ಉತ್ತರ ಪ್ರದೇಶವು ಅತಿ ಹೆಚ್ಚು 75 ಜಿಲ್ಲೆಗಳನ್ನು ಹೊಂದಿದೆ. ಜನಸಂಖ್ಯೆ ಪ್ರಮಾಣದಲ್ಲಿ ಕಡಿಮೆ ಜಿಲ್ಲೆಗಳು ಇರುವ ರಾಜ್ಯ ಮಹಾರಾಷ್ಟ.ಹೆಚ್ಚು ಜಿಲ್ಲೆಗಳಿರುವ ಹತ್ತು ರಾಜ್ಯಗಳು ಹೀಗಿವೆ.ಉತ್ತರ ಪ್ರದೇಶ 75, ಮಧ್ಯ ಪ್ರದೇಶ 55, ರಾಜಸ್ತಾನ 41, ಬಿಹಾರ 38, ತಮಿಳುನಾಡು38, ಮಹಾರಾಷ್ಟ 36, ಅಸ್ಸಾಂ 35. ಛತ್ತೀಸಗಡ, ತೆಲಂಗಾಣ, ಗುಜರಾತ್ ರಾಜ್ಯಗಳು ತಲಾ ೩೩
ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಗ್ರಾಫಿಕ್ ಡಿಸೈನರ್ ಶ್ರೀ ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜೀವನ ಅನ್ನೋದು ಸದಾ ಗೆಲುವು ಅಲ್ಲ ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ ಇರಲಿ.ಸಾಮಾಜಿಕ ಜಾಲತಾಣ ವನ್ನು ಒಳಿತಿಗೆ ಬಳಸಿದ್ರೆ ಅದ್ಬುತ ಯಶಸ್ಸು ನಿಮ್ಮದಾಗತ್ತೆ ಎಂದರು.
18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಗಸ್ಟ್ 27 ರಿಂದ ಆಗಸ್ಟ್ 28 ರವರೆಗೆ ಜರುಗಲಿದ್ದು, ಸಾವಿರಾರು ಭಕ್ತರು ಇಲ್ಲಿಗ ಆಗಮಿಸಿ ಗಣಪನ ದರ್ಶನ ಪಡೆಯುತ್ತಾರೆ. ಅದಲ್ಲದೆ ಇಲ್ಲಿ ಆಗಮಿಸುವ ಭಕ್ತಾದಿಗಳಿಂದ ಕಾಣಿಕೆ ರೂಪದಿಂದ ಸಂಗ್ರಹವಾಗುವ ಹಣವನ್ನು ನಾವು ಬಡಬಗ್ಗರಿಗೆ ಹಾಗೂ ಅವರ ವೈದ್ಯಕೀಯ ಚಿಕಿತ್ಸೆ ಹಾಗೂ ಶಿಕ್ಷಣಕ್ಕೆ ನೀಡಿ ಅವರಿಗೆ ನೆರವಾಗುತ್ತೇವೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಶುಭದ ರಾವ್ ಮಾಧ್ಯಮದೊಂದಿಗೆ ಹೇಳಿದರು.ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ
ಇಲ್ಲಿನ ಸಾವ೯ಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ ಆ.27ರಿಂದ 31ರವರೆಗೆ ಸಮಾಜ ಮಂದಿರದಲ್ಲಿ ನಡೆಯಲಿರುವ 62ನೇ ವರ್ಷದ ಗಣೇಶೋತ್ಸವಕ್ಕೆ ಪೂರಕವಾಗಿ ಮಂಗಳವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಎಂಸಿಎಸ್ ಸೊಸೈಟಿ ಎದುರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.ಟ್ರಸ್ಟ್ ನ ಅಧ್ಯಕ್ಷ ನಾರಾಯಣ ಪಿ.ಎಂ., ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಸುರೇಶ್ ಪ್ರಭು, ಟ್ರಸ್ಟ್ ನ ಪ್ರಧಾನ ಕಾಯ೯ದಶಿ೯ ಸುದಶ೯ನ್
ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 42 ಪದಕ . ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.
ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ 17ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅಳಿಯೂರಿನ ಸರ್ಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ ಭಾಸ್ಕರ ಪಾಲಡ್ಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.
ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ತೆಗೆಯುವುದು ಮತ್ತು ಸಾಗಾಣಿಕೆಗೆ ನಿರ್ಬಂಧ ಹೇರಿರುವ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ಅ ರಾ ಪ್ರಭಾಕರ ಪೂಜಾರಿ ಮುಂದಾಳತ್ವದಲ್ಲಿ ಇಂದು ಜಾಥಾ ಕಾರ್ಯಕ್ರಮ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಘಟಕದ ಜಿಲ್ಲಾಧ್ಯಕ್ಷರಾದ ಅ ರಾ ಪ್ರಭಾಕರ ಪೂಜಾರಿ ಜಾಥಾ ಕಾರ್ಯಕ್ರಮದಲ್ಲಿ
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್‌ನ ಮಂಗಳೂರು ಶಾಖೆಯ ವಾರ್ಷಿಕ ಸಭೆಯು ನಡೆಯಿತು. ಸಭೆಯಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಮ್ಯಾನೇಜ್‌ಮೆಂಟ್ ಮಂಗಳೂರು ಶಾಖೆಯ ವಾರ್ಷಿಕ ಮಹಾಸಭೆಯು ಮಂಗಳೂರಿನ ಬಿಜೈನಲ್ಲಿರುವ ಹೋಟೆಲ್ ಓಷನ್ ಪರ್ಲ್ ಇನ್‌ನಲ್ಲಿ ನಡೆದಿದ್ದು, 2024-25 ರ ಅವಧಿಗೆ ಎಂಆರ್‌ಪಿಎಲ್‌ನ ಜನರಲ್ ಮ್ಯಾನೇಜರ್ ಸತೀಶ್ ಸತ್ಯನಾರಾಯಣ ಅವರನ್ನು ಶಾಖೆಯ
ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಉಡುಪಿ ಇಲ್ಲಿ ಉಡುಪಿ ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ “ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ 23 ಅಥ್ಲೆಟಿಕ್ ಮೀಟ್ – 2025” ರ ಸಮಾರೋಪ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.




























