ರಾಜ್ಯ ಪ್ರವಾಸದಿಂದ ಮರಳಿ ಮಂಗಳೂರಿಗೆ ಬರುವಾಗ ಹಾಸನ ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಸಿಲುಕಿದ್ದ ಸಾರ್ವಜನಿಕರನ್ನು ಸುರಕ್ಷಿತವಾಗಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೆರವಾಗಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ತಕ್ಷಣವೇ ನಳಿನ್ ಕುಮಾರ್ ಕಟೀಲ್ ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವುದರಿಂದ ರಾಜ್ಯದಲ್ಲೂ ಬಿಗಿ ಕ್ರಮ ಕೈಗೊಳ್ಳಲಾಗವುದು. ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕೇರಳ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ಕೆಲವು ನಿರ್ಬಂಧಗಳನ್ನು ಹೇರಲಾಗಿದ್ದು, ಅದನ್ನು ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಹೇಳಿದರು. ನಿಫಾ
ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಸಂಬಂಧ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರ್ಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಈ ಮೂರು ಮಹಾ ನಗರ ಪಾಲಿಕೆ, ತರೀಕೆರೆ, ದೊಡ್ಡಬಳ್ಳಾಪುರ ಹಾಗೂ ಮೈಸೂರಿನ ಪಾಲಿಕೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಮತ ನೀಡಿದ ಎಲ್ಲಾ ಮತದಾರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ.ಬೆಳಗಾವಿಯಲ್ಲಿ ನಿರೀಕ್ಷಿತ ಫಲಿತಾಂಶ
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಪ್ರತಿಪಕ್ಷಗಳು ಮಾಡುತ್ತಿರುವ ಆರೋಪವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸಾರಾಸಗಟಾಗಿ ತಳ್ಳಿಹಾಕಿದಲ್ಲದೆ, ಇದು ಅರ್ಥರಹಿತ ಹಾಗೂ ರಾಜಕೀಯ ದುರುದ್ದೇಶದಿಂದ ಕೂಡಿದ ಟೀಕೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಭಾನುವಾರ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು
ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಯುಎಇ ವತಿಯಿಂದ ಸೆಪ್ಟೆಂಬರ್ 10ರಂದು ‘ಡಿಜಿಟಲ್ ರೆವಲ್ಯೂಶನ್ ಆನ್ ಬ್ಯುಸಿನೆಸ್ ಆಂಡ್ ಎಂಟ್ರಪನರ್’ಶಿಪ್’ ಎಂಬ ವಿಷಯದಲ್ಲಿ ವೆಬಿನಾರ್ ಹಮ್ಮಿಕೊಂಡಿದೆ. ಬ್ಯುಸಿನೆಸ್ ನೆಟ್ವರ್ಕಿಂಗ್ ಮೂಲಕ ಸಮಾಜದ ಉದ್ಯಮಿಗಳನ್ನು, ವೃತ್ತಿಪರರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಆ ಮೂಲಕ ವ್ಯಾಪಾರ ಸಬಲೀಕರಣ ಹಾಗೂ ಸಮಾಜ ಸೇವೆ ನಡೆಸುವ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ ಯುಎಇಯಲ್ಲಿ
ಬೆಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಿ, ವಿಶ್ವವಿದ್ಯಾಲಯದ ರಕ್ಷಣೆಗೆ ಕಾನೂನಿನ ವ್ಯಾಪ್ತಿಯಲ್ಲಿ ಸಾಧ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಭರವಸೆ ನೀಡಿದ್ದಾರೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎನ್.ಎಸ್. ರಾಮೇಗೌಡ ಹಾಗೂ ನಿವೃತ್ತ ಡೀನ್ ಡಾ. ಚಂಬಿ ಪುರಾಣಿಕ್ ಅವರು ಶಿಕ್ಷಕರ ದಿನದ ಹಿನ್ನೆಲೆಯಲ್ಲಿ ರಾಜ್ಯದ ಪ್ರಪ್ರಥಮ ಪ್ರಜೆ
ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ
ವಿಜಯಪುರ ನಗರದಲ್ಲಿ ಶನಿವಾರ ರಾತ್ರಿ 11-47 ಮತ್ತು 11-48ಕ್ಕೆ ಎರಡು ಬಾರಿ ದೊಡ್ಡ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಜಲನಗರ, ಕೀರ್ತಿ ನಗರ, ಟ್ರಜರಿ ಕಾಲೊನಿ, ಗಣೇಶ ನಗರ, ನವಭಾಗ್ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಹಾಗೂ ಜಿಲ್ಲೆಯ ಕೂಡಗಿ, ಮುಳವಾಡ, ಬಬಲೇಶ್ವರ ಇನ್ನು ಹಲವೆಡೆ ಎರಡು ಬಾರಿ ದೊಡ್ಡದಾಗಿ ಶಬ್ಧವಾಗಿದೆ. ಜೊತೆಗೆ ಭೂಮಿಯೂ ಕಂಪಿಸಿದೆ. ಇನ್ನೂ ಕೂಡಗಿ ಗ್ರಾಮದ ಅಬ್ದುಲ್ ಖಾದ್ರೀ ಜಾಗೀರದ್ದಾರ ಎಂಬುವವರು ಮನೆ ಕುಸಿದು ಬಿದ್ದಿದೆ. ಅದೃಷ್ಟವಶಾತ್
ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ನೆನಪಿನಲ್ಲಿ ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮವು ಚಾಮರಾಜಪೇಟೆಯಲ್ಲಿ ನಡೆಯಿತು. ಸೆಪ್ಟಂಬರ್ 05 ಅಂದರೆ ಇಂದು ಗೌರಿ ಲಂಕೇಶ್‌ರವರ ಹತ್ಯೆಯಾಗಿ 4 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 8.30ಕ್ಕೆ ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್‌ರವರ ಸಮಾಧಿ ಬಳಿ ಗೌರವ ಸಲ್ಲಿಸಲಾಯಿತು. ಗೌರಿ ಲಂಕೇಶ್‌ರವರ ನಮ್ಮನ್ನು ಅಗಲಿ ನಾಲ್ಕು
ಬೆಂಗಳೂರು: ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕ, ಗಾಯತ್ರಮ್ಮ ,ಕಿರಿಯ ಸಹಾಯಕಿ ಹಾಗೂ ಸುಜಾತಮ್ಮ, ಕಿರಿಯ ಸಹಾಯಕಿ ,ಈ ಮೂವರು ಅಮಾನತಿ ಗೊಳಗಾದ ಸಿಬ್ಬಂದಿ ಯಾಗಿದ್ದಾರೆ. ಇವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ