ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರ್ನಾಟಕ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಸಾಲ ಮರುಪಾವತಿ ಮೊಬೈಲ್ ಆಪ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ನಿಗಮದ ಸಾಲ ಮರುಪಾವತಿ ಶೇ.90 ರಷ್ಟಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ನಿಗಮವನ್ನು ಫೈನಾನ್ಸ್ ಕಾರ್ಪೊರೇಷನ್ ಆಗಿ ಪರಿವರ್ತಿಸಲು ಸಲಹೆ ನೀಡಿದರು. ಆ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ತುಳುವೆರ್ ಕುಡ್ಲ (ರಿ). ನೂತನ ಸಂಘಟನೆಯ “ಲೋಗೋ”ವನ್ನು ಬಿಡುಗಡೆ ಮಾಡಿದರು. ತುಳುಭಾಷೆಯನ್ನು ಕರ್ನಾಟಕ ರಾಜ್ಯದ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವಂತೆ ಮನವಿ ಸಲ್ಲಿಸಲಾಯಿತು ಹಾಗೂ “ತುಳು ಕೆಳಿಂಜ ಭಾರತ” ಎನ್ನುವ ತುಳುನಾಡಿಗೆ ಸಂಬಂಧಪಟ್ಟ ಪುಸ್ತಕವನ್ನು ಕೊಟ್ಟು ಮುಖ್ಯಮಂತ್ರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು
ಕು. ಅಮನ, 8 ನೇ ತರಗತಿ, ಬಿಷಪ್ ಕಾಟನ್ ಗಲ್ರ್ಸ್ ಸ್ಕೂಲ್, ಬೆಂಗಳೂರಿನಲ್ಲಿ ಓದುತ್ತಿದ್ದು, ಪ್ರತಿಷ್ಠಿತ ‘ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್’ ನಲ್ಲಿ “ಕಿರಿಯ ಕವಯಿತ್ರಿ” ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ “ಗ್ರ್ಯಾಂಡ್ ಮಾಸ್ಟರ್” ಆಗಿ ದಾಖಲಾಗಿದೆ. ವಿವರಗಳು ಹೀಗಿವೆ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್: ಅತ್ಯಂತ ಕಿರಿಯ ಕವಯಿತ್ರಿ ಎಂಬ ದಾಖಲೆಯನ್ನು ಬೆಂಗಳೂರಿನ ಕು. ಅಮನ (ಜನನ ಜೂನ್ 20, 2008 ರಂದು) ಮಾಡಿದ್ದಾರೆ. ಅವರು 61 ಕವನಗಳ
ಬೆಂಗಳೂರು :ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಬಲವರ್ಧನೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ,ಜೊತೆಗೆ ಅವು ಹೊಸ ದೃಷ್ಟಿಕೋನದಿಂದ ಕಾರ್ಯಕ್ರಮ ರೂಪಿಸಿ ಜಾರಿಗೆ ತರುವ ಮೂಲಕ ಸಂಸ್ಕೃತಿ ಕಟ್ಟುವ ಕೆಲಸಕ್ಕೆ ತೊಡಗಲು ಬೇಕಾದ ಎಲ್ಲಾ ಸಹಕಾರ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಕನ್ನಡ ಮತ್ತು
ಬೆಂಗಳೂರು: ರಾಜ್ಯದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ವಕ್ಫ್ ಮತ್ತು ಹಜ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ್ದೇನೆ.ರಾಜ್ಯದಲ್ಲಿ ವಕ್ಫ್ 105885 ಎಕರೆ ಜಮೀನು ಗುರುತಿಸಲಾಗಿದೆ.
2019-20ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೊಡಮಾಡುವ ಪ್ರಶಸ್ತಿಗೆ 15 ಮಂದಿ ಆಯ್ಕೆಯಾಗಿದ್ದಾರೆ. ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿಗೆ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಚಿ.ಸು.ಕೃಷ್ಣಶೆಟ್ಟಿ ಸೇರಿದಂತೆ 15 ವಿವಿಧ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.ಪ್ರಶಸ್ತಿಗೆ ಆಯ್ಕೆಯಾದ ಸಾಧಕರಿಗೆ ಆ.18ರಂದು ಸಂಜೆ 6.30ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಿ
ಜಪಾನ್‍ನ ಟೋಕಿಯೊದಲ್ಲಿ ನಡೆಯಲಿರುವ ಪ್ಯಾರಾ ಓಲಂಪಿಕ್‍ಗೆ ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಅವರಿಗೆ ಪ್ರೋತ್ಸಾಹಧನವಾಗಿ ತಲಾ ರೂ. 10 ಲಕ್ಷ ನೀಡಲಾಗಿದೆ. ಪ್ಯಾರಾ ಪವರ್ ಲಿಪ್ಟಿಂಗ್‍ನಲ್ಲಿ ಶಕೀನ್ ಖಾತುನ್ ಹಾಗೂ ಪ್ಯಾರಾ ಈಜಿನಲ್ಲಿ ನಿರಂಜನ್ ಮುಕುಂದನ್ ಪಾಲ್ಗೊಳ್ಳುತ್ತಿದ್ದಾರೆ. ಇಬ್ಬರೂ ಕ್ರೀಡಾಪಟುಗಳು ರಾಜ್ಯದ, ದೇಶದ ಕೀರ್ತಿಪತಾಕೆ ಹಾರಿಸುತ್ತಾರೆ ಎಂಬ ನಂಬಿಕೆ ಇದೆ. ಪ್ಯಾರಾ ಓಲಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದರೆ ರಾಜ್ಯ
ಕರ್ನಾಟಕ ರಾಜ್ಯ ಸರ್ಕಾರ ಶ್ರೀ ಗಜಾನನ ಉತ್ಸವ ಆಚರಣೆ ನಿರ್ಭಂಧ ವಿಧಿಸುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಶ್ರೀ ಗಜಾನನ ಉತ್ಸವ ಮಹಾಮಂಡಳಿ ವತಿಯಿಂದ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸಾರ್ವಜನಿಕ ಗಣೇಶೋತ್ಸವವನ್ನು ಕೋವಿಡ 19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ , ಸಾಮಾಜಿಕ ಅಂತರ , ಸ್ಯಾನಿಟೃಸರು,ಮಾಸ್ಕ್ ಬಳಿಸಿ ಅತ್ಯಂತ ಸರಳವಾಗಿ ಆಚರಿಸುವುವ ಕಾರಣ ಸಾರ್ವಜನಿಕ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮದುವೆ, ಮಂದಿರ, ಮಸೀದಿಗಳ ಮೇಲೆ ನಿಯಂತ್ರಣ ಹೇರಲು ಚಿಂತನೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸ್ಮಾರ್ಟ್ ಪದ್ಮನಾಭ ನಗರ ಕಾರ್ಯಕ್ರಮದಡಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ದೋಬಿ ಘಾಟ್ ಬಳಿ ರಾಷ್ಟ್ರೀಯ ಯುವ ಪ್ರತಿಷ್ಠಾನದಿಂದ ಕೋವಿಡ್ ಸಾಂಕ್ರಾಮಿಕದಿಂದ ಆನ್ ಲೈನ್ ಕಲಿಕೆಯಿಂದ ವಂಚಿತರಾದ 100 ಬಡ ಹಾಗೂ
ಮಂಗಳೂರು: ಕರಾವಳಿಯಲ್ಲಿ ಉಗ್ರರ ನಂಟಿನ ಬಗ್ಗೆ ಎನ್‍ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ ಬಳಿಕ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸಲು ಆಗ್ರಹ ಕೇಳಿ ಬಂದಿತ್ತು. ಇದೀಗ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸುವ ಕುರಿತಂತೆ ಸಭೆಗಳು ನಡೆದಿವೆ ಎಂದು ಎನ್‍ಐಎ ಕಚೇರಿ ಆರಂಭಿಸುವ ಸಾಧ್ಯತೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಈಗಾಗಲೇ ಒಬ್ಬ ದಕ್ಷ ಗೃಹ ಸಚಿವರನ್ನು ಮಾಡಲಾಗಿದೆ. ಎನ್‍ಐಎ ಕುರಿತಂತೆ ಅವರು


















