ಬೆಂಗಳೂರು: ಮುಂದಿನ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ಉದ್ಘಾಟನೆಗೆ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಯಿತು. ವಿಧಾನಸೌಧದಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ನೇತೃತ್ವ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ
‘ಡಿಜಿಟಲ್ ರೆವಲ್ಯೂಶನ್ ಆನ್ ಬ್ಯುಸಿನೆಸ್ ಆಂಡ್ ಎಂಟ್ರಪನರ್’ಶಿಪ್’ ಎಂಬ ವಿಷಯದಲ್ಲಿ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಯುಎಇ ವತಿಯಿಂದ ಸೆಪ್ಟೆಂಬರ್ 10ರಂದು ಯಶಸ್ವಿ ವೆಬಿನಾರ್ ನಡೆಯಿತು. ಬಿಸಿಸಿಐ ಯುಎಇ ಚಾಪ್ಟರ್ ಅಧ್ಯಕ್ಷ ಎಸ್.ಎಂ ಬಶೀರ್ ತಮ್ಮ ಸ್ವಾಗತ ಮತ್ತು ಪ್ರಾಸ್ತಾವಿಕ ಭಾಷಣದಲ್ಲಿ ಬಿಸಿಸಿಐನ ಧ್ಯೇಯೋದ್ದೇಶಗಳನ್ನು ಸರಳವಾಗಿ ವಿವರಿಸಿ, ಯುಎಇ ಚಾಪ್ಟರ್ ನ ತಂಡವನ್ನು ಪರಿಚಯಿಸಿದರು.. ಉಪಾಧ್ಯಕ್ಷರಾದ
ಉಡುಪಿ: ಅನಾರೋಗ್ಯಕ್ಕೆ ತುತ್ತಾಗಿ ಸೋಮವಾರ ಮಂಗಳೂರಿನ ಎನಾಪೋಯ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥೀವ ಶರೀರ ಇಂದು ಬೆಳಗ್ಗೆ 9:15 ಕ್ಕೆ ಉಡುಪಿ ಶೋಕ ಮಾತಾ ದೇವಾಲಯಕ್ಕೆ ಆಗಮಿಸಲಿದೆ ಎಂದು ಉಡುಪಿ ಧರ್ಮ ಪ್ರಾಂತ್ಯದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಕುಟುಂಬದ ಇಚ್ಛೆಯಂತೆ ಬೆಳಿಗ್ಗೆ 9:30 ಕ್ಕೆ ಪ್ರಾರ್ಥನಾ ವಿಧಿಗಳನ್ನು
ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. “ರಾಜ್ಯಸಭಾ ಸಂಸದ ಆಸ್ಕರ್ ಫೆರ್ನಾಂಡೀಸ್ ರ ನಿಧನದಿಂದ ದುಃಖವಾಗಿದೆ. ಈ ನೋವಿನ ವೇಳೆಯಲ್ಲಿ ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಪ್ರಾರ್ಥನೆ ಮತ್ತು ಸಂತಾಪಗಳನ್ನು
ಭೋಪಾಲ್: ಭೂಪೇಂದ್ರಬಾಯ್ ಪಟೇಲ್ ಸೋಮವಾರ ಮಧ್ಯಾಹ್ನ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲರಾದ ಆಚಾರ್ಯ ದೇವವ್ರತ ಅವರು ಪ್ರಮಾಣವಚನ ಬೋಧಿಸಿದರು. ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷವು ಅವರನ್ನು ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಿತು. ರಾಜ್ಯ ವಿಧಾನಸಭೆಯಲ್ಲಿ ಒಟ್ಟು 182 ಸ್ಥಾನಗಳನ್ನು ಹೊಂದಿದ್ದು, ಬಿಜೆಪಿ 112 ಸದಸ್ಯರನ್ನು ಹೊಂದಿದೆ. ಅವರೆಲ್ಲ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು. ಶನಿವಾರ
ಮಂಗಳೂರು:ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶರಾಗಿದ್ದಾರೆ.ಆಸ್ಕರ್ ಫೆರ್ನಾಂಡಿಸ್ ಅವರಿಗೆ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಈ ಹಿನ್ನೆಲೆಯಲ್ಲಿ, ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಸಮಸ್ಯೆ ಬಿಗಡಾಯಿಸುತ್ತಿದ್ದು, ತಕ್ಷಣ ಉದ್ಯೋಗ ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಲು ಸೆಪ್ಟೆಂಬರ್ 17 ರಂದು “ರಾಷ್ಟ್ರೀಯ ನಿರುದ್ಯೋಗ ದಿನ” ಆಚರಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ. ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ
ಅಗತ್ಯ ವಸ್ತುಗಳು ಮತ್ತು ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಆರಂಭಿಸಿರುವ ಕಾಂಗ್ರೆಸ್, ವಿಧಾನಸೌಧಕ್ಕೆ ಎತ್ತಿನ ಬಂಡಿ ಪ್ರಯಾಣ ಆರಂಭಿಸಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಎತ್ತಿನ ಬಂಡಿಯಲ್ಲಿ ವಿಧಾನಸೌಧದತ್ತ ತೆರಳಿದರು. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಆಗಿರುವ ತೊಂದರೆ ಕುರಿತು ಸಾಂಕೇತಿಕವಾಗಿ ಪ್ರತಿಭಟನೆ ವ್ಯಕ್ತಪಡಿಸಲು ಕಾಂಗ್ರೆಸ್ ನಾಯಕರು
ವಿಜಯಪುರ ಜಿಲ್ಲೆ ಸೇರಿದಂತೆ ಬಾಗಲಕೋಟ ಜಿಲ್ಲೆಯಲ್ಲಿ ಮನೆಗಳ್ಳತನ ಮಾಡಿ ಪರಾರಿಯಾಗುತ್ತಿದ್ದ ಏಳು ಜನ ಮನೆಗಳ್ಳರನ್ನು ಬಂಧಿಸುವಲ್ಲಿ ವಿಜಯಪುರ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವಿಜಯಪುರ ಪೋಲಿಸ್ ವರಿಷ್ಠಾಧಿಕಾರಿ ಎಚ್. ಡಿ ಆನಂದಕುಮಾರ್ ತಿಳಿಸಿದ್ದಾರೆ. ರಮೇಶ ಕಾಳೆ, ಸುರೇಶ ಚವ್ಹಾಣ, ಪರಶುರಾಮ ಕಾಳೆ, ಕಿರಣ ಬೇಡಕೇರ, ದೇವದಾಸ್ ಚವ್ಹಾಣ , ತನ್ವೀರ್ ಹೊನ್ನುಟಗಿ, ದಶರಥ ಹೊಸಮನಿ ಬಂಧಿತರು. ಇನ್ನೂ ಬಂಧಿತರಿಂದ 16ಲಕ್ಷ ಮೌಲ್ಯದ 360 ಗ್ರಾಂ ಚಿನ್ನ, 200
ಬೆಂಗಳೂರು: ‘ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರಕಾರವು ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂಬ ಅರ್ಥಹೀನ ನಿರ್ಬಂಧ ಹೇರುವ ಮೂಲಕ ಮೂರ್ತಿ ತಯಾರಕರ ಬದುಕಿನ ಜತೆ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಅಥವಾ ಮೂರ್ತಿ ತಯಾರಿಕರಿಗೆ ಪರಿಹಾರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ‘ಕಳೆದ 2 ತಿಂಗಳಿಂದ ಗಣೇಶ ಮೂರ್ತಿ



















