Home Archive by category ರಾಜ್ಯ (Page 65)

ಬಾಣಸವಾಡಿಯಲ್ಲಿ  ಜಮಿಂದಾರ್ ಮೈತ್ರಕೋಸರ್ಜಿಕಲ್ ಐ ಸೆಂಟರ್:  ಮೊದಲ ದಿನ 100 ಮಂದಿಗೆ ಉಚಿತ ಕಣ್ಣಿನ ಪರೀಕ್ಷೆ ಮೂಲಕ ಶುಭಾರಂಭ

ಬೆಂಗಳೂರು: ಅತ್ಯಾಧುನಿಕ ಕಣ್ಣಿನ ಶಸ್ತ್ರ ಚಿಕಿತ್ಸೆ ಸೇರಿದಂತೆ ಎಲ್ಲಾ ರೀತಿಯ ದೃಷ್ಟಿದೋಷಗಳಿಗೆ ಅತ್ಯಂತ ನಿಖರವಾಗಿ ಪರಿಹಾರ ಒದಗಿಸುವ ಜಮಿಂದಾರ್ ಮೈಕ್ರೋಸರ್ಜಿಕಲ್ ಐ ಸೆಂಟರ್ ಬೆಂಗಳೂರಿನ ಬಾಣಸವಾಡಿಯಲ್ಲಿ ತನ್ನ  3ನೇ ಕೇಂದ್ರ ಆರಂಭಿಸಿದೆ. ಜಮಿಂದಾರ್ ಮೈಕ್ರೋಸರ್ಜಿಕಲ್ ಕೇಂದ್ರವನ್ನು ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಬಿ. ಪದ್ಮನಾಭ ರೆಡ್ಡಿ ಶುಭಾರಂಭ

ಶಾಲೆಗಳ ಆರಂಭದ ಕುರಿತು ಸಿಎಂ ನಿರ್ಧಾರ- ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿಗಳು ತಾಂತ್ರಿಕ ಶಿಕ್ಷಣ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಅವರು ಇಂದು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು

ಮೈಸೂರು ಅತ್ಯಾಚಾರ ಪ್ರಕರಣ 85 ಗಂಟೆಯ ಬಳಿಕ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಆಗಸ್ಟ್ 24ರಂದು ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳ್ನಾಡಿನಲ್ಲಿ 5ವರು ಆರೋಪಿಗಳನ್ನು ಬಂಧಿಸಿದ ಪೊಲೀಸ್ ಪಡೆ.ತಾಂತ್ರಿಕ ಸಾಕ್ಷಿಗಳ ಮೂಲಕ ಆರೋಪಿಗಳ ಪತ್ತೆ ಹಚ್ಚಿದ ಪೊಲೀಸರು..ಇದೀಗ ಅತ್ಯಾಚಾರಿಗಳು ಸೆರೆಸಿಕ್ಕಿದ್ದಾರೆ.ಅತ್ಯಾಚಾರ ನಡೆದು 85ಗಂಟೆಗಳ ಬಳಿಕ ಸೆರೆಸಿಕ್ಕ ಆರೋಪಿಗಳು.ಸಂತ್ರಸ್ತೆಯ ಸ್ನೇಹಿತ ನೀಡಿದ ಮಾಹಿತಿಗಳ ಅನ್ವಯ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.ಇನ್ನಷ್ಟು ಮಾಹಿತಿ ತನಿಖೆಯ ನಂತರವೇ ತಿಳಿಯಬೇಕಿದೆ

ನವದೆಹಲಿ: ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡ ಖಾಸಗಿ ಶಾಲೆಗಳು ಮತ್ತು ಕ್ಷೇಮಾಭಿವೃದ್ಧಿ ಸಂಘಕ್ಕೆ ಗೌರವ

ಖಾಸಗಿ ಶಾಲೆಗಳು ಮತ್ತು ಕ್ಷೇಮಾಭಿವೃದ್ಧಿ ಸಂಘವು ಸಮಾಜ ಸೇವೆಯಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದ್ದು, ಅತ್ಯುತ್ತಮ ಸಂಘವೆಂದು ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನವದೆಹಲಿಯ ನ್ಯೂ ಫ್ರೈಡ್ ಪ್ಲಾಜಾ ಹೋಟೆಲ್‌ನಲ್ಲಿ ಸಂಘವನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಖಾಸಗಿ ಶಾಲೆಗಳು ಮತ್ತು ಕ್ಷೇಮಾಭಿವೃದ್ಧಿ ಸಂಘವು ಹಣಕಾಸಿನ ನೆರವು, ವೈದ್ಯಕೀಯ ಸಹಾಯ, ಆಹಾರ ಕಿಟ್‌ಗಳು, ಕೋವಿಡ್ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ವ್ಯವಸ್ಥೆ ಇತ್ಯಾದಿ ಅನೇಕ ಖಾಸಗಿ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ: ಶಶಿಕಲಾ ಜೊಲ್ಲೆ

ಮೈಸೂರು: ಮೈಸೂರಿನ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಮಾಡಿರುವುದು ಖಂಡನೀಯವಾಗಿದ್ದು, ಸಂತ್ರಸ್ಥ ಯುವತಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ರೀತಿಯ ದುಷ್ಕೃತ್ಯ ನಡೆದಿರುವುದು ನೋವಿನ ಸಂಗತಿ. ನಾನು ಒಬ್ಬ ಮಹಿಳೆಯಾಗಿ ಸರ್ಕಾರದಲ್ಲಿ ಮಹಿಳಾ ಸಚಿವೆಯಾಗಿ ಒಂದು ಹೆಣ್ಣಿನ ನೋವು ಒಬ್ಬಳು ಹೆಣ್ಣಾಗಿ ನನಗೆ ಅರ್ಥ ಆಗುತ್ತದೆ. ನಾಗರಿಕ ಸಮಾಜದಲ್ಲಿ ಈ ರೀತಿಯ ದುಷ್ಕೃತ್ಯವನ್ನು ಯಾರೂ ಸಹಿಸುವುದಿಲ್ಲ. ನಾಗರಿಕ

ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಮಂಗಳೂರಿನಲ್ಲಿ ಎನ್‌ಎಸ್‌ಯುಐ ಪ್ರತಿಭಟನೆ

ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಅನ್ನು ಖಂಡಿಸಿ ಹಾಗೂ ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಸಾಂಸ್ಕೃತಿಕ

750 ಗ್ರಾಮಗಳ ದತ್ತು ಯೋಜನೆ – ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ ಅನುಷ್ಟಾನಕ್ಕೆ ಸರ್ಕಾರದ ಆದೇಶ – ಸಚಿವ ಡಾ. ನಾರಾಯಣಗೌಡ

ಬೆಂಗಳೂರು:ಸರ್ಕಾರ ಹತ್ತಾರು ಯೋಜನೆ ಘೋಷಣೆ ಮಾಡಿದರೂ ಅದು ಸಮರ್ಪಕವಾಗಿ ಜನರನ್ನು ತಲುಪುವುದು ಕಷ್ಟ. ಹೀಗಾಗಿ ಪ್ರತಿ ವ್ಯಕ್ತಿಗೂ ಯೋಜನೆಯ ಫಲ ಸಿಗಬೇಕು. ಬಡತನ ರೇಖೆಗಿಂತ ಕೆಳಗಿರುವ ಜನರ ಏಳಿಗೆ ಆಗಬೇಕು. ಇದಕ್ಕಾಗಿ ಸರ್ಕಾರದ ಯೋಜನೆ ಪ್ರತಿ ಮನೆ ಮನೆ ತಲುಪಲು `ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ಯನ್ನು ಸರ್ಕಾರ ಜಾರಿಗೆ ತಂದಿದ್ದು, ಯೋಜನೆ ಅನುಷ್ಟಾನಕ್ಕೆ ಅನುಮೋದನೆ ನೀಡಲಾಗಿದೆ. ಎನ್‍ಎಸ್‍ಎಸ್‍ನ ಸ್ವಯಂ ಸೇವಕರೇ ಇದರಲ್ಲಿ ಪ್ರಮುಖಪಾತ್ರ ವಹಿಸಲಿದ್ದಾರೆ ಎಂದು

ಭೈರಪ್ಪ ಹುಟ್ಟೂರು ಅಭಿವೃದ್ಧಿಗೆ ಸರ್ಕಾರ ಬದ್ಧ -ಸಚಿವ ಸುನಿಲ್ ಕುಮಾರ್

ಮೈಸೂರು:  ಡಾ. ಎಸ್ ಎಲ್ ಭೈರಪ್ಪ ಅವರ ಹುಟ್ಟೂರಿನ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಹಾಗು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಮೈಸೂರಿನಲ್ಲಿ ಡಾ.ಎಲ್ ಎಲ್ ಭೈರಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದರು.ಎಸ್ಎಲ್ ಭೈರಪ್ಪ ಅವರ ಜೊತೆ ಸೌಹಾರ್ದಯುತ ಮಾತುಕತೆ ನಡೆಸಿದ ಸಚಿವ ಸುನಿಲ್ ಕುಮಾರ್ ನಾಡಿನ ಕಲೆ ಸಾಹಿತ್ಯ ಹಾಗೂ ಸಂಸ್ಕೃತಿ ಕುರಿತಂತೆ ವಿಚಾರ ವಿನಿಮಯ

ಮೈಸೂರಿನಲ್ಲಿ ವಿದ್ಯಾರ್ಥಿ ಮೇಲೆ ಗ್ಯಾಂಗ್‌ರೇಪ್ ನಡೆದಿರುವ ಶಂಕೆ..!

ಮೈಸೂರು:  ಮೈಸೂರಿನಲ್ಲಿ ಅಪರಾಧ ಕೃತ್ಯಗಳು ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾಂಸ್ಕೃತಿಕ ನಗರಿ ಜನತೆಯ ನಿದ್ದೆಗಡಿಸಿದೆ. ಇದೀಗ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎನ್ನಲಾಗಿದ್ದು ಜನತೆಯನ್ನು ಆತಂಕಕ್ಕೆ ನೂಕಿದೆ. ಹಾಡುಹಗಲಲ್ಲೇ ಯುವಕನಿಗೆ ಗುಂಡು ಹಾರಿಸಿ ಜ್ಯುವೆಲಲ್ಲರಿ ಶಾಪ್ ದರೋಡೆ, ಯುವತಿಗೆ ಚಾಕುವಿನಿಂದ ಇರಿತ ಪ್ರಕರಣಗಳು ಮಾಸುವ ಮುನ್ನವೇ ಬೆಚ್ಚಿ ಬೀಳಿಸುವ ಸುದ್ದಿಯೊಂದು ಹೊರಬಿದ್ದಿದೆ. ಮೈಸೂರು ನಿವಾಸಿ ಖಾಸಗಿ

24 ಸ್ಟಾರ್ ಸ್ಟಾರ್ಟ್ ಅಪ್ ಗಳಿಗೆ ಎಂ.ಎಸ್. ರಾಮಯ್ಯ ಶಿಕ್ಷಣ ಸಂಸ್ಥೆಯಿಂದ ತಲಾ 50 ಲಕ್ಷ ರೂಪಾಯಿ ನೆರವು   ಎಂ.ಆರ್. ಸೀತಾರಾಂ

ಬೆಂಗಳೂರು: ರಾಮಯ್ಯ ಎವುಲೂಟ್, ಗೋಕುಲ ಶಿಕ್ಷಣ ಸಂಸ್ಥೆ ಹಾಗೂ ರಾಮಯ್ಯ ಸಮೂಹ ಸಂಸ್ಥೆಗಳ ನೆರವಿನಿಂದ ನಾವೀನ್ಯತೆ, ಭವಿಷ್ಯದ ಉತ್ಪನ್ನಗಳ ಉತ್ಪಾದನೆ, ಮುಂದಿನ ತಲೆಮಾರು ಬಳಕೆಯ ತಂತ್ರಜ್ಞಾನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ 24 ನವೋದ್ಯಮಗಳ [ಸ್ಟಾರ್ ಸ್ಟಾರ್ಟ್ ಅಪ್ ಗಳು] ಅಭ್ಯುದಯಕ್ಕಾಗಿ ತಲಾ 50 ಲಕ್ಷ ರೂಪಾಯಿ ನೆರವು ನೀಡಿ ಗೌರವಿಸಲಾಯಿತು. ಮತ್ತೀಕೆರೆಯ ಎಂ.ಎಸ್.ಆರ್.ಟಿ ಕ್ಯಾಂಪಸ್ ನಲ್ಲಿರುವ ಆಡಿಟೋರಿಯಂನಲ್ಲಿ ನವೋದ್ಯಮಗಳಿಗೆ