ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ನೆನಪಿನಲ್ಲಿ ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮವು ಚಾಮರಾಜಪೇಟೆಯಲ್ಲಿ ನಡೆಯಿತು. ಸೆಪ್ಟಂಬರ್ 05 ಅಂದರೆ ಇಂದು ಗೌರಿ ಲಂಕೇಶ್‌ರವರ ಹತ್ಯೆಯಾಗಿ 4 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 8.30ಕ್ಕೆ ಚಾಮರಾಜಪೇಟೆಯಲ್ಲಿರುವ
ಬೆಂಗಳೂರು: ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕ, ಗಾಯತ್ರಮ್ಮ ,ಕಿರಿಯ ಸಹಾಯಕಿ ಹಾಗೂ ಸುಜಾತಮ್ಮ, ಕಿರಿಯ ಸಹಾಯಕಿ ,ಈ ಮೂವರು ಅಮಾನತಿ ಗೊಳಗಾದ ಸಿಬ್ಬಂದಿ ಯಾಗಿದ್ದಾರೆ. ಇವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ
ನಾಲಾಸೋಪಾರ;; ತುಳು ಕೂಟ ಫೌಂಡೇಶನ್ ನಾಲಾಸೋಪಾರ ಇದರ ಸಭೆಯು. ಆಗಸ್ಟ್ 31ರಂದು ರಿಜನ್ಸಿ ಬ್ಯಾಂಕ್ವಿಟ್ ಹಾಲ್ ನಾಲಾಸೋಪಾರ (ಪೂರ್ವ )ದಲ್ಲಿ ತುಳುಕೂಟ ಫೌಂಡೇಶನ್ ಅಧ್ಯಕ್ಷರಾದ ರಮೇಶ್ ಶೆಟ್ಟಿ ಕಾಪು ಇವರ ಅದ್ಯಕ್ಷತೆಯಲ್ಲಿ ಜರಗಿತು. ಕಾರ್ಯದರ್ಶಿ ಜಗನಾಥ. ಡಿ. ಶೆಟ್ಟಿ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಸಭೆಯ ಮುಂದಿಟ್ಟರು. ಕೋಶಾಧಿಕಾರಿಯವರ ಅನುಪಸ್ಥಿತಿಯಲ್ಲಿ ಅಧ್ಯಕ್ಷರ ಅನುಮತಿ ಮೇರೆಗೆ ಕಾರ್ಯದರ್ಶಿಯವರು ಲೆಕ್ಕಪತ್ರವನ್ನು ಮಂಡಿಸಿದರು ಈ ಸಂದರ್ಭದಲ್ಲಿ
ಇಂದು ದೇಶದಾದ್ಯಂತ ಕೋವಿಡ್‍ನಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ ಕೆಲವೊಂದು ಕಸುಬುಗಳನ್ನೇ ನಂಬಿ ಜೀವನ ಸಾಗಿಸುತ್ತಿದ್ದ ಕಲಾವಿದರ ಬದುಕು ಇಂದು ಹೀನಾಯವಾಗಿದೆ ಅದಕ್ಕೆ ಉದಾಹರಣೆ ಎಂಬಂತೆ ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ. ಅದರ ಅಂಗವಾಗಿ ಪ್ರತಿ ವರ್ಷವೂ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿದ್ದ ಕಲಾವಿದರು ಇಂದು ಕೋವಿಡ್‍ನಿಂದಾಗಿ ಹೀನಾಯ ಬದುಕನ್ನು ಬದುಕುತ್ತಿದ್ದಾರೆ. ಪ್ರತಿವರ್ಷವು ವಿಜೃಂಭಣೆಯಿಂದ ನಡೆಯುತ್ತಿದ್ದ ಗಣೇಶ
ಪ್ರತಿಯೊಂದು ವಿಶೇಷ ಹಬ್ಬದ ಸಂದರ್ಭದಲ್ಲಿ ಆಯಾ ಹಬ್ಬದ ಮಹತ್ವಕ್ಕೆ ಸಂಬಂಧಿಸಿದ ಫೆಸ್ಟಿವ್ ವೇರ್ ಮೂಲಕ ಫ್ಯಾಶನ್ ಪ್ರಿಯರನ್ನು ಆಕರ್ಷಿಸುತ್ತಿದೆ ಬೆಂಗಳೂರಿನ ಜಿಯಾನಿ ಡಿಸೈನರ್ಸ್ ಸಂಸ್ಥೆ.ಈ ಬಾರಿಯ ಶ್ರೀ ಕೃಷ್ಣಾಷ್ಟಮಿಗೆ ಯಶೋಧೆ ಕೃಷ್ಣ ಪರಿಕಲ್ಪನೆಯ ಧಿರಿಸಿನ ಫೋಟೋ ಶೂಟ್ ಮೂಲಕ ಜಿಯಾನಿ ಡಿಸೈನರ್ ಸಂಸ್ಥೆ ಫ್ಯಾಷನ್ ಪ್ರಿಯರ ಗಮನ ಸೆಳೆಯಿತು . ಜನಪ್ರಿಯ ಮೊಡೇಲ್ ಪ್ರಿಯಾ ಕುಮಾರ್ ಅವರು ಯಶೋಧೆಯಾಗಿ ಆಕರ್ಷಕ ಫೆಸ್ಟಿವ್ ವೇರ್ ನಲ್ಲಿ ಮಿಂಚಿದರು. ಯಶೋಧೆ ಪುಟ್ಟ
ಬೆಂಗಳೂರು: ರಾಜ್ಯದಲ್ಲಿ ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮ ಸ್ಥಾಪಿಸಿ ಒಂದೂವರೆ ವರ್ಷ ಕಳೆದಿದ್ದು, ಕೂಡಲೇ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ರಾಜ್ಯ ಮಡಿವಾಳ ಕ್ಷೇಮಾಭಿವೃದ್ಧಿ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಸಂಘದ ರಾಜ್ಯಾಧ್ಯಕ್ಷ ಬಿ.ಆರ್. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ದೀಪಕ್ ವಿ. ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಮಡಿವಾಳ ಜನಾಂಗ ನಡೆಸಿದ ಬಹು ದಿನಗಳ ಹೋರಾಟದ ಫಲವಾಗಿ ನಿಗಮ
ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಕಹಿಸುದ್ದಿ ಸಿಕ್ಕಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್ 01ರಿಂದ ಅಡುಗೆ ಅನಿಲ ಪ್ರತಿ ಸಿಲಿಂಡರ್ ಮೇಲೆ ಹೆಚ್ಚುವರಿ 25 ರು ತೆರಬೇಕಾಗುತ್ತದೆ. ಪರಿಷ್ಕೃತ ದರ ಪಟ್ಟಿ ಬುಧವಾರದಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳು ಹೇಳಿವೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್
ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಬಾಣಾವರದಲ್ಲಿ ವಾಹನ ತಪಾಸಣೆ ವೇಳೆ ಹೆಚ್ಚು ಶುಲ್ಕ ವಿಧಿಸಿದ ಹಿನ್ನೆಲೆಯಲ್ಲಿ ಮನನೊಂದು ವಾಹನ ಚಾಲಕ ಮಂಜುನಾಥ್ (೫೦) ತನ್ನ ವಾಹನದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಬಾಣಾವರ ಸಮೀಪದ ಸರ್ವೆ ಕೊಪ್ಪಲು ಮೂಲದವರಾಗಿದ್ದು ಆರ್.ಟಿ.ಓ ಅಧಿಕಾರಿಗಳ ತಪಾಸಣೆಯ ವೇಳೆ ಹದಿನೇಳು ಸಾವಿರ ದಂಡವಿಧಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಕೊರೋನಾ ಹಿನ್ನೆಲೆಯಲ್ಲಿ ವಾಹನ
ಬೆಂಗಳೂರು, ಆ 31; ಕೋವಿಡ್ ಸಂಕಷ್ಟದಿಂದ ಜನತೆ ಹೊರ ಬರುತ್ತಿರುವ ಸಂದರ್ಭದಲ್ಲೇ ಈ ಬಾರಿ ಗೌರಿ – ಗಣೇಶ ಹಬ್ಬಕ್ಕಾಗಿ ವಿಶೇಷವಾಗಿ ಯಲಹಂಕದ ಜಕ್ಕೂರಿನ ಮಧುರ ಮಿಲನ ಕಲ್ಯಾಣ ಮಂಟಪದಲ್ಲಿ ಸೆಪ್ಟೆಂಬರ್ 3 ರಿಂದ 5 ರ ವರೆಗೆ ಮಹಿಳೆಯರಿಂದಲೇ ವಿಶೇಷ ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ಈ ಬಾರಿ ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಲು ಎಲ್ಲೆಡೆ ಸಿದ್ಧತೆಗಳು ನಡೆಯುತ್ತಿದ್ದು, ಹಬ್ಬಕ್ಕೆ ಹೊಳಪು ಮತ್ತು ಮೆರಗು ನೀಡಲು ಮಹಿಳೆಯರಿಂದಲೇ ವಿಶೇಷ ಆಭರಣ ಮೇಳ
ಬೆಂಗಳೂರು: ಪ್ರತಿ ಹತ್ತು ವರ್ಷಕ್ಕೊಮ್ಮೆ ಜಾತಿವಾರು ಜನಗಣತಿ ನಡೆಸುವುದರಿಂದ ವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲು, ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 90 ವರ್ಷಗಳ ಹಿಂದಿನ ಜಾತಿ ಜನಗಣತಿ ವರದಿ ಇಟ್ಟುಕೊಂಡು ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದು ಸರಿಯಲ್ಲ ಎಂದರು.


















