ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸ ಎದುರು ಇಂದು ಮಹಿಳೆಯೊಬ್ಬರು ಏಕಾಂಗಿ ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದಾರೆ.ಡಾ.ಗಿರಿಜಾ ಎಂಬವವರು ಪ್ರತಿಭಟನೆ ನಡೆಸಿದ್ದು, ಮಾಣಿಕ್ ಶಾ ಪರೇಡ್ ಮೈದಾನದ ನಿರೂಪಕರ ಬದಲಾವಣೆ ಮಾಡಲು ಈ ವೇಳೆ ಆಗ್ರಹಿಸಿದ್ದಾರೆ. ಪ್ರತಿ ಸರ್ಕಾರಿ ಕಾರ್ಯಕ್ರಮಕ್ಕೆ ಇಬ್ಬರೇ ನಿರೂಪಕರಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ಕನ್ನಡದಲ್ಲಿ ಸಾಕಷ್ಟು
ಬೆಂಗಳೂರು: ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ತಿಳಿಸಿದರು. ಇಂದು ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರೂ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರಿಗೆ ಅವರು ಪ್ರತಿಕ್ರಿಯೆ ನೀಡಿ
2020-21 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆಗಸ್ಟ್ 9ರಂದು ಮಧ್ಯಾಹ್ನ 3.30ಕ್ಕೆ ಪ್ರಕಟಿಸೋದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಅವರು, ಜುಲೈ.19 ಮತ್ತು 22ರಂದು ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 9ರ ಸೋಮವಾರದ ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸೋದಾಗಿ ತಿಳಿಸಿದರು. ಕೊರೋನಾ ಭೀತಿಯ ನಡುವೆಯೂ ಈ ಬಾರಿ 8.72ಲಕ್ಷ
ರಾಜ್ಯ ಬಿಜೆಪಿ ಸರ್ಕಾರದಲ್ಲಿ ರೆಡ್ಡಿ ಜನಾಂಗದ ನಿರ್ಲಕ್ಷ್ಯ: 2 ವರ್ಷಗಳಿಂದ ರಾಜಕೀಯ ಅಧಿಕಾರ ನೀಡದೇ ಇರುವುದಕ್ಕೆ ಆಕ್ರೋಶ
ಬೆಂಗಳೂರು: ರಾಜ್ಯದ ರಾಜಕೀಯ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಮಹತ್ವದ ಕೊಡುಗೆ ನೀಡಿರುವ ರೆಡ್ಡಿ ಜನಾಂಗಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ಮಾನ ಹಾಗೂ ರಾಜಕೀಯ ಅವಕಾಶಗಳನ್ನು ನೀಡದೇ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕರ್ನಾಟಕ ರೆಡ್ಡಿ ಜನ ಸಂಘ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು. ರಾಜ್ಯದ ಆರೂವರೆ ಕೋಟಿ ಜನಸಂಖ್ಯೆಯಲ್ಲಿ ರೆಡ್ಡಿ ಸಮುದಾಯ ಸುಮಾರು 60 ಲಕ್ಷಕ್ಕೂ ಹೆಚ್ಚಿದ್ದು, ಸಚಿವ ಸಂಪುಟದಲ್ಲಿ
ಬಳ್ಳಾರಿ: ರಾಜ್ಯದ ನೂತನ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಖಾತೆ ಹಂಚಿಕೆ ಬೆನ್ನಲ್ಲೆ ಗಣಿನಾಡಿನ ಸಚಿವ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರಿಂದು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೇಳಿದ ಖಾತೆ ಕೊಟ್ಟಿಲ್ಲ , ಕೊಟ್ಟರೆ ಸರಿ ಇಲ್ಲದಿದ್ದರೆ ಶಾಸಕನಾಗಿಯಷ್ಟೇ ಮುಂದುವರೆಯುವೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ನಾನು ಕೇಳಿದ ಖಾತೆಯನ್ನು ನೀಡಿಲ್ಲ. ಇದು ನನಗೆ ಮಾಡಿದ ಅವಮಾನ ಎನ್ನಲ್ಲ. ನನಗೆ ನಿರಾಸೆಯಾಗಿದೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಸೇರ್ಪಡೆಗೊಂಡ ಸಚಿವರಿಗೆ ಇದೀಗ ಖಾತೆಗಳನ್ನು ಹಂಚಲಾಗಿದೆ. ಸುನಿಲ್ ಕುಮಾರ್ ಅವರಿಗೆ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಅರಗ ಜ್ಞಾನೇಂದ್ರ ಅವರಿಗೆ ಗೃಹಖಾತೆ ಬಿ.ಸಿ.ನಾಗೇಶ್ -ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶ್ರೀರಾಮುಲು- ಸಾರಿಗೆ ಮತ್ತು ಎಸ್ಟಿ ಕಲ್ಯಾಣ ಮುರುಗೇಶ್ ನಿರಾಣಿ- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಪ್ರಭುಚೌಹಾಣ್- ಪಶುಸಂಗೋಪನೆ ಎಸ್ಟಿ ಸೋಮಶೇಖರ್ –
ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕಲು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 16 ರವರೆಗೂ ಮಾರ್ಗಸೂಚಿ ಜಾರಿಯಲ್ಲಿರಲಿವೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮಹಾರಾಷ್ಟ್ರ,
ಮಂಗಳೂರು: ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ನೂತನವಾಗಿ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಹೇಳಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಬಂದ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಕೊರೊನಾ ಮೂರನೇ ಹಂತದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಇಂದು ಸಂಜೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ
ಕೋವಿಡ್ 19 ಸೋಂಕು ಹರಡುವಿಕೆ ತಡೆಯುವ ಕಾರಣದಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ,ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಶುಕ್ರವಾರ ರಾತ್ರಿಯಿಂದಲೇ ಕರ್ಫ್ಯೂ ಜಾರಿಗೆ ಬರಲಿದ್ದು, ಶನಿವಾರ ಮತ್ತು ಭಾನುವಾರ ಈ ನಾಲ್ಕು ಜಿಲ್ಲೆಗಳಲ್ಲಿ ಅಗತ್ಯ ವಸ್ತು ಮತ್ತು ಸೇವೆಗಳ ಹೊರತುಪಡಿಸಿ ಇತರ ಎಲ್ಲಾ
ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ