ನವದೆಹಲಿ; ನಿರಂತರ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದಿಂದ ಯುವ ಜನತೆ ತತ್ತರಿಸುತ್ತಿದ್ದು, ರೈತ ವಿರೋಧಿ ನೀತಿಗಳು ಹಾಗೂ ಕೇಂದ್ರದ ಪೆಗಾಸಸ್ ಬೇಹುಗಾರಿಕೆ ವಿರೋಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ರಾಜಧಾನಿಯಲ್ಲಿಂದು ಸಂಸತ್ ಘೆರಾವ್ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ‍್ರೀನಿವಾಸ್ ಬಿ.ಬಿ. ಪ್ರದೇಶ ಯುವ ಕಾಂಗ್ರೆಸ್
ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್‍ಪ್ರೀತ್ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು.
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ವೆಲ್ಟರ್ ವೇಟ್ (69ಕೆಜಿ)ವಿಭಾಗದ ಸೆಮಿ ಫೈನಲ್ ನಲ್ಲಿ ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಸೋಲನುಭವಿಸಿದರು. ಈ ಮೂಲಕ ಅವರು ಕಂಚಿನ ಪದಕಕ್ಕೆ ತೃಪ್ತಿಪಟ್ಟರು. ಬುಧವಾರ ಟೋಕಿಯೊ ಒಲಿಂಪಿಕ್ಸ್ ನ ವನಿತೆಯರ 69 ಕೆಜಿ ವಿಭಾಗದಲ್ಲಿ ಬಾಕ್ಸರ್ ಲವ್ಲಿನಾ ಅವರು ತಮ್ಮ ಎದುರಾಳಿ ವಿಶ್ವಚಾಂಪಿಯನ್ ಟರ್ಕಿಯ ಬುಸೆನಾ ಸುರ್ಮೆನೆಲಿ ವಿರುದ್ಧ ಪರಾಜಯಗೊಳ್ಳುವ ಮೂಲಕ ಚಿನ್ನದ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾದಂತಾಗಿದೆ. 69ಕೆಜಿ
ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಮತ್ತು ಪುರುಷ ಹಾಕಿ ತಂಡ ಇತಿಹಾಸ ಬರೆದಿದೆ. ಪುರುಷರ ಹಾಕಿ ತಂಡ ಸೆಮಿ ಫೈನಲ್ ಪ್ರವೇಶಿಸಿದ ಮರುದಿನವೇ ಭಾರತದ ವನಿತೆಯರ ತಂಡ ಕೂಡಾ ಸೆಮಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಭಾರತ ತಂಡ 1-0 ಗೋಲುಗಳ ಅಂತರದಿಂದ ಸೋಲಿಸಿತು. ಭಾರತದ ಗುರ್ಜೀತ್ ಕೌರ್ 22ನೇ ನಿಮಿಷದಲ್ಲಿ ಗೋಲು ಗಳಿಸಿ ಭಾರತಕ್ಕೆ ಮುನ್ನಡೆ ಒದಗಿಸಿದರು. ನಂತರ ಸಮಬಲ ಸಾಧಿಸಲು ಆಸ್ಟ್ರೇಲಿಯಾ
ಭಾರತಕ್ಕೆ ಟೋಕಿಯೋ ಒಲಂಪಿಕ್ಸ್ ನಲ್ಲಿ ಮತ್ತೊಂದು ಪದಕವನ್ನು ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಗೆಲ್ಲುವ ಮೂಲಕ ಹೊತ್ತು ತಂದಿದ್ದಾರೆ. ತೀವ್ರ ಹಣಾಣಿಯಲ್ಲಿ ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಸತತ ಎರಡನೇ ಬಾರಿಗೆ ಕಂಚಿನ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ಕಂಚಿನ ಪದಕ ಸಲುವಾಗಿ ನಡೆದ ಪಂದ್ಯದಲ್ಲಿ ತಮ್ಮ ಶ್ರೇಷ್ಠ ಆಟ ಹೊರತಂದ ಸಿಂಧೂ, ವಿಶ್ವದ ಮಾಜಿ 3ನೇ ಶ್ರೇಯಾಂಕಿತ ಆಟಗಾರ್ತಿ ಚೀನಾದ ಹಿ ಬಿಂಗ್
ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಶ್ರೀ ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ
ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟರು. ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು ಜಪಾನ್ ನ 4ನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿಯವರನ್ನು 21-13 ಹಾಗೂ 22-20 ನೇರ ಸೆಟ್‌ಗಳ ಅಂತರದಿಂದ ರೋಚಕವಾಗಿ ಮಣಿಸಿದರು.
ಮುಖ್ಯ ಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರು ನೇತೃತ್ವದಲ್ಲಿ ಉಡುಪಿಯ ಕ್ಲಾಕ್ ಟವರ್ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ,ಜೈಕಾರ ಹಾಕಿ ಸಂಭ್ರಮಿಸಿದರು. ಇನ್ನು ಉಡುಪಿ ಜಿಲ್ಲಾ ಉಸ್ತುವಾರಿ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ
ಟೋಕಿಯೋ ಒಲಿಂಪಿಕ್ಸ್‌ನಲ್ಲಿ 49ಕೆ.ಜಿ ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ ಒಲಿಯುವ ಸಾಧ್ಯತೆ ಇದೆ. ಚೀನಾದ ಝಿಹುಯಿ ಅವರು ಚಿನ್ನದ ಪದಕ ಗೆದ್ದಿರುತ್ತಾರೆ. ಇದೀಗ ಹಿಂಪಡೆದ ಸಂಘಟಕರು ಚೀನಾದ ಝಿಹುಯಿ ಅವರನ್ನು ಡೋಪಿಂಗ್ ಪರೀಕ್ಷೆಗೆ ಒಳಪಡಿಸಲು ತೀರ್ಮಾನಿಸಿದ್ದು, ಒಂದು ವೇಳೆ ಝಿಹುಯಿ ಅವರು ಉದ್ದೀಪನ ಔಷಧಿ ಸೇವಿಸಿರುವುದು ಸಾಬೀತಾದಲ್ಲಿ ಅವರು ಪದಕವನ್ನು ಕಳೆದುಕೊಳ್ಳುವರು. ಇಂತಹ ಸಂದರ್ಭದಲ್ಲಿ ಎರಡನೇ ಸ್ಥಾನದಲ್ಲಿರುವ ಮೀರಾಬಾಯಿ ಚಾನು ಅವರನ್ನು