ್ಯಾಭ್ಯಾಸದ ಸಂದರ್ಭದಲ್ಲೂ ರಾಷ್ಟಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿ ಉತ್ತಮ ಪ್ರದರ್ಶನದೊಂದಿಗೆ ಎಲ್ಲರ

ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಿಎಂ ಗೆ ಮನವಿ

ಮಂಗಳೂರು: ಕೋರೋನಾ ಸೋಂಕಿನಿಂದ ಮೃತಪಟ್ಟ ಯಶವಂತ ಐಕಳ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು.‌ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಪ್ರೆಸ್

ಮನು ಬಳಿಗಾರರ ಬೆಂಬಲ ಕೋರಿದ ಮಾಲಿಪಾಟೀಲ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ನಾಡೋಜ ಮನು ಬಳಿಗಾರ ಅವರನ್ನು ಭೇಟಿ ಮಾಡಿದ ರಾಜ್ಯ ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಶೇಖರಗೌಡ ಮಾಲಿಪಾಟೀಲ ಅವರು ತಮ್ಮನ್ನು ಬೆಂಬಲಿಸಬೇಕೆಂದು ಮನವಿ ಮಾಡಿಕೊಂಡರು. ಭಾನುವಾರ ಗದಗ ಜಿಲ್ಲೆಯ ಬಳಿಗಾರರ ಹುಟ್ಟೂರು ಶಿಗ್ಲಿಯ ಮನೆಯಲ್ಲಿ ಭೇಟಿ ಮಾಡಿದ ಶೇಖರಗೌಡರು, ಚುನಾವಣೆ ಪ್ರಕ್ರಿಯೆ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಗದಗ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಶರಣು ಗೋಗೇರಿ, ಕೊಪ್ಪಳ

ಸಮಗ್ರ ಚಿಕಿತ್ಸೆ ಇಂದಿನ ಅಗತ್ಯ:ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಎಂಟ್ರಾಲಜಿ ವಿಜ್ಞಾನ ಮತ್ತು ಅಂಗಾಂಗ ಕಸಿ ವಿಭಾಗವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟಿಸಿದರು. ಬಳಿಕ ಮನ್ಸುಖ್ ಮಾಂಡವಿಯಾ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಯಕೃತ್ ಸೇರಿದಂತೆ ವಿವಿಧ ಅಂಗಾಂಗಗಳ ಕಸಿಯನ್ನು ಉಚಿತವಾಗಿ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಚಿಕಿತ್ಸೆ ಎಂದರೆ ಕೇವಲ ದೈಹಿಕ ಸಮಸ್ಯೆಗಳಿಗೆ

ಕನ್ನಡ ಸಿನಿಮಾ ನಟ ಸತ್ಯಜಿತ್ ನಿಧನ

ಹಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಸತ್ಯಜಿತ್ ಅವರು ತಡರಾತ್ರಿ ಎರಡು ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ. ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸತ್ಯಜಿತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದ ಸತ್ಯಜಿತ್ ಆ ಮೂಲಕ ಚಿತ್ರರಂಗದಲ್ಲಿ ಹೆಸರು ಮಾಡಿದ್ದರು. ಚಂದನವನದ ಹಲವಾರು ಸ್ಟಾರ್​ ಕಲಾವಿದರ ಸಿನಿಮಾಗಳಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತ್ತು. ಸತ್ಯಜಿತ್

ಖಾನ್‍ಗಳು ದೇಶ ಬಿಟ್ಟು ನೇರವಾಗಿ ಅಪಘಾನಿಸ್ಥಾನಕ್ಕೆ ಹೋಗಲಿ : ಬಸನಗೌಡ ಪಾಟೀಲ ಯತ್ನಾಳ್

ಬಾಲಿವುಡ್ ಖಾನ್‍ಗಳ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಹೇಳಿಕೆ ನೀಡಿರುವ ಯತ್ನಾಳ ಶಾರುಖಾನ್ ಪುತ್ರ ಡ್ರಗ್ಸ್ ಕೇಸ್ ಲ್ಲಿ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿ ದೇಶ ಸುರಕ್ಷಿತ ಅಲ್ಲ ಎಂದ ಖಾನ್ ಗಳು ದೇಶ ಬಿಡಲಿ ಎಂದರು. ಆ ಮಕ್ಕಳೆಲ್ಲ ನೇರವಾಗಿ ಅಪಘಾನಿಸ್ತಾನಕ್ಕೆ ಹೋಗಲಿ, ಅಲ್ಲಿಯೇ ಸುರಕ್ಷಿತವಾಗಿ ತಾಲಿಬಾನ್ ಕೆಳಗೆ ನಟನೆ ಮಾಡಿಕೊಂಡಲು ಇರಲಿ ಎಂದು ವ್ಯಂಗವಾಡಿದ್ದಾರೆ.