ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಕುರಿತಂತೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿ ಸ್ಥಾನ ಪಡೆದುಕೊಂಡ ಕೋಟ ಶ್ರೀನಿವಾಸ ಪೂಜಾರಿಯವರ ಹುಟ್ಟೂರಾದ ಕೋಟದ ಮನೆಯಲ್ಲಿ ಕುಟುಂಬಿಕರು ಸರಳವಾಗಿ ಸಂಭ್ರಮಿಸಿದರು. ಶ್ರೀನಿವಾಸ ಪೂಜಾರಿಯವರ ಸಚಿವರಾಗುವ ಪ್ರಮಾಣವಚನಕ್ಕೆ ಬೆಂಗಳೂರಿಗೆ ತೆರಳಿದ್ದರೂ ಕೂಡ ಪತ್ನಿ ಶಾಂತಾ ಅವರು ಮನೆಯಲ್ಲಿ ತಮ್ಮ ದೈನಂದಿನ ಕೆಲಸದಲ್ಲಿಯೇ ಮಗ್ನರಾಗಿದ್ದರು. ಕಾರ್ಯಕರ್ತರ ಸದ್ದು ಗದ್ದಲವಿದಲ್ಲದೆ ಕೋಟ ಅವರ ಮನೆ ಸಂಪೂರ್ಣ ಶಾಂತವಾಗಿತ್ತು. ಸಚಿವರಾಗಿ ಪ್ರಮಾಣ ವಚನ
ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ29 ಶಾಸಕರು ಸೇರ್ಪಡೆಗೊಂಡಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಮೊದಲಿಗೆ ಗೋವಿಂದ ಕಾರಜೋಳ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಳಿಕ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ, ಎಸ್. ಅಂಗಾರ, ಜೆ.ಸಿ.ಮಾಧುಸ್ವಾಮಿ, ಅರಗಜ್ಞಾನೇಂದ್ರ, ಡಾ. ಅಶ್ವಥ ನಾರಾಯಣ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಕೋಟಾ
ಇಂದು ಪ್ರಮಾಣವಚನ ಸ್ವೀಕರಿಸಲಿರುವ ನೂತನ 29 ಮಂದಿ ಶಾಸಕರ ಅಧಿಕೃತ ಪಟ್ಟಿ ಬಿಡುಗಡೆಗೊಂಡಿದೆ. 1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ 2.ಆರ್.ಅಶೋಕ್- ಪದ್ಮನಾಭ ನಗರ 3.ಬಿ.ಸಿ ಪಾಟೀಲ್ – ಹಿರೇಕೇರೂರು 4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ 5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು 6.ಉಮೇಶ್ ಕತ್ತಿ- ಹುಕ್ಕೇರಿ 7.ಎಸ್.ಟಿ.ಸೋಮಶೇಖರ್- ಯಶವಂತಪುರ 8.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ 9.ಬೈರತಿ ಬಸವರಾಜ – ಕೆ ಆರ್ ಪುರಂ
ಕಾರವಾರ ಜಿಲ್ಲೆಯ ಕದ್ರಾ ಅಣೆಕಟ್ಟು ಪ್ರದೇಶಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಮಾಜಿ ಶಾಸಕ ಸತೀಶ್ ಸೈಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಭೀಮಣ್ಣ ನಾಯಕ್ ಹಾಜರಿದ್ದರು.
ಕೊರೊನಾ ಮೂರನೆ ಅಲೆ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವುದು ರಾಜ್ಯ ಸರ್ಕಾರದ ಪ್ರಾಥಮಿಕ ಕೆಲಸವಾಗಬೇಕು.ಅಕ್ಕ ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಮೂರನೆ ಅಲೆ ಈಗಾಗಲೇ ಬಂದಿದ್ದು ಸೋಂಕು ಪ್ರಮಾಣ ಹೆಚ್ಚಾಗಿದೆ. ಈ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಬರುವವರ ಪ್ರಮಾಣ ಹೆಚ್ಚಾಗಿರುತ್ತದೆ ಹಾಗಾಗಿ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಕೇರಳದಿಂದ ರಾಜ್ಯದ ಕರಾವಳಿ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಹೆಚ್ಚು ಜನ ಬರುತ್ತಾರೆ, ರಾಜ್ಯದ ಗಡಿಗಳಲ್ಲಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಇಂದು ಬೆಂಗಳೂರಿನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿ.ಸೋಮಣ್ಣ, ಹೆಚ್.ಡಿ.ರೇವಣ್ಣನವರು ಜೊತೆಗಿದ್ದರು.
ಮೈಸೂರಿನಲ್ಲಿ ಶನಿವಾರ ನಡೆದ ಮೈಸೂರು ವಿಭಾಗೀಯ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಎಐಸಿಸಿ ವೀಕ್ಷಕ ಮಧು ಯಾಕ್ಷಿಗೌಡ, ಕೇಂದ್ರದ ಮಾಜಿ
ಕಳೆದ ಎರಡು ವರ್ಷಗಳಿಂದ ಸಭಾಧ್ಯಕ್ಷನಾಗಿ ನನ್ನ ಕಾರ್ಯಕ್ಷೇತ್ರವು ಕೇವಲ ಸದನಕ್ಕೆ ಅಥವಾ ವಿಧಾನಸಭೆ ಸಚಿವಾಲಯದ ಆಡಳಿತಕ್ಕೆ ಸೀಮಿತಗೊಳಿಸದೆ ಅತ್ಯಂತ ಕ್ರಿಯಾಶೀಲವಾಗಿ ಜವಾಬ್ಧಾರಿ ನಿರ್ವಹಿಸಿದ ತೃಪ್ತಿ ಇದೆಯೆಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕರ್ನಾಟಕ ವಿಧಾನಸಭೆ- ಎರಡು ವರ್ಷದ ಸಾಧನೆಗಳು” (2019-2021) ಪುಸ್ತಕ ಬಿಡುಗಡೆ ಮಾಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ
ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಶ್ರೀ ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ


















