ವಿಟ್ಲ: ಸೋಣ ಅಮವಾಸ್ಯೆಯ ದಿನದಿಂದ ಬಾದ್ರಪದ ಶುಕ್ಲ ಚೌತಿ ಹಬ್ಬದ ದಿನದವರೆಗೆ ಸುಳ್ಳ ಮಲೆ ತೀರ್ಥ ಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ( ಏಣಿ) ಇಡುವ ಸಂಪ್ರದಾಯ ನಡೆಯಿತು. ಅನಾಧಿಕಾಲದಿಂದ ನಡೆದು ಬಂದ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು. ನಮ್ಮ ತುಳುನಾಡಿನಲ್ಲಿ ಅತ್ಯಂತ ಅಪರೂಪದ ವಿಶಿಷ್ಟ ತೀರ್ಥ ಕ್ಷೇತ್ರ ಎನಿಸಿದ ಐತಿಹಾಸಿಕ
ಪುತ್ತೂರು ಮತ್ತು ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಮೃತ ಮಹೋತ್ಸವದ ಪ್ರಯುಕ್ತ ಸೋಮವಾರ ಪುತ್ತೂರು – ದರ್ಬೆಯಿಂದ ವಿಟ್ಲದ ತನಕ ನಡೆದ ಸ್ವಾತಂತ್ರ್ಯೋತ್ಸವ ನಡಿಗೆಯ ಸಮಾರೋಪ ಸಮಾರಂಭ ವಿಟ್ಲದಲ್ಲಿ ನಡೆಯಿತು.ಕೆಪಿಸಿಸಿ ವಕ್ತಾರ ನಿಕೇತ್‍ರಾಜ್ ಮೌರ್ಯ ಅವರು ಸಮಾರೋಪ ಭಾಷಣ ಮಾಡಿ, ಮಾತನಾಡಿ .ದೇಶವನ್ನು ಭಾಷೆ, ಜಾತಿ ಹೆಸರಿನಲ್ಲಿ ಒಡೆಯುವ ಕೆಲಸವಾಗುತ್ತಿದೆ.ದೇಶದಲ್ಲಿ ಜನರಿಗೆ ರಾಷ್ಟ್ರ ಪ್ರಜ್ಞೆಯನ್ನು ಬೆಳೆಸುವ
ವಿಟ್ಲ: ಕಣಜದ ಹುಳುಗಳು ದಾಳಿ ನಡೆಸಿ ಹಿನ್ನೆಲೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಕೃಷ್ಣ ರವರ ಮೇಲೆ ನಿನ್ನೆ ಸಂಜೆ ವೇಳೆ ಪೆರುವಾಯಿ ಸಮೀಪ ಕಣಜದ ಹುಳುಗಳು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೇ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ
ವಿಟ್ಲ: ಯುವಕೇಸರಿ ಅಬೀರಿ ಅತಿಕಾರಬೈಲು ಚಂದಳಿಕೆ ಸಂಘಟನೆಯ ವತಿಯಿಂದ ಶ್ರಮದಾನ ನಡೆಯಿತು. ಅತಿಕಾರಬೈಲುವಿನಿಂದ ಚಂದಳಿಕೆ ಜಂಕ್ಷನ್ ವರೆಗೆ ಸುಮಾರು 2 ಕಿಲೋ ಮೀಟರ್ ದೂರದ ರಸ್ತೆಯ ಬದಿಯ ಹುಲ್ಲು ಮತ್ತು ಮರದ ಗೆಲ್ಲುಗಳನ್ನು ತೆರವುಗೊಳಿಸುವ ಸ್ವಚ್ಚತಾ ಶ್ರಮದಾನ ನಡೆಯಿತು. ಯುವಕೇಸರಿಯ 40 ಕಿಂತಲೂ ಹೆಚ್ಚು ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು. ವಿವಿಧ ಗ್ರಾಮ ಪಂಚಾಯತ್ ಸದಸ್ಯರು ಈ ಕಾರ್ಯಕ್ಕೆ ಸಾಥ್ ನೀಡಿದರು. ಈ ಸಂಧರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ನ
ವಿಟ್ಲ: ಕೇಪು ಕಲ್ಲಂಗಳದಿಂದ ತೋರಣಕಟ್ಟೆ ಸಂಪರ್ಕ ರಸ್ತೆಯ ಒಳ ರಸ್ತೆಯೊಂದರಲ್ಲಿ ಕಾರಿನಲ್ಲಿ ದನ ಸಾಗಾಟ ಮಾಡುತ್ತಿದ್ದು ಪತ್ತೆಯಾಗಿದೆ.ಕಾರಿನ ಹಿಂಭಾಗದಲ್ಲಿ ಎರಡು ಗೋವಿದ್ದು, ಕಾರಿದ ಹಿಂಭಾಗ ಹಾಗೂ ಮುಂಭಾಗದ ಗಾಜು ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೋಲೀಸರು ತೆರಳಿದ್ದು, ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಈ ರಸ್ತೆ ಸಾರಡ್ಕ ಚೆಕ್ ಪೋಸ್ಟ್ ಸಂಪರ್ಕಹೊಂದಿದ್ದು, ಚೆಕ್ ಪೋಸ್ಟ್ ಮೂಲಕವೇ ಗೋವು ಸಾಗಾಟ ಮಾಡಲಾಗುತ್ತಿತ್ತಾ ಎಂಬ ಅನುಮಾನ ಮೂಡುತ್ತಿದೆ.
ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.
ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಟ್ಟಡದ ಮೇಲ್ಭಾಗದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಫ್ಯಾಕ್ಟರಿ ಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೆÇಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದರೂ ಕಟ್ಟಡದಲ್ಲಿದ್ದ ಹಲವು ಮೆಷಿನ್, ಮತ್ತು ಹಾಳೆತಟ್ಟೆಗಳು ಸುಟ್ಟು ಕರಕಲಾಗಿದೆ. ಇದರಿಂದ ಲಕ್ಷಾಂತರ
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ವಿಟ್ಲ ಇದರ ವತಿಯಿಂದ ಮಹಿಳಾ ಘಟಕದ ನೇತೃತ್ವದಲ್ಲಿ ಆಟಿಡೊಂಜಿ ದಿನ ವಿಟ್ಲದ ಶಾಂತಿನಗರ ಅಕ್ಷಯ ಸಭಾಭವನದಲ್ಲಿ ನಡೆಯಿತು. ಪುತ್ತೂರು ಉಪತಹಶೀಲ್ದಾರ್ ಸುಲೋಚನಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಸತ್ಕಾರ್ಯಗಳಿಗೆ ಸ್ಪಂದಿಸಬೇಕು. ಹಳ್ಳಿಯಲ್ಲಿ ಮಳೆಗಾಲಕ್ಕೆ ಅವಶ್ಯವಿರುವ ವಿವಿಧ ವಸ್ತುಗಳನ್ನು ಸಂಗ್ರಹಿಸಿಡುವುದು ವಾಡಿಕೆ. ಆಟಿ ತಿಂಗಳ ಕಾಲಕ್ಕೆ ಇದು
ವಿಟ್ಲ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ ಮಧ್ಯೆ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಕೆಟ್ಟು ನಿಂತಿದ್ದರ ಪರಿಣಾಮ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿದೆ,ಸ್ಥಳದಲ್ಲಿ ಪೋಲಿಸರು ಮತ್ತು ಸೂರಿಕುಮೇರು ಪರಿಸರದ ಯುವಕರು ವಾಹನಗಳ ಸಂಚಾರಕ್ಕೆ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ಸಾರೆ
ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತವಾದ ಘಟನೆ ರಂದು ನಡೆದಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರು ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿಯಲ್ಲಿ ಹರಿಯುತ್ತಿರುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಜಲಾವೃತವಾಗಿದೆ. ಇದರಿಂದಾಗಿ ಈ ದಾರಿಯಾಗಿ ವಾಹನ ಸಂಚಾರಕ್ಕೆ