ಮಂಗಳೂರು: ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಕಮಿಷನರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು,
ರಾಜ್ಯದಲ್ಲಿ ಮುಂಗಾರು ಮಳೆ ಹಲವೆಡೆ ವ್ಯಾಪಿಸಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಉತ್ತಮ ಮಳೆಯಾಗಿ ಜನಜೀವನ ವ್ಯಸ್ತಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗದಲ್ಲಿ ಜೂ.15ರಂದು
ಬೆಂಗಳೂರು : ಕರಾವಳಿ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಲ್ಲಿ ಸ್ಥಳೀಯ ಮೀನುಗಾರರಿಗೆ ಆದ್ಯತೆ ನೀಡುವ ಬಗ್ಗೆ ವಿಶೇಷ ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು. ಬೆಂಗಳೂರಿನ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಜೊತೆಗಿನ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಇನ್ನಷ್ಟು ವಿಸ್ತೃತ
CRPFನಲ್ಲಿ ಸುದೀರ್ಘ 22 ವರ್ಷ ದೇಶದ ವಿವಿಧ ಭಾಗಗಳಲ್ಲಿ ವಿವಿಧ ಹುದ್ದೆಗಳಾದ ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್ ಮತ್ತು ಎ.ಎಸ್.ಐ. ಆಗಿ ಸೇವೆ ಸಲ್ಲಿಸಿರುವ ಬೆಳಿಯಪ್ಪ ಗೌಡ ಇವರು ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ ಹೊಂದಿರುತ್ತಾರೆ. ಪ್ರಸ್ತುತ ಇವರು 133ನೇ ಬೆಟಾಲಿಯನ್ ರಾಂಚಿ ಜಾರ್ಖಂಡ್‌ನಲ್ಲಿ ಸೇವೆಯಲ್ಲಿರುತ್ತಾರೆ. ಕಡಬ ತಾಲ್ಲೂಕು ಐತೂರ್ ಗ್ರಾಮದ ಮುಂಡಡ್ಕ ಕೃಷ್ಣಮ್ಮ ಮತ್ತು ಬಿರ್ಮಣ್ಣ ಗೌಡ ಇವರ ಸುಪುತ್ರರಾಗಿರುವ ಇವರು ಪತ್ನಿ ವನಿತಾ ಹಾಗೂ ಜಗನ್ ಮತ್ತು
ಸ್ಕ್ವಾಡ್ರನ್ ಎನ್‌ಸಿಸಿ, ಮಂಗಳೂರು ವತಿಯಿಂದ 10 ದಿನಗಳ ಕಾಲ ವಾರ್ಷಿಕ ತರಬೇತಿ ಶಿಬಿರವನ್ನುಆಯೋಜಿಸಿರು. ಮೇ 24ರಂದ ಜೂನ್ 2ರ ವರೆಗೆ ವಾರ್ಷಿಕ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದಾರೆ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ 11 ವಿವಿಧ ಸಂಸ್ಥೆಗಳ 433 ಉತ್ಸಾಹಿ ಕೆಡೆಟ್‌ಗಳನ್ನು ಸಮಗ್ರ ಮತ್ತು ಸಮೃದ್ಧ ತರಬೇತಿ ಅನುಭವಕ್ಕಾಗಿ ಒಟ್ಟುಗೂಡಿಸಿದೆ. ಈ ಶಿಬಿರವು ಕೆಡೆಟ್‌ಗಳಲ್ಲಿ ದೇಶಭಕ್ತಿ, ಏಕತೆ, ಶಿಸ್ತು, ನಾಯಕತ್ವ ಮತ್ತು ಸೌಹಾರ್ದತೆಯನ್ನು ಬೆಳೆಸುವ
ಅಸ್ಸಾಂನಲ್ಲಿ ಕೂಡಾ ಭಾರಿ ಮಳೆಯಾಗುತ್ತಿದ್ದು, ರಸ್ತೆ ಸಾರಿಗೆ ಹಾಗೂ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ. ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಹಾಗೂ ಭೂಕುಸಿತದಲ್ಲಿ ಈವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 78,000ಕ್ಕೂ ಹೆಚ್ಚು ಮಂದಿ ತೊಂದರೆಗೊಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಬ್ರಹ್ಮಪುತ್ರ ಮತ್ತು ಬರಾಕ್ ಸೇರಿದಂತೆ 10 ನದಿಗಳು ಅಪಾಯ ಮಟ್ಟ ಮೀರಿ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ರವರು ಮಾಹಿತಿಯನ್ನು ನೀಡಿದರು. ಜಿಲ್ಲೆಯ ಜನತೆ ಶಾಂತಿ ಸೌಹಾರ್ದತೆಯನ್ನು ಬಯಸುತ್ತಿದ್ದಾರೆ. ಆದರೆ ಕೆಲವು ವಿಘ್ನ ಸಂತೋಷಗಳು ಜಿಲ್ಲೆಯ
ಕರಾವಳಿ ಜಿಲ್ಲೆಗಳಲ್ಲಿ ಶಾಂತಿ ಕದಡುವವರ ವಿರುದ್ಧ ಕಾನೂನು ರೀತಿಯಲ್ಲೇ ಕಠಿಣ ಕ್ರಮಕೈಗೊಳ್ಳುವ ಬಗ್ಗೆ ವಿಧಾನ ಪರಿಷತ್ ನ ಸದಸ್ಯರಾದ ಮಂಜುನಾಥ ಭಂಡಾರಿ ಅವರು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷದಂತಹ ಪ್ರಕರಣಗಳು ಮುಂದುವರಿದಿದ್ದು ಕೇವಲ ಕೆಲವು ತಿಂಗಳುಗಳ ಅಂತರದಲ್ಲಿ ಕೊಲೆ. ಮತ್ತು ಚೂರಿ ಇರಿತ ಪ್ರಕರಣಗಳು ನಡೆದಿದ್ದು, ಕೆಲವೇ ಕೆಲವು ಸಮಾಜಘಾತುಕ ಶಕ್ತಿಗಳಿಂದ ಕೋಮು ಸಂಘರ್ಷ ಘಟನೆಗಳು ಹಾಗೂ
ಸಕಲೇಶಪುರ: ತಾಲೂಕಿನ ಮಠಸಾಗರ ಗ್ರಾಮದಲ್ಲಿ ವ್ಯಾಪಾರ ಮಾಡುತ್ತಿದ್ದ ಮಹಿಳೆಯೊಬ್ಬರಿಂದ 25 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ಆರೋಪಿ ಸೈಯದ್ ಅಲಿ ನಡಾಫ್ ಬಿನ್ ಬಾಳಾಸಾಬ್ (27), ಗದಗ ಜಿಲ್ಲೆಯ ಹುಲ್ಲೂರು ಗ್ರಾಮದವನು, ಸಕಲೇಶಪುರ ನಗರ ಪೊಲೀಸರು ಸೆರೆಹಿಡಿದಿದ್ದಾರೆ. ಮಾರ್ಚ್ 25 ರಂದು ನಡೆದ ಈ ಕಳವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಸಿಸಿ ಕ್ಯಾಮರಾ ದೃಶ್ಯಗಳು ಹಾಗೂ ತಂತ್ರಜ್ಞಾನ ವಿಭಾಗದ ನೆರವಿನಿಂದ ಆರೋಪಿಯನ್ನು ಪತ್ತೆಹಚ್ಚಲು
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಸರಕಾರಿ ಶಾಲೆಗಳನ್ನು ಉಳಿಸುವ ವಿಶೇಷ ಯೋಜನೆ 300 ಟ್ರೀಸ್ ಇದರ ಸಮಾಲೋಚನ ಸಭೆ ನಡೆಸಿ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸುವಂತೆ ಮನವಿ ಮಾಡಿದರು. 300 ಟ್ರೀಸ್ ಸಮಿತಿ ರಚನೆ ಹಾಗೂ ಈ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅಳವಡಿಸುವ ಬಗ್ಗೆ ಶಿಕ್ಷಣ ಪ್ರೇಮಿಗಳು, ಅಧ್ಯಾಪಕರು, ದಾನಿಗಳು ಹಾಗೂ ಕಾರ್ಯಕರ್ತರಿಂದ ಸಲಹೆಗಳನ್ನು ಸ್ವೀಕರಿಸಿದರು. ಸಭೆಯಲ್ಲಿ, ಬೆಂಗಳೂರಿನಲ್ಲಿ ನೆಲೆಸಿರುವ